Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಸಪಾಯಿ ಮಿತ್ರರ ಆರೋಗ್ಯ,...

Vijayanagara | ಸಪಾಯಿ ಮಿತ್ರರ ಆರೋಗ್ಯ, ಸುರಕ್ಷತೆ ಕಾಪಾಡುವುದು ಸಾಮಾಜಿಕ ಹೊಣೆಗಾರಿಕೆ : ವಿಶ್ವನಾಥ್ ಪಿ.ಕೆ.

ವಾರ್ತಾಭಾರತಿವಾರ್ತಾಭಾರತಿ30 Sept 2026 8:06 PM IST
share
Vijayanagara | ಸಪಾಯಿ ಮಿತ್ರರ ಆರೋಗ್ಯ, ಸುರಕ್ಷತೆ ಕಾಪಾಡುವುದು ಸಾಮಾಜಿಕ ಹೊಣೆಗಾರಿಕೆ : ವಿಶ್ವನಾಥ್ ಪಿ.ಕೆ.

ಹಗರಿಬೊಮ್ಮನಹಳ್ಳಿ/ವಿಜಯನಗರ: ಸ್ವಚ್ಛತಾ ಹಿ ಸೇವಾ–2026ರ ಅಂಗವಾಗಿ ಜಿಲ್ಲಾ ಪಂಚಾಯಿತಿ ವಿಜಯನಗರದ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಹಾಲಾಗಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಗಿಮಾವಿನಹಳ್ಳಿಯಲ್ಲಿ ಸಪಾಯಿ ಮಿತ್ರ ಸುರಕ್ಷತೆ ಮತ್ತು ಗೌರವ ಶಿಬಿರ ಹಾಗೂ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಹಗರಿಬೊಮ್ಮನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ್ ಪಿ.ಕೆ. ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಸ್ವಚ್ಛತಾ ಹಿ ಸೇವಾ ಕೇವಲ ಸ್ವಚ್ಛತಾ ಅಭಿಯಾನವಲ್ಲ. ಸ್ವಚ್ಛತೆಗಾಗಿ ಪ್ರತಿದಿನ ಶ್ರಮಿಸುವ ಸಪಾಯಿ ಮಿತ್ರರ ಸೇವೆಯನ್ನು ಗುರುತಿಸಿ, ಅವರ ಆರೋಗ್ಯ, ಸುರಕ್ಷತೆ ಹಾಗೂ ಗೌರವವನ್ನು ಕಾಪಾಡುವುದು ಸಾಮಾಜಿಕ ಹೊಣೆಗಾರಿಕೆಯಾಗಿದೆ” ಎಂದರು.

ಗ್ರಾಮಗಳ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ಸ್ವಚ್ಛತಾ ಸಿಬ್ಬಂದಿಯ ಪಾತ್ರ ಮಹತ್ವದ್ದಾಗಿದೆ. ಜನರಿಗೆ ಸೇವೆ ಸಲ್ಲಿಸುವ ಸಿಬ್ಬಂದಿ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ನಿಯಮಿತ ಆರೋಗ್ಯ ತಪಾಸಣೆ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸುವ ಮೂಲಕ ಸುರಕ್ಷಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಸಲಹೆ ನೀಡಿದರು.

“ಸ್ವಚ್ಛ ಗ್ರಾಮ ನಿರ್ಮಾಣದ ಹಿಂದೆ ಸ್ವಚ್ಛತಾ ಕಾರ್ಯಕರ್ತರ ಪರಿಶ್ರಮವಿದೆ. ಅವರ ಶ್ರಮಕ್ಕೆ ಗೌರವ ನೀಡುವುದು, ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಹಾಗೂ ಸುರಕ್ಷಿತವಾಗಿ ಕೆಲಸ ಮಾಡಲು ಅಗತ್ಯ ವಾತಾವರಣ ಕಲ್ಪಿಸುವುದು ಎಲ್ಲರ ಜವಾಬ್ದಾರಿ” ಎಂದು ವಿಶ್ವನಾಥ್ ಪಿ.ಕೆ. ತಿಳಿಸಿದರು.

ಈ ಸಂದರ್ಭದಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛವಾಹಿನಿ ಸಿಬ್ಬಂದಿ ಹಾಗೂ ಸಪಾಯಿ ಮಿತ್ರರನ್ನು ಗೌರವಿಸಿ ಸನ್ಮಾನಿಸಲಾಯಿತು. ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಸಿಬ್ಬಂದಿಗೆ ಆರೋಗ್ಯ ತಪಾಸಣೆ ನಡೆಸಿ, ಆರೋಗ್ಯ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಅಗತ್ಯ ಸಲಹೆಗಳನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಹಾಲಾಗಪುರ, ದಶಮಾಪುರ, ಹಂಪಾಪಟ್ಟಣ ಹಾಗೂ ಮರಬ್ಬಿಹಾಳ್ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯಿತಿ ಕಾರ್ಯದರ್ಶಿಗಳು, ಸಿಬ್ಬಂದಿ, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಸ್ವಚ್ಛತಾ ಸಿಬ್ಬಂದಿಯ ಸೇವೆಯನ್ನು ಗುರುತಿಸಿ ಗೌರವಿಸುವುದು, ಅವರ ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡುವುದು ಹಾಗೂ ಸಾರ್ವಜನಿಕರ ಸಹಭಾಗಿತ್ವದ ಮೂಲಕ ಸ್ವಚ್ಛ ಮತ್ತು ಆರೋಗ್ಯಕರ ಗ್ರಾಮಗಳನ್ನು ನಿರ್ಮಿಸುವ ಸಂಕಲ್ಪದೊಂದಿಗೆ ಕಾರ್ಯಕ್ರಮ ನಡೆಯಿತು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X