Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಪಲ್ಸ್ ಪೋಲಿಯೋ ಅಭಿಯಾನ...

Vijayanagara | ಪಲ್ಸ್ ಪೋಲಿಯೋ ಅಭಿಯಾನ ಯಶಸ್ಸಿಗೆ ಜಿಲ್ಲಾಧಿಕಾರಿ ಕರೆ

ವಾರ್ತಾಭಾರತಿವಾರ್ತಾಭಾರತಿ19 Jun 2026 7:08 PM IST
share
Vijayanagara | ಪಲ್ಸ್ ಪೋಲಿಯೋ ಅಭಿಯಾನ ಯಶಸ್ಸಿಗೆ ಜಿಲ್ಲಾಧಿಕಾರಿ ಕರೆ
ಜೂ.28ರಿಂದ ಜು.1ರವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ವಿಜಯನಗರ(ಹೊಸಪೇಟೆ) : ಜೂ.28ರಿಂದ ಜು.1ರವರೆಗೆ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ರಿಂದ 5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡಬೇಕು. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಯಾವುದೇ ಪೋಲಿಯೋ ಪ್ರಕರಣ ವರದಿಯಾಗದಿದ್ದರೂ ನಿರ್ಲಕ್ಷ್ಯ ವಹಿಸುವಂತಿಲ್ಲ. ಲಸಿಕಾ ಕಾರ್ಯಕ್ರಮವನ್ನು ಮೂರು ಹಂತಗಳಲ್ಲಿ ನಡೆಸಲಾಗುತ್ತಿದ್ದು, ಮೊದಲ ದಿನ ಬೂತ್‌ಗಳಲ್ಲಿ, ಎರಡನೇ ದಿನ ಶಾಲಾ ಆವರಣಗಳಲ್ಲಿ ಹಾಗೂ ಅಂತಿಮ ಹಂತದಲ್ಲಿ ಮನೆ ಮನೆಗೆ ತೆರಳಿ ಮಕ್ಕಳಿಗೆ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ 15.31 ಲಕ್ಷ ಜನಸಂಖ್ಯೆಯಲ್ಲಿ 0-5 ವರ್ಷದೊಳಗಿನ 1,29,680 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಇದಕ್ಕಾಗಿ 1,033 ಪೋಲಿಯೋ ಬೂತ್‌ಗಳು, 973 ತಂಡಗಳು ಹಾಗೂ 2,176 ಲಸಿಕಾದಾರರನ್ನು ನಿಯೋಜಿಸಲಾಗಿದೆ. ಇಟ್ಟಂಗಿ ಭಟ್ಟಿ ಸೇರಿದಂತೆ 509 ಅಪಾಯಕಾರಿ ಪ್ರದೇಶಗಳನ್ನು ಗುರುತಿಸಲಾಗಿದ್ದು, ಅಲ್ಲಿನ ಮಕ್ಕಳು ಲಸಿಕೆಯಿಂದ ವಂಚಿತರಾಗದಂತೆ ವಿಶೇಷ ಗಮನ ಹರಿಸಲಾಗುವುದು ಎಂದರು.

ಪೋಷಕರು ಸುಳ್ಳು ವದಂತಿಗಳಿಗೆ ಕಿವಿಗೊಡದೆ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು. ಪೋಲಿಯೋ ಲಸಿಕೆ ಸಂಪೂರ್ಣ ಸುರಕ್ಷಿತವಾಗಿದ್ದು, ಅಂಗವೈಕಲ್ಯ ಮತ್ತು ವೈರಾಣು ಹರಡುವಿಕೆಯನ್ನು ತಡೆಯಲು ಪರಿಣಾಮಕಾರಿಯಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿದ್ಧಪಡಿಸಿರುವ ವಿಶೇಷ ಕ್ಯೂಆರ್ ಕೋಡ್‌ನ್ನು ಜಿಲ್ಲಾಧಿಕಾರಿ ಉದ್ಘಾಟಿಸಿದರು. ಈ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಜಿಲ್ಲೆಯ ಎಲ್ಲಾ ಪೋಲಿಯೋ ಲಸಿಕಾ ಕೇಂದ್ರಗಳ ಮಾಹಿತಿ ಹಾಗೂ ಹತ್ತಿರದ ಕೇಂದ್ರಕ್ಕೆ ತೆರಳುವ ಮಾರ್ಗದ ವಿವರ ಕೂಡ ಲಭ್ಯವಾಗಲಿದೆ. ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಂಡು ಮಕ್ಕಳಿಗೆ ಲಸಿಕೆ ನೀಡುವಂತೆ ಅವರು ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಲ್.ಆರ್. ಶಂಕರ್ ನಾಯ್ಕ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಜಂಬಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಷಣ್ಮುಖ ನಾಯ್ಕ, ಕುಟುಂಬ ಕಲ್ಯಾಣಾಧಿಕಾರಿ ಡಾ. ವಿನಯ್ ಸೇರಿದಂತೆ ಆರೋಗ್ಯ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X