Vijayanagara | ಹೊಸಪೇಟೆಯಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಜನ್ಮದಿನಾಚರಣೆ

ಹೊಸಪೇಟೆ/ವಿಜಯನಗರ: ಮಾಜಿ ಪ್ರಧಾನಿ, ದಿವಂಗತ ಇಂದಿರಾಗಾಂಧಿ ಅವರ ಜನ್ಮದಿನದ ಅಂಗವಾಗಿ ಹೊಸಪೇಟೆ ನಗರದ ಪುನೀತ್ ರಾಜ್‌ಕುಮಾರ್ ಕ್ರೀಡಾಂಗಣದಲ್ಲಿರುವ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಲಾಯಿತು.
ಹೊಸಪೇಟೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ಮಾತನಾಡಿ, ದೇಶದ ಅಭಿವೃದ್ಧಿ, ಬಡವರ ಕಲ್ಯಾಣ ಹಾಗೂ ರಾಷ್ಟ್ರದ ಏಕತೆ ಮತ್ತು ಸಮಗ್ರತೆಗಾಗಿ ಇಂದಿರಾಗಾಂಧಿ ಅವರು ಸಲ್ಲಿಸಿದ ಸೇವೆ ಅಪಾರವಾಗಿದೆ. ಅವರ ದಿಟ್ಟ ನಿರ್ಧಾರಗಳು, ಜನಪರ ಯೋಜನೆಗಳು ಹಾಗೂ ಆಡಳಿತದ ವೈಖರಿ ಇಂದಿಗೂ ಸ್ಮರಣೀಯವಾಗಿದ್ದು, ದೇಶದ ರಾಜಕೀಯ ಇತಿಹಾಸದಲ್ಲಿ ಅವರ ಕೊಡುಗೆ ಅಜರಾಮರವಾಗಿದೆ ಎಂದು ಸ್ಮರಿಸಿದರು.
ಈ ಸಂದರ್ಭದಲ್ಲಿ ಹೊಸಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪಕ್ಷದ ಹಿರಿಯ ಮುಖಂಡರಾದ ಡಿ. ವೆಂಕಟರಮಣ, ಸೋಮಶೇಖರ್ ಬಣ್ಣದಮನೆ, ಸಣ್ಣಮಾರಪ್ಪ, ಸಣ್ಣೀರಪ್ಪ, ರಘುಕುಮಾರ್, ಮೌಲಾ ಉಸೇನ್, ಶಿವಕುಮಾರ್, ಲಕ್ಷ್ಮೀದೇವಿ, ಗೋಪಾಲಕೃಷ್ಣ, ಶ್ರೀನಿವಾಸ್, ಪ್ರಮೋದ್, ಪುಣ್ಯಮೂರ್ತಿ, ಗಣೇಶ್, ಬುಜ್ಜಿ, ಸಜ್ಜದ್ ಖಾನ್, ಅಶ್ವಿನಿ, ಅನಿತಾ, ರವಿ ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.




