Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಸರ್ಕಾರಿ ಕಚೇರಿಗಳಲ್ಲಿ...

Vijayanagara | ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ಲೋಪ, ಭ್ರಷ್ಟಾಚಾರ ಸಹಿಸುವುದಿಲ್ಲ: ನ್ಯಾ.ಬಿ.ಎಸ್.ಪಾಟೀಲ್ ಎಚ್ಚರಿಕೆ

ಪ್ರಗತಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ7 Nov 2026 7:42 PM IST
share
Vijayanagara | ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ಲೋಪ, ಭ್ರಷ್ಟಾಚಾರ ಸಹಿಸುವುದಿಲ್ಲ: ನ್ಯಾ.ಬಿ.ಎಸ್.ಪಾಟೀಲ್ ಎಚ್ಚರಿಕೆ

ವಿಜಯನಗರ (ಹೊಸಪೇಟೆ) : ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸುವುದು ಪ್ರತಿಯೊಬ್ಬ ಅಧಿಕಾರಿ ಹಾಗೂ ನೌಕರರ ಕರ್ತವ್ಯವಾಗಿದೆ. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ, ಕಡತ ವಿಲೇವಾರಿಯಲ್ಲಿ ವಿಳಂಬ ಹಾಗೂ ಸಾರ್ವಜನಿಕರ ಕೆಲಸಗಳಿಗೆ ಅಡ್ಡಿಪಡಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಎಚ್ಚರಿಕೆ ನೀಡಿದರು.

ನವೆಂಬರ್ 6ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ನಗರಸಭೆ, ಪ್ರಾದೇಶಿಕ ಸಾರಿಗೆ ಇಲಾಖೆ, ಭೂದಾಖಲೆಗಳ ಇಲಾಖೆ, ತಾಲ್ಲೂಕು ಕಚೇರಿ, ಹಾಸ್ಟೆಲ್ ಹಾಗೂ ಅಬಕಾರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಕಚೇರಿಗಳಲ್ಲಿ ಲೋಕಾಯುಕ್ತ ತಂಡ ಸತತ ಎರಡು ದಿನಗಳ ಕಾಲ ಪರಿಶೀಲನೆ ನಡೆಸಿದೆ. ಈ ಸಂದರ್ಭದಲ್ಲಿ ಹಲವು ಲೋಪದೋಷಗಳು ಕಂಡುಬಂದಿದ್ದು, ಕೆಲವು ಪ್ರಕರಣಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸಮರ್ಪಕ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ (ಸುಮೋಟೋ) ಪ್ರಕರಣ ದಾಖಲಿಸಲಾಗುವುದು. ಮತ್ತೊಂದೆಡೆ, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಕೆಲಸವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಭ್ರಷ್ಟಾಚಾರದ ಸ್ವರೂಪ ಬದಲಾಗಿದ್ದು, ಡಿಜಿಟಲ್ ವಹಿವಾಟುಗಳ ಮೂಲಕವೂ ಅವ್ಯವಹಾರ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಈ ಕುರಿತು ಸಮಗ್ರ ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ಹೊಸಪೇಟೆ ನಗರಸಭೆಯಲ್ಲಿ 15.90 ಕೋಟಿ ರೂ. ಹಣದ ಲೆಕ್ಕ ಹೊಂದಾಣಿಕೆಯಾಗಿಲ್ಲ :

ಹೊಸಪೇಟೆ ನಗರಸಭೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ 1,590.60 ಲಕ್ಷ ರೂ. ಮುಂಗಡ ಹಣದ ಲೆಕ್ಕ ಹೊಂದಾಣಿಕೆಯಾಗದಿರುವುದು ಪತ್ತೆಯಾಗಿದೆ. ಅಲ್ಲದೆ, 777 ವಾಣಿಜ್ಯ ಮಳಿಗೆಗಳಿಂದ ತೆರಿಗೆ ವಸೂಲಿ ಮಾಡದಿರುವುದು ಹಾಗೂ ಕಸ ವಿಲೇವಾರಿಯಲ್ಲಿ ಲೋಪದೋಷಗಳು ಕಂಡುಬಂದಿವೆ. ಈ ಎಲ್ಲ ವಿಚಾರಗಳ ಕುರಿತು ಕೈಗೊಂಡ ಕ್ರಮಗಳ ಸಮಗ್ರ ವರದಿ ಸಲ್ಲಿಸುವಂತೆ ನಗರಸಭೆ ಆಯುಕ್ತರಿಗೆ ಸೂಚಿಸಿದರು.

