Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ರಾಷ್ಟ್ರೀಯ ಹೆದ್ದಾರಿ...

Vijayanagara | ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಡಿಸಿ ಕವಿತಾ ಮನ್ನಿಕೇರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ17 Jun 2026 6:18 PM IST
share
Vijayanagara | ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಡಿಸಿ ಕವಿತಾ ಮನ್ನಿಕೇರಿ ಸೂಚನೆ

ವಿಜಯನಗರ(ಹೊಸಪೇಟೆ : ರಾಷ್ಟ್ರೀಯ ಹೆದ್ದಾರಿ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ವಲಯಗಳಿಂದ ಜಿಲ್ಲೆಯಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ಹೆದ್ದಾರಿ ಕಾಮಗಾರಿಗಳಿಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಯಾವುದೇ ಪ್ರಮುಖ ಗೊಂದಲಗಳಿಲ್ಲ. ಆದಾಗ್ಯೂ ಕೆಲವೆಡೆ ಕಾಮಗಾರಿ ವಿಳಂಬವಾಗುತ್ತಿರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಹೆದ್ದಾರಿ ನಿರ್ಮಾಣ ಪ್ರದೇಶಗಳಲ್ಲಿ ಸಮರ್ಪಕ ಸರ್ವಿಸ್ ರಸ್ತೆಗಳ ಕೊರತೆ ಹಾಗೂ ಅವೈಜ್ಞಾನಿಕ ಸಂಪರ್ಕ ರಸ್ತೆಗಳ ಕಾರಣದಿಂದ ಅಪಘಾತಗಳು ಸಂಭವಿಸುತ್ತಿರುವ ಕುರಿತು ದೂರುಗಳು ಬಂದಿವೆ. ಇಂತಹ ಸ್ಥಳಗಳನ್ನು ಗುರುತಿಸಿ ಅಗತ್ಯ ತಿದ್ದುಪಡಿ ಕ್ರಮ ಕೈಗೊಳ್ಳಬೇಕು. ಸೂಚನಾ ಫಲಕ, ಬ್ಯಾರಿಕೇಡ್, ರಾತ್ರಿ ವೇಳೆ ಎಚ್ಚರಿಕೆ ಬ್ಲಿಂಕರ್ ಹಾಗೂ ಸೌರ ವಿದ್ಯುತ್ ದೀಪಗಳನ್ನು ಅಳವಡಿಸಬೇಕು. ಅಲ್ಲದೆ ವೈಜ್ಞಾನಿಕ ರೀತಿಯಲ್ಲಿ ಸರ್ವಿಸ್ ರಸ್ತೆ ಹಾಗೂ ಅಂಡರ್‌ಪಾಸ್‌ಗಳನ್ನು ನಿರ್ಮಿಸಬೇಕು ಎಂದು ತಾಕೀತು ಮಾಡಿದರು.

ಡಣಾಪುರ ವ್ಯಾಪ್ತಿಯ ಒಂದು ಹಾಗೂ ಆಲೂರು ಸಮೀಪದ ಎರಡು ಸೇರಿದಂತೆ ಒಟ್ಟು ಮೂರು ಪ್ರಮುಖ ಸೇತುವೆಗಳ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕಮಲಾಪುರ ಮತ್ತು ವೆಂಕಟಾಪುರ ಸುತ್ತಮುತ್ತ ಕಳೆದ ಆರು ತಿಂಗಳಲ್ಲಿ ಮೂರು ಚಿರತೆಗಳು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವುದನ್ನು ಉಲ್ಲೇಖಿಸಿದ ಜಿಲ್ಲಾಧಿಕಾರಿಗಳು, ವನ್ಯಜೀವಿಗಳ ಸಂರಕ್ಷಣೆಗಾಗಿ ಹೆದ್ದಾರಿ ಮಾರ್ಗಗಳಲ್ಲಿ ಬ್ಯಾರಿಕೇಡ್ ಅಳವಡಿಸಬೇಕು ಎಂದು ಸೂಚಿಸಿದರು.

ಕಾಮಗಾರಿಗಾಗಿ ಕಡಿಯಲಾದ ಮರಗಳಿಗೆ ಪರ್ಯಾಯವಾಗಿ ಹೆದ್ದಾರಿಯ ಇಕ್ಕೆಲಗಳಲ್ಲಿ ಹೊಸ ಗಿಡಗಳನ್ನು ಕಡ್ಡಾಯವಾಗಿ ನೆಟ್ಟು ಅವುಗಳನ್ನು ಸಂರಕ್ಷಿಸಬೇಕು ಎಂದು ಹೆದ್ದಾರಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದರು. ಈ ಕುರಿತು ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ಡಿವೈಎಸ್ಪಿ ಪಿ. ಮುರಳೀಧರ, ಉಪ ವಿಭಾಗಾಧಿಕಾರಿ ವಿವೇಕಾನಂದ, ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಉಪಸ್ಥಿತರಿದ್ದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ಡಿವೈಎಸ್ಪಿ ಪಿ.ಮುರಳೀಧರ, ಉಪ ವಿಭಾಗಾಧಿಕಾರಿ ವಿವೇಕಾನಂದ, ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ ಹಾಗೂ ಗುತ್ತಿಗೆದಾರರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X