Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಇಂಧನ ದರ ಏರಿಕೆಯಿಂದ...

Vijayanagara | ಇಂಧನ ದರ ಏರಿಕೆಯಿಂದ ಜನರಿಗೆ ಹೆಚ್ಚಿದ ಹೊರೆ

ವಾರ್ತಾಭಾರತಿವಾರ್ತಾಭಾರತಿ15 May 2026 10:56 PM IST
share
Vijayanagara | ಇಂಧನ ದರ ಏರಿಕೆಯಿಂದ ಜನರಿಗೆ ಹೆಚ್ಚಿದ ಹೊರೆ

ಹೊಸಪೇಟೆ/ವಿಜಯನಗರ : ಅಂತರರಾಷ್ಟ್ರೀಯ ಮಟ್ಟದಲ್ಲಿ ಇರಾನ್, ಇಸ್ರೇಲ್ ಹಾಗೂ ಅಮೆರಿಕ ನಡುವಿನ ಯುದ್ಧ ಸಂಘರ್ಷದ ಪರಿಣಾಮ ದೇಶದ ಆರ್ಥಿಕ ವ್ಯವಸ್ಥೆಯ ಮೇಲೂ ಪರಿಣಾಮ ಬೀರತೊಡಗಿದ್ದು, ಅದರ ನೇರ ಹೊರೆ ಇದೀಗ ಸಾಮಾನ್ಯ ಜನರ ಮೇಲೇ ಬೀಳುತ್ತಿದೆ. ಇಂಧನ ದರ ಏರಿಕೆಯಿಂದ ಮಧ್ಯಮ ವರ್ಗದ ಜನರು ಹಾಗೂ ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ವಿಶೇಷವಾಗಿ ಮಧ್ಯರಾತ್ರಿ ಬದಲಾವಣೆಯಾಗಬೇಕಿದ್ದ ಇಂಧನ ದರಗಳನ್ನು ಬೆಳಿಗ್ಗೆ 7 ಗಂಟೆಗೆ ಪರಿಷ್ಕರಿಸಿರುವುದು ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದೆ.

ಈ ಹಿಂದೆ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 104.09 ರೂ. ಇದ್ದು, ಇದೀಗ 107.35 ರೂ. ಗೆ ಏರಿಕೆಯಾಗಿದೆ. ಡೀಸಲ್ ದರ 92.23 ರೂ. ನಿಂದ 95.34 ರೂ. ಗೆ ಹೆಚ್ಚಳವಾಗಿದೆ. ಇದರಿಂದ ಪೆಟ್ರೋಲ್ ದರದಲ್ಲಿ 3.26 ರೂ. ಹಾಗೂ ಡೀಸಲ್ ದರದಲ್ಲಿ 3.11 ರೂ.ರಷ್ಟು ಏರಿಕೆಯಾಗಿದೆ.

ದರ ಏರಿಕೆಯಿಂದ ದಿನನಿತ್ಯ ವಾಹನಗಳನ್ನು ಅವಲಂಬಿಸಿ ಜೀವನ ಸಾಗಿಸುವ ಮಧ್ಯಮ ವರ್ಗದ ಕುಟುಂಬಗಳು, ಕಾರ್ಮಿಕರು, ಆಟೋ ಚಾಲಕರು, ರೈತರು ಹಾಗೂ ಸಣ್ಣ ವ್ಯಾಪಾರಸ್ಥರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.

ಈಗಾಗಲೇ ಅಡುಗೆ ಅನಿಲ ದರ ಏರಿಕೆಯಿಂದ ತತ್ತರಿಸಿರುವ ಜನತೆಗೆ ಇಂಧನ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಹನ ಸವಾರರು ಮಾತನಾಡಿ, ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಅದರ ಜೊತೆಗೆ ಪೆಟ್ರೋಲ್ ಹಾಗೂ ಡೀಸಲ್ ದರ ಹೆಚ್ಚಳ ಕುಟುಂಬ ನಿರ್ವಹಣೆಯನ್ನೇ ಕಷ್ಟಕರವಾಗಿಸಿದೆ ಎಂದು ಅಸಮಾಧಾನ ಹೊರಹಾಕಿದರು.

ಉದ್ಯೋಗ, ವ್ಯಾಪಾರ ಹಾಗೂ ಕೃಷಿ ಚಟುವಟಿಕೆಗಳಿಗೆ ವಾಹನಗಳು ಅವಿಭಾಜ್ಯವಾಗಿರುವ ಸಂದರ್ಭದಲ್ಲಿ ಇಂತಹ ನಿರಂತರ ಬೆಲೆ ಏರಿಕೆ ಜನರ ಬದುಕಿನ ಮೇಲೆಯೇ ನೇರ ಪರಿಣಾಮ ಬೀರುತ್ತಿದೆ ಎಂದು ತಿಳಿಸಿದ್ದಾರೆ.

ಹೊಸಪೇಟೆ ನಗರದಲ್ಲಿ ಹಲವಾರು ವಾಹನ ಸವಾರರು ಹಾಗೂ ಸಾರ್ವಜನಿಕರು ಸರ್ಕಾರ ತಕ್ಷಣವೇ ಇಂಧನ ದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಸಾಮಾನ್ಯ ಜನರ ಬದುಕಿನ ಸಂಕಷ್ಟವನ್ನು ಮನಗಂಡು ಬೆಲೆ ಏರಿಕೆಯನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X