Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಅಕ್ರಮ ಸಾರಾಯಿ...

Vijayanagara | ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕುವಂತೆ ಕರವೇ ಮನವಿ

ವಾರ್ತಾಭಾರತಿವಾರ್ತಾಭಾರತಿ23 July 2026 10:09 PM IST
share
Vijayanagara | ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕುವಂತೆ ಕರವೇ ಮನವಿ
ಕ್ರಮ ಕೈಗೊಳ್ಳದಿದ್ದರೆ ಅಬಕಾರಿ ಇಲಾಖೆ ಎದುರು ಪ್ರತಿಭಟನೆ ಎಚ್ಚರಿಕೆ

ಹೊಸಪೇಟೆ/ವಿಜಯನಗರ: ಜಿಲ್ಲೆಯ ಹೊಸಪೇಟೆ ಹಾಗೂ ಕಮಲಾಪುರ ವ್ಯಾಪ್ತಿಯ ವಿವಿಧ ವಾರ್ಡ್‌ಗಳಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮ ಸಾರಾಯಿ ಮಾರಾಟವನ್ನು ತಕ್ಷಣವೇ ತಡೆಗಟ್ಟುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಸೇನೆ) ಪದಾಧಿಕಾರಿಗಳು ಅಬಕಾರಿ ಇಲಾಖೆಯ ಹೊಸಪೇಟೆ ಸಬ್‌ ಇನ್ಸ್‌ಪೆಕ್ಟರ್ ಅವರಿಗೆ ಮನವಿ ಸಲ್ಲಿಸಿದರು.

ಮನವಿಯಲ್ಲಿ, ಹೊಸಪೇಟೆಯ 7ನೇ ವಾರ್ಡ್‌ನ ಅನಂತಶಯನಗುಡಿಯ ಚಪ್ಪರದಳ ಪ್ರದೇಶದಲ್ಲಿ ಎರಡು ಶಾಲೆಗಳು, ಮಸೀದಿ ಹಾಗೂ ಮಾಸ್ತಮ್ಮ ದೇವಸ್ಥಾನಗಳ ಸಮೀಪವೇ ಅಕ್ರಮ ಸಾರಾಯಿ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ ಕಮಲಾಪುರದ ಜೈಭೀಮನಗರ, ವಿಜಯ ಹೋಟೆಲ್ ಸಮೀಪ, 9, 14, 15 ಹಾಗೂ 17ನೇ ವಾರ್ಡ್‌ಗಳಲ್ಲಿಯೂ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ ಎಂದು ದೂರಲಾಗಿದೆ.

ಅಕ್ರಮ ಸಾರಾಯಿ ಮಾರಾಟದಿಂದ ಯುವಕರು ಹಾಗೂ ಸಾರ್ವಜನಿಕರು ಮದ್ಯದ ವ್ಯಸನಕ್ಕೆ ಒಳಗಾಗುತ್ತಿದ್ದು, ಅನೇಕ ಕುಟುಂಬಗಳು ಸಂಕಷ್ಟ ಅನುಭವಿಸುತ್ತಿವೆ. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಆರೋಗ್ಯ ಸಮಸ್ಯೆಗಳು ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಅಕ್ರಮ ಸಾರಾಯಿ ಮಾರಾಟ ತಡೆಯಲು ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಅಬಕಾರಿ ಇಲಾಖೆ ಕಚೇರಿ ಎದುರು ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಸೇನೆ) ವತಿಯಿಂದ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆ ಎಚ್ಚರಿಕೆ ನೀಡಿದೆ.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಸೇನೆ) ವಿಜಯನಗರ ಜಿಲ್ಲಾಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ, ಹೊಸಪೇಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷೆ ಬಾನುಬಿ, ತಾಲೂಕು ಪ್ರಧಾನ ಕಾರ್ಯದರ್ಶಿ ದುರ್ಗಮ್ಮ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

karavevijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X