ಎಲ್ಲೆಂದರಲ್ಲಿ ಕಸ ಎಸೆಯುವ ಸಾರ್ವಜನಿಕರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಈ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.

ಬಳ್ಳಾರಿ ಮಹಾನಗರ ಪಾಲಿಕೆಯ ಆಡಳಿತ ವೈಖರಿಗೆ ಅಸಮಾಧಾನ :

ಬಳ್ಳಾರಿ ಮಹಾನಗರ ಪಾಲಿಕೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆಗಾಗಿ ಭೇಟಿ ನೀಡಿದ ಸಂದರ್ಭದಲ್ಲಿ ಏಳು ಸಿಬ್ಬಂದಿ ಕಡತಗಳ ವೀಕ್ಷಣೆಗೆ ಸಹಕರಿಸಿಲ್ಲ. ಈ ಸಿಬ್ಬಂದಿಯನ್ನು ಲೋಕಾಯುಕ್ತರ ಸಮಕ್ಷಮದಲ್ಲಿ ವಿಚಾರಣೆ ನಡೆಸಿದಾಗ ಸಮರ್ಪಕ ಮಾಹಿತಿ ನೀಡಿಲ್ಲ. ಹೀಗಾಗಿ ಅವರು ನಿರ್ವಹಿಸುವ ಎಲ್ಲ ಕಡತಗಳನ್ನು ಪರಿಶೀಲಿಸಿ ಸಮಗ್ರ ವರದಿ ಸಲ್ಲಿಸುವಂತೆ ಬಳ್ಳಾರಿ ಜಿಲ್ಲಾಧಿಕಾರಿಗೆ ಸೂಚಿಸಿದರು.

ಪಾಲಿಕೆ ಆಯುಕ್ತರಿಗೆ ತಮ್ಮ ಸಿಬ್ಬಂದಿಯ ಮೇಲೆ ಹಿಡಿತವಿಲ್ಲದಿರುವುದು ಕಂಡುಬರುತ್ತಿದೆ. ಇದು ಭ್ರಷ್ಟ ಆಡಳಿತದ ಸ್ವರೂಪವಾಗಿದೆ ಎಂದು ಪಾಲಿಕೆ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಕೆರೆಗಳ ಒತ್ತುವರಿ ತೆರವಿಗೆ ಸೂಚನೆ :

ವಿಜಯನಗರ ಜಿಲ್ಲೆಯಲ್ಲಿ 219 ಕೆರೆಗಳಿದ್ದರೆ, ಬಳ್ಳಾರಿ ಜಿಲ್ಲೆಯಲ್ಲಿ 107 ಕೆರೆಗಳಿವೆ. ಕೆರೆಗಳ ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ. ಕೆರೆಗಳಿಗೆ ನೀರು ತುಂಬಿಸುವುದರಿಂದ ಬರಗಾಲದ ಪರಿಸ್ಥಿತಿಯನ್ನು ಸುಲಭವಾಗಿ ಎದುರಿಸಬಹುದು. ತುಂಗಭದ್ರ ಜಲಾಶಯ ಇರುವುದರಿಂದ ಹೆಚ್ಚಿನ ನೀರನ್ನು ಕೆರೆಗಳಿಗೆ ತುಂಬಿಸಲು ಅವಕಾಶವಿದೆ. ಜಿಲ್ಲೆಯಲ್ಲಿ ಸಾಕಷ್ಟು ಕಂಪನಿಗಳಿದ್ದು, ಅವುಗಳ ಸಹಕಾರದೊಂದಿಗೆ ಅಂತರ್ಜಲ ಸಂರಕ್ಷಣಾ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಿದರು.

