Vijayanagara | ಉಜ್ಜನಿಯಲ್ಲಿ ಅಕ್ರಮ ಪಡಿತರ ಅಕ್ಕಿ ಸಂಗ್ರಹ: 243 ಕ್ವಿಂಟಲ್ ಅಕ್ಕಿ ಜಪ್ತಿ

ವಿಜಯನಗರ (ಹೊಸಪೇಟೆ), ಸೆ. 28: ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣೆ ವ್ಯಾಪ್ತಿಯ ಉಜ್ಜನಿ ಗ್ರಾಮದಲ್ಲಿರುವ ಗೋದಾಮೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿ ಸಾಗಿಸಲಾಗುತ್ತಿದ್ದ ಪಡಿತರ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿವೆ.
ಖಚಿತ ಮಾಹಿತಿ ಮೇರೆಗೆ ನಡೆದ ದಾಳಿಯಲ್ಲಿ ಅಂದಾಜು 5,48,550 ರೂ. ಮೌಲ್ಯದ 243 ಕ್ವಿಂಟಲ್ ಪಡಿತರ ಅಕ್ಕಿ ಹಾಗೂ ಅಕ್ಕಿ ಸಾಗಾಣಿಕೆಗೆ ಬಳಸುತ್ತಿದ್ದ ವಾಹನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರಿಯಾಜ್ ತಿಳಿಸಿದ್ದಾರೆ.
Next Story




