Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ನೀತಿ ಸಂಹಿತೆ...

Vijayanagara | ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಸರಳ ಆಚರಣೆ : ನೇತ್ರಾವತಿ ಕೆ.ವಿ.

ವಾರ್ತಾಭಾರತಿವಾರ್ತಾಭಾರತಿ16 Oct 2026 8:10 PM IST
share
Vijayanagara | ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಸರಳ ಆಚರಣೆ : ನೇತ್ರಾವತಿ ಕೆ.ವಿ.

ಕೂಡ್ಲಿಗಿ/ವಿಜಯನಗರ: ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅ.23ರಂದು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಹಶೀಲ್ದಾರ್ ಕುಮಾರಿ ನೇತ್ರಾವತಿ ಕೆ.ವಿ. ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೀತಿ ಸಂಹಿತೆಯ ನಿಯಮಗಳನ್ನು ಪಾಲಿಸುವುದರೊಂದಿಗೆ ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಧೈರ್ಯ, ಸಾಹಸ, ದೇಶಪ್ರೇಮ ಹಾಗೂ ಸ್ವಾತಂತ್ರ್ಯ ಹೋರಾಟದ ಆದರ್ಶಗಳನ್ನು ಸ್ಮರಿಸುವ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಯಂತಿ ಆಚರಣೆಯ ರೂಪುರೇಷೆಗಳು ಹಾಗೂ ಸಿದ್ಧತೆಗಳ ಕುರಿತು ಚರ್ಚಿಸಲಾಯಿತು. ವಿವಿಧ ಸಮಾಜಗಳ ಮುಖಂಡರು ಮತ್ತು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್. ವೆಂಕಟೇಶ, ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ಹೊಂಬಾಳೆ ರೇವಣ್ಣ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸುನೀಲ್ ಗೌಡ್ರು, ಕಾರ್ಯದರ್ಶಿ ರಮೇಶ್, ಮುಖಂಡರಾದ ಟಿ.ಜಿ. ಮಲ್ಲಿಕಾರ್ಜುನ ಗೌಡ, ಶಾಸಕರ ಆಪ್ತ ಸಹಾಯಕ ಮರಳು ಸಿದ್ದಪ್ಪ, ಹಿರೇ ಕುಂಬಳಗುಂಟೆ ಉಮೇಶ್, ಪಿ. ರಜನಿಕಾಂತ, ಖಾನವಳಿ ಕೊಟ್ರೇಶಣ್ಣ, ಮರಬದ ಶಿವಣ್ಣ, ಕೊಗಳಿ ಮಂಜುನಾಥ, ಬಣಕಾರ್ ಚಿನ್ನಪ್ಪ, ಲಕ್ಷ್ಮೀದೇವಿ, ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ರಜನಿಕಾಂತ, ಬಣಕಾರ್ ಮೂಗಪ್ಪ, ಜಂಗಮ ಸೋನಹಳ್ಳಿ ಕೊಟ್ರೇಶ್, ಬ್ಯಾಳಿ ಪ್ರಸಾದ್, ಖಾನಾವಳಿ ಕೊಟ್ರೇಶ್ ಹಾಗೂ ಉಮೇಶ್ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು ಉಪಸ್ಥಿತರಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X