ಕೇವಲ ಮಾಲಿನ್ಯ ನಿಯಂತ್ರಣ ಮಾಡುವುದಷ್ಟೇ ನಮ್ಮ ಕೆಲಸವಲ್ಲ. ಪರಿಸರ ಮತ್ತು ಜಲಮೂಲಗಳನ್ನು ಸಂರಕ್ಷಿಸುವುದೂ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಭೂದಾಖಲೆ ಇಲಾಖೆ ಸಿಬ್ಬಂದಿ ವಿರುದ್ಧ ಅಸಮಾಧಾನ :

ಹೊಸಪೇಟೆ ಎಡಿಎಲ್‌ಆರ್ ಕಚೇರಿಯ ಡಿ ಗ್ರೂಪ್ ನೌಕರನ ಮೊಬೈಲ್‌ನಲ್ಲಿ ಲಕ್ಷಾಂತರ ರೂಪಾಯಿ ವರ್ಗಾವಣೆಯಾಗಿರುವ ವಿಚಾರವನ್ನು ಪ್ರಸ್ತಾಪಿಸಿದ ಅವರು, ಈ ಹಣದ ವಹಿವಾಟಿನ ಮೂಲ ಮತ್ತು ಉದ್ದೇಶದ ಕುರಿತು ಪರಿಶೀಲನೆ ನಡೆಸಿ ವರದಿ ನೀಡುವಂತೆ ಎಡಿಎಲ್‌ಆರ್‌ಗೆ ಸೂಚಿಸಿದರು.

ಬಳ್ಳಾರಿ ಡಿಡಿಎಲ್‌ಆರ್ ಕಚೇರಿಯಲ್ಲಿ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ. ಮೇಲಧಿಕಾರಿಗಳು ಭೇಟಿ ನೀಡಿದ ಸಂದರ್ಭದಲ್ಲಿಯೂ ಸಿಬ್ಬಂದಿ ಜವಾಬ್ದಾರಿಯುತವಾಗಿ ವರ್ತಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಯೊಂದು ಇಲಾಖೆಯಲ್ಲೂ ಮೇಲಧಿಕಾರಿಗಳು ಹಾಗೂ ಗಣ್ಯ ವ್ಯಕ್ತಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಅದರ ವಿವರ ದಾಖಲಿಸಲು ಪ್ರತ್ಯೇಕ ವಹಿ ಇಡುವುದು ಕಡ್ಡಾಯ. ಇದನ್ನು ಎಲ್ಲ ಇಲಾಖೆಗಳಲ್ಲೂ ಪರಿಶೀಲಿಸಬೇಕು ಎಂದರು.

ಉಪನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಸಿಸಿಟಿವಿ ಅಳವಡಿಸಿದ್ದರೂ ಅವು ಕಾರ್ಯನಿರ್ವಹಿಸುತ್ತಿಲ್ಲ. ಈ ಕುರಿತು ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾ ನೋಂದಣಾಧಿಕಾರಿಗೆ ಸೂಚಿಸಿದರು.

ಬಳ್ಳಾರಿಯ ನಿವೇಶನವೊಂದರಲ್ಲಿ ಈಗಾಗಲೇ ಆರ್‌ಸಿಸಿ ಕಟ್ಟಡ ನಿರ್ಮಾಣವಾಗಿದ್ದು, ಕಟ್ಟಡವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಲಾಗುತ್ತಿದೆ. ಆದರೂ ದಾಖಲೆಗಳಲ್ಲಿ ಖಾಲಿ ನಿವೇಶನವೆಂದು ನಮೂದಿಸಿ ನೋಂದಣಿ ಮಾಡಲಾಗಿದೆ. ಇದರಿಂದ ಸರ್ಕಾರಕ್ಕೆ ಬರಬೇಕಾದ ಆದಾಯಕ್ಕೆ ವಂಚನೆಯಾಗಿರುವ ಪ್ರಕರಣದ ಬಗ್ಗೆಯೂ ಅವರು ಪ್ರಸ್ತಾಪಿಸಿದರು. ಇಂತಹ ಕೃತ್ಯಗಳು ಸಾರ್ವಜನಿಕ ಹಣಕ್ಕೆ ನಷ್ಟ ಉಂಟುಮಾಡುವ ಗಂಭೀರ ಲೋಪಗಳಾಗಿವೆ ಎಂದು ಹೇಳಿದರು.

