Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ| ಬನ್ನಿ ಮಂಟಪದ ಕಾಂಪೌಂಡ್...

ವಿಜಯನಗರ| ಬನ್ನಿ ಮಂಟಪದ ಕಾಂಪೌಂಡ್ ಕುಸಿದು 3 ವರ್ಷ; ಗೇಟ್ ಅಳವಡಿಸದಿರುವ ಬಗ್ಗೆ ಸಾರ್ವಜನಿಕರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ20 Oct 2026 9:09 PM IST
share
ವಿಜಯನಗರ| ಬನ್ನಿ ಮಂಟಪದ ಕಾಂಪೌಂಡ್ ಕುಸಿದು 3 ವರ್ಷ; ಗೇಟ್ ಅಳವಡಿಸದಿರುವ ಬಗ್ಗೆ ಸಾರ್ವಜನಿಕರ ಆಕ್ರೋಶ

ಕೊಟ್ಟೂರು (ವಿಜಯನಗರ) : ನಾಡಿನ ಕೋಟ್ಯಂತರ ಭಕ್ತರ ಆರಾಧ್ಯದೈವ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ಬನ್ನಿ ಮುಡಿಯುವ ಪವಿತ್ರ ಸ್ಥಳಕ್ಕೆ ಸೂಕ್ತ ರಕ್ಷಣೆಯೇ ಇಲ್ಲದಂತಾಗಿದೆ. ಮೂರು ವರ್ಷಗಳ ಹಿಂದೆ ನಿರ್ಮಿಸಿದ್ದ ಕಾಂಪೌಂಡ್ ಕುಸಿದು ಬಿದ್ದಿದ್ದು, ಮುಖ್ಯ ದ್ವಾರಕ್ಕೂ ಗೇಟ್ ಅಳವಡಿಸಿಲ್ಲ ಎಂದು ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಕೊಟ್ಟೂರು ಪಟ್ಟಣದ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ಫಿರಂಗಿ (ಖಡ್ಗ) ಬನ್ನಿ ಮುಡಿಯುವ ಸ್ಥಳವು ಧಾರ್ಮಿಕವಾಗಿ ಮಹತ್ವ ಪಡೆದಿದೆ. ಆದರೆ ಇಂತಹ ಪವಿತ್ರ ಸ್ಥಳದ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳದಿರುವುದು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸಂಬಂಧಪಟ್ಟ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಬನ್ನಿ ಮಂಟಪದ ಸುತ್ತಲೂ ಮೂರು ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿದು ಬಿದ್ದಿದೆ ಎನ್ನಲಾಗಿದ್ದು, ಸ್ಥಳಕ್ಕೆ ಯಾರಾದರೂ ಸುಲಭವಾಗಿ ಪ್ರವೇಶಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಖ್ಯ ದ್ವಾರಕ್ಕೂ ಗೇಟ್ ಇಲ್ಲದಿರುವುದರಿಂದ ಸ್ಥಳದ ಭದ್ರತೆ ಹಾಗೂ ಪಾವಿತ್ರ್ಯ ಕಾಪಾಡುವುದು ಸವಾಲಾಗಿದೆ.

ಧಾರ್ಮಿಕ ಆಚರಣೆಗಳು ನಡೆಯುವ ಸ್ಥಳಕ್ಕೆ ಕನಿಷ್ಠ ಮೂಲಭೂತ ಭದ್ರತಾ ವ್ಯವಸ್ಥೆಯನ್ನಾದರೂ ಕಲ್ಪಿಸಬೇಕಾದ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಬನ್ನಿ ಮಂಟಪದ ಆವರಣವನ್ನು ವರ್ಷಕ್ಕೆ ಎರಡು ಬಾರಿ ಮಾತ್ರ ಸ್ವಚ್ಛಗೊಳಿಸಲಾಗುತ್ತದೆ. ನಂತರ ಸ್ಥಳದ ನಿರ್ವಹಣೆಯ ಬಗ್ಗೆ ಯಾರೂ ಗಮನಹರಿಸುವುದಿಲ್ಲ ಎಂದು ಸ್ಥಳೀಯ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧಾರ್ಮಿಕ ಆಚರಣೆಗಳು ನಡೆಯುವ ಸ್ಥಳದ ಸ್ವಚ್ಛತೆ ಮತ್ತು ನಿರ್ವಹಣೆ ನಿರಂತರವಾಗಿ ನಡೆಯಬೇಕಿದೆ. ಹಬ್ಬ-ಹರಿದಿನಗಳ ಸಂದರ್ಭದಲ್ಲಿ ಮಾತ್ರ ಸ್ವಚ್ಛಗೊಳಿಸಿ, ನಂತರ ನಿರ್ಲಕ್ಷಿಸುವುದು ಸರಿಯಾದ ಆಡಳಿತ ಕ್ರಮವೇ ಎಂಬ ಪ್ರಶ್ನೆಯನ್ನೂ ಸ್ಥಳೀಯರು ಮುಂದಿಟ್ಟಿದ್ದಾರೆ.

ಶ್ರೀ ಗುರು ಕೊಟ್ಟೂರೇಶ್ವರ ದೇವಸ್ಥಾನಕ್ಕೆ ಕೋಟ್ಯಂತರ ರೂಪಾಯಿ ಆದಾಯವಿದೆ ಎಂದು ಹೇಳಲಾಗುತ್ತಿದ್ದರೂ, ಧಾರ್ಮಿಕ ಕಾರ್ಯಗಳು ನಡೆಯುವ ಪ್ರಮುಖ ಸ್ಥಳಕ್ಕೆ ಕಾಂಪೌಂಡ್ ಮತ್ತು ಗೇಟ್ ವ್ಯವಸ್ಥೆ ಕಲ್ಪಿಸದಿರುವುದು ವಿಪರ್ಯಾಸ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬನ್ನಿ ಮಂಟಪದ ಕುಸಿದ ಕಾಂಪೌಂಡ್ ಅನ್ನು ತಕ್ಷಣ ದುರಸ್ತಿಗೊಳಿಸಿ, ಮುಖ್ಯ ದ್ವಾರಕ್ಕೆ ಗೇಟ್ ಅಳವಡಿಸಬೇಕು. ಸ್ಥಳದ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದರ ಜೊತೆಗೆ ಅನಧಿಕೃತ ಪ್ರವೇಶ ಮತ್ತು ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಈ ಕುರಿತು ದೇವಸ್ಥಾನದ ಆಡಳಿತ ಮಂಡಳಿ, ಧಾರ್ಮಿಕ ದತ್ತಿ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಶಾಸಕ ಕೆ. ನೇಮಿರಾಜ್ ನಾಯ್ಕ್ ಅವರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಬನ್ನಿ ಮಂಟಪದ ಅಭಿವೃದ್ಧಿ ಮತ್ತು ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Tags

VijayanagaraBanni Mantapacompound
share
ವಾರ್ತಾಭಾರತಿ
ವಾರ್ತಾಭಾರತಿ
Next Story
X