Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಸರಕಾರಿ ನೌಕರರ ಫೋನ್‌ಪೇ...

Vijayanagara | ಸರಕಾರಿ ನೌಕರರ ಫೋನ್‌ಪೇ ವಹಿವಾಟಿನ ಮೇಲೂ ಲೋಕಾಯುಕ್ತ ನಿಗಾ : ನ್ಯಾ.ಬಿ.ಎಸ್.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ7 Nov 2026 7:45 PM IST
share
Vijayanagara | ಸರಕಾರಿ ನೌಕರರ ಫೋನ್‌ಪೇ ವಹಿವಾಟಿನ ಮೇಲೂ ಲೋಕಾಯುಕ್ತ ನಿಗಾ : ನ್ಯಾ.ಬಿ.ಎಸ್.ಪಾಟೀಲ್

ವಿಜಯನಗರ (ಹೊಸಪೇಟೆ): ಸರ್ಕಾರಿ ಇಲಾಖೆಗಳಲ್ಲಿನ ಭ್ರಷ್ಟಾಚಾರ, ಕರ್ತವ್ಯ ಲೋಪ ಹಾಗೂ ಆಡಳಿತಾತ್ಮಕ ಅಕ್ರಮಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಕಳೆದ ಎರಡು ದಿನಗಳಿಂದ ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಗಳ ವಿವಿಧ ಇಲಾಖೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಲೋಕಾಯುಕ್ತದಲ್ಲಿ ವಿಜಯನಗರ ಜಿಲ್ಲೆಗೆ ಸಂಬಂಧಿಸಿದಂತೆ 75 ಹಾಗೂ ಬಳ್ಳಾರಿ ಜಿಲ್ಲೆಗೆ ಸಂಬಂಧಿಸಿದಂತೆ 99 ಪ್ರಕರಣಗಳು ಬಾಕಿ ಇವೆ. ಕಳೆದ ಎರಡು ದಿನಗಳಲ್ಲಿ ಎರಡೂ ಜಿಲ್ಲೆಗಳಲ್ಲಿ ಹೊಸದಾಗಿ 20 ಸ್ವಯಂಪ್ರೇರಿತ (ಸುಮೋಟೊ) ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ರಾಜ್ಯ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್ ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಗದಗ, ಕೊಪ್ಪಳ, ಬಾಗಲಕೋಟೆ ಹಾಗೂ ಬಳ್ಳಾರಿ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಕಳೆದ ಎರಡು-ಮೂರು ದಿನಗಳಿಂದ ಸುಮಾರು 65 ಅಧಿಕಾರಿಗಳ ತಂಡದ ಮೂಲಕ ಲೋಕಾಯುಕ್ತ ತನಿಖೆ ಹಾಗೂ ಸಮಗ್ರ ಪರಿಶೀಲನೆ ನಡೆಸಲಾಗುತ್ತಿದೆ. ಪ್ರತಿ ಜಿಲ್ಲೆಗೂ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್‌ಪಿ, ಪೊಲೀಸ್ ಇನ್‌ಸ್ಪೆಕ್ಟರ್‌ಗಳು, ನ್ಯಾಯಾಂಗ ಅಧಿಕಾರಿಗಳು ಹಾಗೂ ಸಹಾಯಕ ಸಿಬ್ಬಂದಿಯನ್ನು ಒಳಗೊಂಡ ಪ್ರತ್ಯೇಕ ತಂಡಗಳನ್ನು ನಿಯೋಜಿಸಲಾಗಿದೆ. ಈಗಾಗಲೇ ದಾಖಲಾಗಿರುವ ಪ್ರಕರಣಗಳ ಜೊತೆಗೆ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಪ್ರಕರಣಗಳ ಬಗ್ಗೆಯೂ ತನಿಖೆ ಕೈಗೊಳ್ಳಲಾಗಿದೆ ಎಂದರು.

ವಿವಿಧ ಇಲಾಖೆಗಳಲ್ಲಿನ ಬಾಕಿ ಪ್ರಕರಣಗಳು, ಆಡಳಿತಾತ್ಮಕ ದುರ್ವ್ಯವಸ್ಥೆ, ಕರ್ತವ್ಯ ನಿರ್ಲಕ್ಷ್ಯ ಹಾಗೂ ಕರ್ತವ್ಯ ನಿರ್ವಹಣೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರಿಂದ ಬಂದಿರುವ ದೂರುಗಳನ್ನೂ ಗಂಭೀರವಾಗಿ ಪರಿಗಣಿಸಿ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.

ಸರ್ಕಾರಿ ನೌಕರರ ಫೋನ್‌ಪೇ ವಹಿವಾಟಿನ ಮೇಲೂ ನಿಗಾ :

ಕೆಲವು ಇಲಾಖೆಗಳ ಪ್ರಥಮ ದರ್ಜೆ ಸಹಾಯಕರು ಹಾಗೂ ದ್ವಿತೀಯ ದರ್ಜೆ ಸಹಾಯಕರು ಪ್ರತಿದಿನ ಫೋನ್‌ಪೇ ಮೂಲಕ 20 ಸಾವಿರ ರೂ. ದಿಂದ 30 ಸಾವಿರ ರೂ. ವರೆಗೆ ಹಣಕಾಸಿನ ವಹಿವಾಟು ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಈ ಹಣದ ಮೂಲ ಯಾವುದು? ಇದರ ಹಿಂದೆ ಅಕ್ರಮ ಹಣಕಾಸಿನ ವಹಿವಾಟು ಅಥವಾ ಹೊಸ ಮಾದರಿಯ ಭ್ರಷ್ಟಾಚಾರದ ಜಾಲ ಕಾರ್ಯನಿರ್ವಹಿಸುತ್ತಿದೆಯೇ ಎಂಬುದರ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

2022ರ ಜೂನ್‌ನಲ್ಲಿ ಲೋಕಾಯುಕ್ತ ಕಚೇರಿಯಲ್ಲಿ ಸುಮಾರು 8 ಸಾವಿರ ಪ್ರಕರಣಗಳು ಬಾಕಿ ಇದ್ದವು. ಬಳಿಕ ಈವರೆಗೆ ಸುಮಾರು 24 ಸಾವಿರ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಆದಾಗ್ಯೂ, ಪ್ರಸ್ತುತ ಸುಮಾರು 38 ಸಾವಿರ ಪ್ರಕರಣಗಳು ಬಾಕಿ ಉಳಿದಿವೆ. ಲೋಕಾಯುಕ್ತ ನ್ಯಾಯಾಲಯಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯಲ್ಲಿನ ವಿಳಂಬವನ್ನು ನಿವಾರಿಸಿ, ತ್ವರಿತ ವಿಲೇವಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ವಿಶೇಷವಾಗಿ ಮರಳು ಗಣಿಗಾರಿಕೆ, ಕೆರೆಗಳ ಒತ್ತುವರಿ ಹಾಗೂ ಹಾಸ್ಟೆಲ್‌ಗಳಿಗೆ ಸಂಬಂಧಿಸಿದ ದೂರು ಮತ್ತು ಪ್ರಕರಣಗಳನ್ನು ಆದ್ಯತೆಯ ಮೇರೆಗೆ ಪರಿಶೀಲಿಸಲಾಗುತ್ತಿದೆ. ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಇಂತಹ ವಿಷಯಗಳಲ್ಲಿ ತ್ವರಿತ ತನಿಖೆ ನಡೆಸಿ ವರದಿ ಪಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಹೇಳಿದರು.

Tags

PhonePeLokayuktavijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X