ಹೊಸಪೇಟೆ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಕಳೆದ ಕೆಲವೇ ತಿಂಗಳಲ್ಲಿ ಪ್ರಥಮ ದರ್ಜೆ ಸಹಾಯಕರೊಬ್ಬರು ಹಂತ ಹಂತವಾಗಿ ಫೋನ್‌ಪೇ ಮೂಲಕ 3.29 ಲಕ್ಷ ರೂ. ಹಣ ಪಡೆದಿರುವುದು ಗಮನಕ್ಕೆ ಬಂದಿದೆ. ಯಾವ ಕಾರಣಕ್ಕಾಗಿ ಈ ಹಣ ಪಾವತಿಯಾಗಿದೆ ಎಂಬುದನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.

ಒಂದೇ ಕೊಠಡಿಯಲ್ಲಿ 81 ವಿದ್ಯಾರ್ಥಿಗಳು: ಶಾಲೆಯ ದುಸ್ಥಿತಿಗೆ ತರಾಟೆ

ಹೊಸಪೇಟೆಯ ನೆಹರೂ ಕಾಲೋನಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕೇವಲ ನಾಲ್ಕು ಕೊಠಡಿಗಳಿವೆ. ಮಹಿಳೆಯರಿಗೆ ಒಂದೇ ಶೌಚಾಲಯವಿದ್ದು, ಶಿಕ್ಷಕರಿಗೂ ಪ್ರತ್ಯೇಕ ಶೌಚಾಲಯವಿಲ್ಲ. ವಿದ್ಯಾರ್ಥಿಗಳು ಕೊಳಚೆ ನೀರಿನಲ್ಲಿಯೇ ನಡೆದು ಶಾಲೆಗೆ ಬರಬೇಕಾದ ಪರಿಸ್ಥಿತಿಯಿದೆ. ಕೆಲವರು ಬೆಂಚಿನ ಮೇಲೆ ಕುಳಿತರೆ, ಇನ್ನು ಕೆಲವರು ನೆಲದ ಮೇಲೆ ಕುಳಿತು ಪಾಠ ಕೇಳುತ್ತಿದ್ದಾರೆ.

ಮೂಲಸೌಕರ್ಯಗಳ ಕೊರತೆಯ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವೂ ದೊರೆಯುತ್ತಿಲ್ಲ. ಇದರಿಂದ ಬಡ ಮಕ್ಕಳ ಭವಿಷ್ಯ ರೂಪುಗೊಳ್ಳುವುದಾದರೂ ಹೇಗೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನು (ಡಿಡಿಪಿಐ) ಪ್ರಶ್ನಿಸಿದರು. ಈ ವೇಳೆ ಸಮರ್ಪಕ ಉತ್ತರ ದೊರೆಯದ ಹಿನ್ನೆಲೆಯಲ್ಲಿ ಈ ಕುರಿತು ಲೋಕಾಯುಕ್ತರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗುವುದು. ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದರು.

ವಸತಿ ನಿಲಯದ ಅವ್ಯವಸ್ಥೆಗೆ ತರಾಟೆ :

ಬಳ್ಳಾರಿಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ 252 ವಿದ್ಯಾರ್ಥಿಗಳಿದ್ದು, ಅವರಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿರಂತರವಾಗಿ ಗೈರಾಗುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ವಸತಿ ನಿಲಯದಲ್ಲಿ ಸ್ವಚ್ಛತೆಯ ಕೊರತೆ, ಪ್ರಯೋಗಾಲಯವನ್ನು ತೆರೆಯದೆ ಮುಚ್ಚಿಟ್ಟಿರುವುದು ಸೇರಿದಂತೆ ಹಲವು ಲೋಪಗಳು ಕಂಡುಬಂದಿವೆ.

