Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಋತುಮಾನದ ಇನ್ಫ್ಲುಯೆಂಜಾ...

Vijayanagara | ಋತುಮಾನದ ಇನ್ಫ್ಲುಯೆಂಜಾ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಡಿಎಚ್‌ಒ ಸಲಹೆ

ವಾರ್ತಾಭಾರತಿವಾರ್ತಾಭಾರತಿ25 Aug 2026 6:43 PM IST
share
Vijayanagara | ಋತುಮಾನದ ಇನ್ಫ್ಲುಯೆಂಜಾ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಡಿಎಚ್‌ಒ ಸಲಹೆ

ವಿಜಯನಗರ (ಹೊಸಪೇಟೆ) : ಋತುಮಾನದ ಇನ್ಫ್ಲುಯೆಂಜಾ ಸಾಂಕ್ರಾಮಿಕ ರೋಗವಾಗಿದ್ದು, ನಿರ್ಲಕ್ಷಿಸಿದರೆ ಗಂಭೀರ ಪರಿಣಾಮ ಉಂಟಾಗುವ ಸಾಧ್ಯತೆ ಇದೆ. ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಲಿಂಗರಾಜು ಸಲಹೆ ನೀಡಿದ್ದಾರೆ.

ಇನ್ಫ್ಲುಯೆಂಜಾದ ಪ್ರಮುಖ ಲಕ್ಷಣಗಳಲ್ಲಿ ಹೆಚ್ಚಿನ ಜ್ವರ, ನಿರಂತರ ಕೆಮ್ಮು, ಗಂಟಲು ನೋವು, ದೇಹದ ನೋವು, ಶಕ್ತಿ ಹೀನತೆ, ಚಳಿ-ನಡುಕ ಹಾಗೂ ತಲೆನೋವು ಸೇರಿವೆ. ಇಂತಹ ಲಕ್ಷಣಗಳು ಕಂಡುಬಂದರೆ ನಿರ್ಲಕ್ಷಿಸದೆ ವೈದ್ಯರನ್ನು ಸಂಪರ್ಕಿಸಬೇಕು ಎಂದು ತಿಳಿಸಿದ್ದಾರೆ.

ಜ್ವರ ಅಥವಾ ಕೆಮ್ಮು ಇರುವವರು ಜನಸಂದಣಿ ಪ್ರದೇಶಗಳಲ್ಲಿ ಮಾಸ್ಕ್ ಧರಿಸಬೇಕು. ಕೈಗಳನ್ನು ಸಾಬೂನಿನಿಂದ ನಿಯಮಿತವಾಗಿ ತೊಳೆಯುವುದು, ಸಾಕಷ್ಟು ನೀರು ಕುಡಿಯುವುದು ಹಾಗೂ ವಿಶ್ರಾಂತಿ ಪಡೆಯುವುದು ಅಗತ್ಯ. ಜ್ವರ ಅಥವಾ ಉಸಿರಾಟದ ತೊಂದರೆ ತೀವ್ರವಾಗಿದ್ದರೆ, ಅಥವಾ 2–3 ದಿನಗಳಿಗಿಂತ ಹೆಚ್ಚು ಕಾಲ ಮುಂದುವರಿದರೆ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿ ವೈದ್ಯಕೀಯ ಸಲಹೆ ಪಡೆಯಬೇಕು ಎಂದರು.

ಜಿಲ್ಲೆಯಲ್ಲಿ ಇನ್ಫ್ಲುಯೆಂಜಾ ಪ್ರಕರಣಗಳ ಶೀಘ್ರ ಪತ್ತೆ, ಸಮಯೋಚಿತ ಚಿಕಿತ್ಸೆ ಹಾಗೂ ನಿಯಂತ್ರಣಕ್ಕಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಖಾಸಗಿ ಆರೋಗ್ಯ ಸಂಸ್ಥೆಗಳೊಂದಿಗೆ ಸಮನ್ವಯದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಏನು ಮಾಡಬಾರದು: ರೋಗಲಕ್ಷಣಗಳಿರುವಾಗ ಕಣ್ಣು, ಮೂಗು ಹಾಗೂ ಬಾಯಿಯನ್ನು ಪದೇಪದೇ ಮುಟ್ಟಬಾರದು. ಸ್ವಯಂ ಔಷಧೋಪಚಾರ ಮಾಡಬಾರದು. ಕೈಕುಲುಕುವುದನ್ನು ಹಾಗೂ ಜನಸಂದಣಿ ಪ್ರದೇಶಗಳಿಗೆ ತೆರಳುವುದನ್ನು ತಪ್ಪಿಸಬೇಕು. ಬಳಸಿದ ಕರವಸ್ತ್ರ ಅಥವಾ ನ್ಯಾಪ್ಕಿನ್‌ಗಳನ್ನು ಮರುಬಳಕೆ ಮಾಡಬಾರದು. ರೋಗಲಕ್ಷಣಗಳು ಕಂಡುಬಂದರೆ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವೈದ್ಯಕೀಯ ಸಲಹೆ ಪಡೆಯಬೇಕು ಎಂದು ಡಾ. ಲಿಂಗರಾಜು ತಿಳಿಸಿದ್ದಾರೆ.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X