Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಸಾಮಾಜಿಕ ಕಳಕಳಿಯ...

Vijayanagara | ಸಾಮಾಜಿಕ ಕಳಕಳಿಯ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ : ನಾಗರಾಜ

ಕನಕದಾಸರ ಜಯಂತಿ ಆಚರಣೆ

ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ27 Nov 2026 5:42 PM IST
share
Vijayanagara | ಸಾಮಾಜಿಕ ಕಳಕಳಿಯ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ : ನಾಗರಾಜ

ಕೊಟ್ಟೂರು (ವಿಜಯನಗರ): ಪಟ್ಟಣದ ತಾಲೂಕು ಕಚೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಭಕ್ತಶ್ರೇಷ್ಠ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು. ಗ್ರೇಡ್-2 ತಹಶೀಲ್ದಾರ್ ಎಂ. ಪ್ರತಿಭಾ ಅವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಉಪನ್ಯಾಸ ನೀಡಿದ ಹಂಪಿ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಅಧ್ಯಯನ ಮಾಡುತ್ತಿರುವ ಮಗ್ಗದ ನಾಗರಾಜ ಮಾತನಾಡಿ, ವಚನ ಸಾಹಿತ್ಯ ಹಾಗೂ ದಾಸ ಸಾಹಿತ್ಯ ವಿಶ್ವ ಸಾಹಿತ್ಯಕ್ಕೆ ಕನ್ನಡದ ಮಹತ್ವದ ಕೊಡುಗೆಗಳಾಗಿವೆ. ಎರಡೂ ಸಾಹಿತ್ಯ ಪರಂಪರೆಗಳಲ್ಲಿ ಭಕ್ತಿಗೆ ಶ್ರೇಷ್ಠ ಸ್ಥಾನವಿದೆ. ವಚನಕಾರರು ಹರಭಕ್ತರಾದರೆ, ದಾಸ ಸಾಹಿತ್ಯಕಾರರು ಹರಿಭಕ್ತರಾಗಿದ್ದಾರೆ. ದಾಸ ಸಾಹಿತ್ಯದ ಬಹುತೇಕ ಕವಿಗಳು ಮೇಲ್ವರ್ಗಕ್ಕೆ ಸೇರಿದವರಾಗಿದ್ದರೆ, ಕನಕದಾಸರು ಶೂದ್ರ ಸಮುದಾಯದಿಂದ ಬಂದವರಾಗಿದ್ದರು. ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿನ ಅಂದಿನ ಮೌಢ್ಯ ಹಾಗೂ ಜಾತಿ ವ್ಯವಸ್ಥೆಯನ್ನು ವಿಡಂಬಿಸಿ, ಅವುಗಳನ್ನು ತಿದ್ದಲು ಪ್ರಯತ್ನಿಸಿದರು ಎಂದು ಹೇಳಿದರು.

ಕನಕದಾಸರು ಇಂದಿನ ಹಾವೇರಿ ಜಿಲ್ಲೆಯ ಬಾಡ ಗ್ರಾಮದಲ್ಲಿ ಬೀರಪ್ಪ ನಾಯಕ ಮತ್ತು ಬಚ್ಚಮ್ಮ ದಂಪತಿಯ ಮಗನಾಗಿ ಜನಿಸಿದರು. ಆರಂಭದಲ್ಲಿ ದಂಡನಾಯಕರಾಗಿ ಸೇವೆ ಸಲ್ಲಿಸಿದ ಅವರು, ಬಳಿಕ ಆಧ್ಯಾತ್ಮ ಹಾಗೂ ಹರಿಭಕ್ತಿಯ ಕಡೆಗೆ ಒಲವು ಬೆಳೆಸಿಕೊಂಡರು. ವ್ಯಾಸರಾಯರ ಮೆಚ್ಚಿನ ಶಿಷ್ಯರಾಗಿ ಬೆಳೆದ ಅವರು ದಾಸಕೂಟದ ಪ್ರಮುಖ ಪ್ರತಿನಿಧಿಯಾಗಿದ್ದರು. ಕೀರ್ತನೆಗಳ ಜೊತೆಗೆ ‘ಮೋಹನ ತರಂಗಿಣಿ’, ‘ನಳಚರಿತ್ರೆ’, ‘ರಾಮಧಾನ್ಯ ಚರಿತೆ’ ಹಾಗೂ ‘ಹರಿಭಕ್ತಿಸಾರ’ ಕೃತಿಗಳನ್ನು ರಚಿಸುವ ಮೂಲಕ ತಮ್ಮ ಸಾಹಿತ್ಯ ಪ್ರೌಢಿಮೆಯನ್ನು ಮೆರೆದಿದ್ದಾರೆ ಎಂದು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರೇಡ್-2 ತಹಶೀಲ್ದಾರ್ ಎಂ. ಪ್ರತಿಭಾ ಮಾತನಾಡಿ, ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಾರಿದ ಸಾಮಾಜಿಕ ಕಳಕಳಿಯ ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು. ಆಗ ಮಾತ್ರ ಜಯಂತಿ ಆಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದರು.

ಸಾಹಿತಿಗಳಾದ ಉಜ್ಜಿನಿ ರುದ್ರಪ್ಪ ಹಾಗೂ ತಾಲೂಕು ಕುರುಬ ಸಂಘದ ಅಧ್ಯಕ್ಷ ಮೂಗಣ್ಣ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಗುಡಿಯಾರ ಮಲ್ಲಿಕಾರ್ಜುನ, ಲೋಕಣ್ಣ, ಮಾನಸ ರಾಜಣ್ಣ, ನಾಗಪ್ಪ, ಬಸಣ್ಣ, ಗಜೇಂದ್ರ, ಶಿರಸ್ತೇದಾರ್ ಎಸ್. ರೇಖಾ, ಶಿಕ್ಷಣ ಇಲಾಖೆಯ ಸಿಆರ್‌ಪಿ ರವಿಕುಮಾರ್, ಕೊಟ್ರೇಶ್, ಗಿರಿಜ ಬಣಕಾರ್, ಕಂದಾಯ ನಿರೀಕ್ಷಕ ಡಿ. ಶಿವಕುಮಾರ್, ಗ್ರಾಮ ಆಡಳಿತ ಅಧಿಕಾರಿ ಹರೀಶ್, ರಮೇಶ್, ಶಾರದ, ಮಂಗಳ ವಾಲಿ, ವನಜಾಕ್ಷಿ, ಸುಧಾ ಜೈನರ್, ಬಸಮ್ಮ ಹೊಸಮನಿ ಸೇರಿದಂತೆ ಕಚೇರಿ ಸಿಬ್ಬಂದಿ ಹಾಗೂ ಇತರರು ಭಾಗವಹಿಸಿದ್ದರು.

ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಾದ ಶಾರದ ಬೂದಾಳ, ನಿಲವಂಜಿ ಚನ್ನಮ್ಮ, ಡಾ. ಉದಯಕುಮಾರ್ ಹಾಗೂ ಗುರುಬಸವರಾಜ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಿ. ಮ. ಗುರುಬಸವರಾಜ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Tags

Vijayanagarasocial concern
share
ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ
ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ

ಮಹಮ್ಮದ್ ಗೌಸ್ ಅವರು ಕಳೆದ ಆರು ವರ್ಷಗಳಿಂದ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಧ ಮಾಧ್ಯಮ ಚಟುವಟಿಕೆಗಳಲ್ಲಿ ಅನುಭವ ಹೊಂದಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ವಿಜಯನಗರ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ

Next Story
X