ವಿಜಯನಗರ | ಎತ್ತಿನ ಬಂಡಿಗೆ ಬೈಕ್ ಢಿಕ್ಕಿ : ಸ್ಥಳದಲ್ಲೇ ಇಬ್ಬರು ಮೃತ್ಯು

ಸಾಂದರ್ಭಿಕ ಚಿತ್ರ
ವಿಜಯನಗರ : ಎತ್ತಿನ ಬಂಡಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರಿಬ್ಬರು ಮೃತಪಟ್ಟ ಘಟನೆ ಹರಪನಹಳ್ಳಿ ತಾಲೂಕಿನ ಸಾಸಿವೆಹಳ್ಳಿ-ಹುಣಸಿಹಳ್ಳಿ ಹತ್ತಿರ ನಡೆದಿದೆ ಎಂದು ವರದಿಯಾಗಿದೆ.
ಮೃತರನ್ನು ಶಿವಕುಮಾರ್ ( 37) ರವಿಕುಮಾರ್ (41) ಎಂದು ಗುರುತಿಸಲಾಗಿದೆ.
ಘಟನೆಯ ಮಾಹಿತಿ ಪಡೆದ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಹಾಗೂ ಹರಪನಹಳ್ಳಿ ಡಿವೈಎಸ್ಪಿ ಡಾ. ಸಂತೋಷ್ ಚೌವ್ಹಾಣ್ ಅವರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಚಿಗಟೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.
Next Story