ವಸತಿ ನಿಲಯದಲ್ಲಿ ಸ್ವಚ್ಛತೆ ಇಲ್ಲದೆ ದುರ್ವಾಸನೆ ಹರಡುತ್ತಿದೆ. ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ನಿರ್ಲಕ್ಷ್ಯ ವಹಿಸಿರುವುದು ಗಂಭೀರ ವಿಚಾರವಾಗಿದೆ. ವಿದ್ಯಾರ್ಥಿಗಳನ್ನು ಪ್ರಾಣಿಗಳಿಗಿಂತ ಕಡೆಯಾಗಿ ನಿರ್ವಹಿಸಲಾಗುತ್ತಿದೆ ಎಂಬ ಆತಂಕ ವ್ಯಕ್ತಪಡಿಸಿದ ಅವರು, ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸಿದರು.

ಮಕ್ಕಳ ವಿಚಾರದಲ್ಲಿ ಬದ್ಧತೆ ಮುಖ್ಯ. ಭವಿಷ್ಯದ ಪೀಳಿಗೆ ನಿಮ್ಮ ಕೈಯಲ್ಲಿದೆ. ಅವರ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪಡಿತರ ಅಕ್ರಮ ಸಾಗಣೆ ತಡೆಗೆ ಸಿಸಿಟಿವಿ ಅಳವಡಿಸಿ :

ಗೋದಾಮುಗಳಿಂದ ಲೋಡ್‌ಗಟ್ಟಲೆ ಪಡಿತರ ಅಕ್ರಮವಾಗಿ ಸಾಗಣೆಯಾಗುತ್ತಿರುವುದು ಹಾಗೂ ವಿವಿಧ ಅವ್ಯವಹಾರಗಳು ನಡೆಯುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಗೋದಾಮುಗಳ ಬಳಿ ಸಿಸಿಟಿವಿ ಅಳವಡಿಸಿ ನಿರಂತರ ನಿಗಾ ವಹಿಸಬೇಕು ಎಂದು ಸೂಚಿಸಿದರು.

ಹೊಸಪೇಟೆ ತಾಲ್ಲೂಕು ಕಚೇರಿಯಲ್ಲಿ ಡಿಜಿಟಲ್ ವಹಿವಾಟು ಪರಿಶೀಲನೆ :

ಹೊಸಪೇಟೆ ತಾಲ್ಲೂಕು ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರನೊಬ್ಬ ಆಧಾರ್ ನೋಂದಣಿಗೆ ಪಡೆಯಲಾದ ಶುಲ್ಕದ ಹಣವನ್ನು ತನ್ನ ಬಳಿ ಇಟ್ಟುಕೊಂಡಿರುವ ವಿಚಾರ ಗಮನಕ್ಕೆ ಬಂದಿದೆ. ಈ ಹಣದ ಕುರಿತು ಸಮಗ್ರ ವರದಿ ನೀಡುವಂತೆ ತಹಶೀಲ್ದಾರ್ ಅವರಿಗೆ ಸೂಚಿಸಿದರು.

ಒಟ್ಟಾರೆ, ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾರದರ್ಶಕವಾಗಿ ಹಾಗೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ಕೆಲಸಗಳಲ್ಲಿ ಅನಗತ್ಯ ವಿಳಂಬ, ಕರ್ತವ್ಯ ಲೋಪ ಹಾಗೂ ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು. ಪರಿಶೀಲನೆಯಲ್ಲಿ ಕಂಡುಬಂದಿರುವ ಪ್ರತಿಯೊಂದು ಲೋಪದೋಷಗಳ ಕುರಿತು ಕೈಗೊಂಡ ಕ್ರಮಗಳ ಸಮಗ್ರ ವರದಿ ಸಲ್ಲಿಸಬೇಕು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಲೋಕಾಯುಕ್ತ ಅಪರ ನಿಬಂಧಕರಾದ ರಾಜಶೇಖರ್, ಅನ್ಬುಗೌಡ ಪಾಟೀಲ್, ಕಾರ್ಯದರ್ಶಿ ಶ್ರೀನಾಥ್, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಬಳ್ಳಾರಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗರಿಮಾ ಪನ್ವಾರ್, ಬಳ್ಳಾರಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೊಹಮ್ಮದ್ ಹ್ಯಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ, ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪನ್ನೇಕರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X