Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಗಣೇಶೋತ್ಸವ ಸರಳವಾಗಿ...

Vijayanagara | ಗಣೇಶೋತ್ಸವ ಸರಳವಾಗಿ ಆಚರಿಸಿ, ಸರ್ಕಾರದ ನಿಯಮ ಪಾಲಿಸಿ : ಡಿವೈಎಸ್ಪಿ ಮಲ್ಲೇಶ ದೊಡ್ಮನಿ

ವಾರ್ತಾಭಾರತಿವಾರ್ತಾಭಾರತಿ12 Sept 2026 9:44 PM IST
share
Vijayanagara | ಗಣೇಶೋತ್ಸವ ಸರಳವಾಗಿ ಆಚರಿಸಿ, ಸರ್ಕಾರದ ನಿಯಮ ಪಾಲಿಸಿ : ಡಿವೈಎಸ್ಪಿ ಮಲ್ಲೇಶ ದೊಡ್ಮನಿ

ಕೊಟ್ಟೂರು (ವಿಜಯನಗರ): ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಿ, ಆದರೆ ಸರ್ಕಾರದ ಎಲ್ಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಡಿವೈಎಸ್ಪಿ ಮಲ್ಲೇಶ ದೊಡ್ಮನಿ ಹೇಳಿದರು.

ವಿಜಯನಗರ ಜಿಲ್ಲಾ ಪೊಲೀಸ್ ಹಾಗೂ ಕಂದಾಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ನಡೆದ ಗಣೇಶೋತ್ಸವದ ಪೂರ್ವಭಾವಿ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮೆರವಣಿಗೆ ಹಾಗೂ ವಿಸರ್ಜನೆ ವೇಳೆ ಕಾನೂನು ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚಿಸಿದರು.

ಬ್ಯಾನರ್ ಹಾಗೂ ಫ್ಲೆಕ್ಸ್‌ಗಳನ್ನು ಅಗತ್ಯ ಅನುಮತಿ ಪಡೆದು ಮಾತ್ರ ಅಳವಡಿಸಬೇಕು. ರಸ್ತೆ ಸಂಚಾರಕ್ಕೆ ಅಥವಾ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಹಾಗೂ ಪಟ್ಟಣದ ಸೌಂದರ್ಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಬ್ಯಾನರ್‌ಗಳನ್ನು ಹಾಕಬಾರದು ಎಂದು ತಿಳಿಸಿದರು.

ಗಣೇಶ ಮೆರವಣಿಗೆ ವೇಳೆ ವಿದ್ಯುತ್ ತಂತಿಗಳು, ಶಿಥಿಲಗೊಂಡಿರುವ ವಿದ್ಯುತ್ ಕಂಬಗಳು ಹಾಗೂ ಇತರೆ ಅಪಾಯಕಾರಿ ಸ್ಥಳಗಳ ಬಗ್ಗೆ ವಿಶೇಷ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಒಂದು ಕ್ಷಣದ ನಿರ್ಲಕ್ಷ್ಯ ಸಂಭ್ರಮವನ್ನು ದುರಂತವನ್ನಾಗಿಸಬಾರದು. ಬೆಂಕಿ ಹಾಗೂ ವಿದ್ಯುತ್ ಅವಘಡ ತಡೆಯುವುದು ಎಲ್ಲರ ಜವಾಬ್ದಾರಿ ಎಂದು ಹೇಳಿದರು.

ಮಳೆ ಕೊರತೆ ಹಾಗೂ ಜನರು ಎದುರಿಸುತ್ತಿರುವ ಸಂಕಷ್ಟದ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿ ಆಚರಣೆಗಿಂತ ಸರಳ ಮತ್ತು ಸಾಂಕೇತಿಕ ಗಣೇಶೋತ್ಸವಕ್ಕೆ ಆದ್ಯತೆ ನೀಡುವಂತೆ ಸಾರ್ವಜನಿಕರು ಮತ್ತು ಗಣೇಶ ಮಂಡಳಿಗಳಿಗೆ ಮನವಿ ಮಾಡಿದರು.

ಗಣೇಶೋತ್ಸವವನ್ನು ಶಾಂತಿ, ಸುರಕ್ಷತೆ ಮತ್ತು ಸೌಹಾರ್ದತೆಯಿಂದ ಯಶಸ್ವಿಗೊಳಿಸಲು ಯುವಕ ಮಂಡಳಿಗಳು, ಗಣೇಶೋತ್ಸವ ಸಮಿತಿಗಳು, ಗ್ರಾಮಸ್ಥರು ಹಾಗೂ ಮುಖಂಡರು ಪೊಲೀಸ್ ಮತ್ತು ಕಂದಾಯ ಇಲಾಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ತಹಶೀಲ್ದಾರ್ ಅಮರೇಶ್ ಜಿ.ಕೆ., ತಾಪಂ ಇಒ ಡಾ. ಆನಂದಕುಮಾರ್, ಪೊಲೀಸ್ ಇನ್ಸ್‌ಪೆಕ್ಟರ್ ದುರ್ಗಪ್ಪ ಡಿ., ಪಿಎಸ್‌ಐ ಗೀತಾಂಜಲಿ ಶಿಂಧೆ, ಎಎಸ್‌ಐ ಮಹಾಬಲೇಶ ಸೇರಿದಂತೆ ಪೊಲೀಸ್ ಸಿಬ್ಬಂದಿ, ವಿವಿಧ ಗ್ರಾಮಗಳ ಯುವಕರು, ಮುಖಂಡರು ಹಾಗೂ ಗಣೇಶ ಮಂಡಳಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X