Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಸಂವಿಧಾನ ಜಾಗೃತಿ ಮೂಲಕ...

Vijayanagara | ಸಂವಿಧಾನ ಜಾಗೃತಿ ಮೂಲಕ ಸೌಹಾರ್ದ ಸಂದೇಶ

ವಾರ್ತಾಭಾರತಿವಾರ್ತಾಭಾರತಿ25 May 2026 7:56 PM IST
share
Vijayanagara | ಸಂವಿಧಾನ ಜಾಗೃತಿ ಮೂಲಕ ಸೌಹಾರ್ದ ಸಂದೇಶ

ಹೊಸಪೇಟೆ/ವಿಜಯನಗರ: ಎಲ್ಲಾ ಜಾತಿ–ಧರ್ಮದವರು ಬಿ.ಆರ್.ಅಂಬೇಡ್ಕರ್ ನೀಡಿರುವ ಸಂವಿಧಾನದ ಅಡಿಯಲ್ಲಿ ಸಮಾನತೆಯಿಂದ ಬದುಕುತ್ತಿದ್ದೇವೆ. ಸಮಾಜದಲ್ಲಿ ಪರಸ್ಪರ ಸೌಹಾರ್ದ, ಸಹಬಾಳ್ವೆ ಹಾಗೂ ಮಾನವೀಯ ಮೌಲ್ಯಗಳ ಅರಿವು ಹೆಚ್ಚಾಗಬೇಕು ಎಂಬ ಸಂದೇಶದೊಂದಿಗೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಬುದ್ಧ ಬಸವ ಅಂಬೇಡ್ಕರ್ ಸಮಾನ ವೇದಿಕೆಯ ವತಿಯಿಂದ ಜಾಗೃತಿ ಕಾರ್ಯಕ್ರಮ ನಡೆಯಿತು.

ನಗರದ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು.

ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಧರ್ಮನ ಗೌಡ ಅವರಿಗೆ ಗ್ಲೋಬಲ್ ಅಚೀವರ್ ಅವಾರ್ಡ್ ಲಭಿಸಿದ ಹಿನ್ನೆಲೆ ವಿಶೇಷವಾಗಿ ಅಭಿನಂದಿಸಲಾಯಿತು. ಲೇಖಕಿ ನೂರ್ ಜಹಾನ್ ಹಾಗೂ ನರೇಗಾ ಯೋಜನೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಶಹನಾಜ್ ಅವರನ್ನೂ ವೇದಿಕೆಯ ವತಿಯಿಂದ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಭರತ್, ಸಮಾಜದಲ್ಲಿ ಜಾತಿ–ಮತ ಭೇದ ಮರೆತು ಸಂವಿಧಾನದ ಆಶಯಗಳಂತೆ ಎಲ್ಲರೂ ಒಂದಾಗಿ ಬದುಕಬೇಕಾಗಿದೆ ಎಂದರು. ಬಿ. ಆರ್. ಅಂಬೇಡ್ಕರ್, ಬಸವಣ್ಣ ಹಾಗೂ ಗೌತಮ ಬುದ್ಧ ಅವರ ತತ್ವಗಳು ಸಮಾನತೆ ಮತ್ತು ಮಾನವೀಯತೆಯ ಸಂದೇಶ ಸಾರುತ್ತವೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಸಾಧಕರಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಸಮಾಜದಲ್ಲಿ ಒಗ್ಗಟ್ಟು ಮತ್ತು ಸಂವಿಧಾನ ಜಾಗೃತಿಗೆ ಮತ್ತಷ್ಟು ಬಲ ತುಂಬುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವು ವೆಂಕಟೇಶ್ (ಸ್ಲಂ ವೆಂಕಿ) ಹಾಗೂ ಸಿ.ಆರ್. ಭರತ್ ಅವರ ನೇತೃತ್ವದಲ್ಲಿ ನಡೆಯಿತು. ಇಮಾಮ್ ನಿಯಾಜಿ, ಗುಜ್ಜಲ್ ನಾಗರಾಜ್, ತನ್ವೀರ್, ನಿಂಬಗಲ್ ರಾಮಕೃಷ್ಣ, ರೂಪೇಶ್ ಕುಮಾರ್, ವೀರಸ್ವಾಮಿ, ಪೂಜಾರ್ ದುರ್ಗಪ್ಪ, ಕೇಶು, ರಾಮಚಂದ್ರ, ಮರಿಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X