Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಮಳೆಗೆ ಹೊಸಪೇಟೆ ತತ್ತರ:...

Vijayanagara | ಮಳೆಗೆ ಹೊಸಪೇಟೆ ತತ್ತರ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು, ಜನಜೀವನ ಅಸ್ತವ್ಯಸ್ತ

ವಾರ್ತಾಭಾರತಿವಾರ್ತಾಭಾರತಿ7 Jun 2026 10:17 PM IST
share
Vijayanagara | ಮಳೆಗೆ ಹೊಸಪೇಟೆ ತತ್ತರ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು, ಜನಜೀವನ ಅಸ್ತವ್ಯಸ್ತ

ಹೊಸಪೇಟೆ/ವಿಜಯನಗರ: ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಾನುವಾರ ಸಂಜೆ ಸುಮಾರು ಎರಡು ಗಂಟೆಗಳಿಗೂ ಅಧಿಕ ಕಾಲ ಸುರಿದ ಧಾರಾಕಾರ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ನಗರದ ಪ್ರಮುಖ ರಸ್ತೆಗಳು ಜಲಾವೃತಗೊಂಡರೆ, ತಗ್ಗು ಪ್ರದೇಶಗಳ ಮನೆಗಳಿಗೆ ಮಳೆ ನೀರು ನುಗ್ಗಿ ನಿವಾಸಿಗಳು ತೀವ್ರ ಸಂಕಷ್ಟ ಅನುಭವಿಸುವಂತಾಯಿತು.

ಮಳೆ ಆರಂಭವಾದ ಕೆಲವೇ ನಿಮಿಷಗಳಲ್ಲಿ ನಗರದ ಹಲವು ಭಾಗಗಳಲ್ಲಿ ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆ ಉಂಟಾಯಿತು. ಪ್ರಮುಖ ವೃತ್ತಗಳು ಹಾಗೂ ರಸ್ತೆಗಳು ನೀರಿನಿಂದ ಆವೃತಗೊಂಡ ಪರಿಣಾಮ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಕೆಲವೆಡೆ ರಸ್ತೆ ಕಾಣದಷ್ಟು ನೀರು ತುಂಬಿಕೊಂಡಿದ್ದರಿಂದ ವಾಹನ ಚಾಲಕರು ನಿಧಾನಗತಿಯಲ್ಲಿ ಸಂಚರಿಸಬೇಕಾಯಿತು. ಇದರಿಂದ ವಾಹನ ದಟ್ಟಣೆ ಹಾಗೂ ಸಂಚಾರ ಸಮಸ್ಯೆಗಳು ಎದುರಾದವು.

ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ಮಳೆ ನೀರು ನುಗ್ಗಿದ್ದರಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದವು. ಮನೆಯೊಳಗೆ ನೀರು ನುಗ್ಗಿ ಗೃಹೋಪಯೋಗಿ ವಸ್ತುಗಳು, ಆಹಾರ ಸಾಮಗ್ರಿಗಳು ಹಾಗೂ ಅಗತ್ಯ ವಸ್ತುಗಳಿಗೆ ಹಾನಿಯಾಗಿರುವ ಬಗ್ಗೆ ನಿವಾಸಿಗಳು ಆತಂಕ ವ್ಯಕ್ತಪಡಿಸಿದರು.

ನಗರದಲ್ಲಿ ಸಮರ್ಪಕವಾದ ಒಳಚರಂಡಿ ವ್ಯವಸ್ಥೆ ಇಲ್ಲದಿರುವುದೇ ಈ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮಳೆ ನೀರು ಸರಾಗವಾಗಿ ಹರಿದು ಹೋಗಲು ಅಗತ್ಯ ಮೂಲಸೌಕರ್ಯಗಳ ಕೊರತೆಯಿಂದ ಪ್ರತೀ ಬಾರಿ ಮಳೆ ಬಂದಾಗ ತಗ್ಗು ಪ್ರದೇಶಗಳು ಜಲಾವೃತಗೊಳ್ಳುತ್ತಿವೆ ಎಂದು ದೂರಿದರು.

ಉತ್ತಮ ಮಳೆಯು ರೈತರಲ್ಲಿ ಸಂತಸ ಮೂಡಿಸಿದ್ದರೂ, ನಗರ ಪ್ರದೇಶಗಳಲ್ಲಿ ಅವ್ಯವಸ್ಥಿತ ಚರಂಡಿ ವ್ಯವಸ್ಥೆಯಿಂದ ಸಾರ್ವಜನಿಕರು ಸಂಕಷ್ಟ ಅನುಭವಿಸುವಂತಾಗಿದೆ. ಮಳೆಗಾಲ ಆರಂಭಕ್ಕೂ ಮುನ್ನ ಅಧಿಕಾರಿಗಳು ಚರಂಡಿಗಳ ಸ್ವಚ್ಛತೆ, ನೀರು ಹರಿಯುವ ಮಾರ್ಗಗಳ ಅಭಿವೃದ್ಧಿ ಹಾಗೂ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ನಗರದಲ್ಲಿ ಪದೇ ಪದೇ ಉಂಟಾಗುತ್ತಿರುವ ಜಲಾವೃತ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾದರೆ ಜನರ ಸಂಕಷ್ಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ನಾಗರಿಕರು ಎಚ್ಚರಿಸಿದ್ದಾರೆ.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X