Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಎಸ್‌ಐಆರ್ ಪ್ರಕ್ರಿಯೆ...

Vijayanagara | ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ಸಿಪಿಐನಿಂದ ಮನವಿ : ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ28 Sept 2026 6:55 PM IST
share
Vijayanagara | ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ಸಿಪಿಐನಿಂದ ಮನವಿ : ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ

ಕೊಟ್ಟೂರು/ವಿಜಯನಗರ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಶೀಲನೆ (ಎಸ್‌ಐಆರ್) ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿಯ ಕುರಿತು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಕೊಟ್ಟೂರು ತಾಲೂಕು ಘಟಕದ ವತಿಯಿಂದ ಸೋಮವಾರ ತಹಸೀಲ್ದಾರ್ ಅಮರೇಶ್ ಜಿ.ಕೆ. ಅವರ ಮೂಲಕ ಪ್ರಧಾನಮಂತ್ರಿ ಮತ್ತು ಭಾರತ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ ಸಿಪಿಐ ಮುಖಂಡರು, ಎಸ್‌ಐಆರ್ ಪ್ರಕ್ರಿಯೆಯಿಂದ ಮತದಾರರ ಪಟ್ಟಿಯಲ್ಲಿ ಹೆಸರುಗಳ ಸೇರ್ಪಡೆ ಮತ್ತು ಅಳಿಸುವಿಕೆ ಕುರಿತಂತೆ ಆತಂಕಗಳು ವ್ಯಕ್ತವಾಗಿವೆ ಎಂದು ಹೇಳಿದ್ದು, ಚುನಾವಣಾ ಪ್ರಕ್ರಿಯೆ ಪಾರದರ್ಶಕವಾಗಿರಬೇಕು ಎಂದು ಆಗ್ರಹಿಸಿದ್ದಾರೆ.

ಮತದಾರರ ಡೇಟಾಬೇಸ್‌ನ ಕೇಂದ್ರೀಕರಣ, ರಾಜ್ಯ ಮತ್ತು ಕ್ಷೇತ್ರ ಮಟ್ಟದ ಅಧಿಕಾರಿಗಳ ಪ್ರವೇಶಕ್ಕೆ ಸಂಬಂಧಿಸಿದ ನಿರ್ಬಂಧಗಳು ಹಾಗೂ ತಂತ್ರಾಂಶ ಬಳಕೆಯ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿರುವ ವಿಷಯಗಳನ್ನು ಉಲ್ಲೇಖಿಸಿ, ಈ ಎಲ್ಲ ಅಂಶಗಳ ಕುರಿತು ಸ್ಪಷ್ಟನೆ ಮತ್ತು ಪಾರದರ್ಶಕತೆ ಅಗತ್ಯ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಮತದಾರರ ಪಟ್ಟಿ ನಿರ್ವಹಣೆ ವಿಕೇಂದ್ರೀಕೃತ ಮತ್ತು ಪಾರದರ್ಶಕವಾಗಿರಬೇಕು. ಅರ್ಹ ಮತದಾರರ ಹಕ್ಕುಗಳಿಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಚುನಾವಣಾ ಆಯೋಗ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಿಪಿಐ ಒತ್ತಾಯಿಸಿದೆ.

ಸಿಪಿಐ ಮುಂದಿಟ್ಟ ಪ್ರಮುಖ ಬೇಡಿಕೆಗಳು :

► ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು.

► ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಬೇಕು.

► ಮತದಾರರ ಪಟ್ಟಿಯಿಂದ ತಪ್ಪಾಗಿ ಹೊರಗಿಡಲಾಗಿದೆ ಎಂದು ಹೇಳಲಾದ ಮತದಾರರ ಹೆಸರುಗಳನ್ನು ಮರುಸ್ಥಾಪಿಸಬೇಕು.

►ಭಾರತ ಚುನಾವಣಾ ಆಯೋಗದ ಸ್ವತಂತ್ರ ಹಾಗೂ ಪಾರದರ್ಶಕ ಕಾರ್ಯನಿರ್ವಹಣೆಯನ್ನು ಖಾತ್ರಿಪಡಿಸಬೇಕು.

► ಚುನಾವಣಾ ಆಯುಕ್ತರ ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ತರಬೇಕು.

ಈ ಸಂದರ್ಭದಲ್ಲಿ ಸಿಪಿಐ ಕೊಟ್ಟೂರು ತಾಲೂಕು ಕಾರ್ಯದರ್ಶಿ ಕೆ. ರೇಣುಕಮ್ಮ, ಸಹ ಕಾರ್ಯದರ್ಶಿ ಕೆ. ಕೊಟ್ರೇಶ್, ದಲಿತ ಸಂಘಟನೆಯ ತಾಲೂಕು ಅಧ್ಯಕ್ಷ ತೆಗ್ಗಿನಕೇರಿ ಕೊಟ್ರೇಶ್, ತಾಲೂಕು ಸಹ ಕಾರ್ಯದರ್ಶಿ ರಸೂಲ್ ಹಾಗೂ ಪ್ರಮುಖ ಮುಖಂಡ ರಾಜೇಗೌಡ ಉಪಸ್ಥಿತರಿದ್ದರು.

Tags

SIRCPIvijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X