Vijayanagara | ರಸ್ತೆ ದಾಟುವ ವೇಳೆ ಬಸ್ ಢಿಕ್ಕಿ : ವ್ಯಕ್ತಿ ಮೃತ್ಯು

ಹೊಸಪೇಟೆ/ವಿಜಯನಗರ: ಮಳೆಯಿಂದ ತಪ್ಪಿಸಿಕೊಳ್ಳಲು ರಸ್ತೆ ದಾಟುವ ವೇಳೆ ಸಾರಿಗೆ ಬಸ್‌ಗೆ ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ದುರ್ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಬಸ್ ನಿಲ್ದಾಣದ ಎದುರು ಬುಧವಾರ ನಡೆದಿದೆ.
ಮಳೆ ಸುರಿಯುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಮಳೆಯಿಂದ ತಪ್ಪಿಸಿಕೊಳ್ಳಲು ರಸ್ತೆ ದಾಟಲು ಓಡುತ್ತಿದ್ದಾಗ, ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಾರಿಗೆ ಬಸ್‌ಗೆ ಢಿಕ್ಕಿ ಹೊಡೆದಿದ್ದಾರೆ ಎಂದು ತಿಳಿದು ಬಂದಿದೆ.
ಢಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹೊಸಪೇಟೆ ಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Next Story




