Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ರೈಲ್ವೆ ಓವರ್ ಬ್ರಿಡ್ಜ್...

Vijayanagara | ರೈಲ್ವೆ ಓವರ್ ಬ್ರಿಡ್ಜ್ ವಿಳಂಬ ಖಂಡಿಸಿ ಶಾಸಕ ಗವಿಯಪ್ಪ ದಿಢೀರ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 May 2026 8:20 PM IST
share
Vijayanagara | ರೈಲ್ವೆ ಓವರ್ ಬ್ರಿಡ್ಜ್ ವಿಳಂಬ ಖಂಡಿಸಿ ಶಾಸಕ ಗವಿಯಪ್ಪ ದಿಢೀರ್ ಪ್ರತಿಭಟನೆ
ರೈಲು ಗೇಟ್ ತಡೆದು ಆಕ್ರೋಶ : ಕಾಮಗಾರಿ ಪೂರ್ಣಕ್ಕೆ ರೈಲ್ವೆ ಅಧಿಕಾರಿಗಳಿಂದ ಒಂದು ತಿಂಗಳ ಭರವಸೆ

ವಿಜಯನಗರ/ಹೊಸಪೇಟೆ : ರೈಲ್ವೆ ಪ್ರೈ ಓವರ್ ಬ್ರಿಡ್ಜ್ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಹೊಸಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಆರ್. ಗವಿಯಪ್ಪ ಅವರು ಕೊಂಡನಾಯಕನಹಳ್ಳಿ ಸಮೀಪ ದಿಢೀರ್ ಪ್ರತಿಭಟನೆ ನಡೆಸಿದರು. ರೈಲ್ವೆ ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ರೈಲ್ವೆ ಗೇಟ್ ಹಾಕುವುದನ್ನು ತಡೆದು ಪ್ರತಿಭಟನೆ ನಡೆಸಿದ ಪರಿಣಾಮ ಹೊಸಪೇಟೆ ಮಾರ್ಗದ ರೈಲು ಸಂಚಾರದಲ್ಲಿ ಕೆಲಕಾಲ ವ್ಯತ್ಯಯ ಉಂಟಾಯಿತು.

ಅನಂತಶಯನಗುಡಿ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಪ್ರತಿಭಟನೆಗೆ ಬೆಂಬಲ ಸೂಚಿಸಿ ಶಾಸಕರೊಂದಿಗೆ ಭಾಗವಹಿಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ಗವಿಯಪ್ಪ, “ಕಳೆದ ನಾಲ್ಕು ವರ್ಷಗಳಿಂದ ಈ ಭಾಗದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಗರ್ಭಿಣಿಯರು ಹಾಗೂ ತುರ್ತು ಚಿಕಿತ್ಸೆಗೆ ತೆರಳುವ ರೋಗಿಗಳು ಭಾರೀ ತೊಂದರೆ ಎದುರಿಸುತ್ತಿದ್ದಾರೆ. ಸಾಕಷ್ಟು ಸಾವು-ನೋವುಗಳೂ ಸಂಭವಿಸಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಇದು ಕೇವಲ ನನ್ನ ಕ್ಷೇತ್ರದ ಸಮಸ್ಯೆಯಲ್ಲ. ದೇಶ-ವಿದೇಶಗಳಿಂದ ಹಂಪಿಗೆ ಆಗಮಿಸುವ ಪ್ರವಾಸಿಗರು ಕೂಡಾ ಈ ಅವ್ಯವಸ್ಥೆಯಿಂದ ಬೇಸತ್ತು ನಮಗೆ ಶಾಪ ಹಾಕುತ್ತಿದ್ದಾರೆ” ಎಂದು ರೈಲ್ವೆ ಇಲಾಖೆಯ ವಿಳಂಬ ಧೋರಣೆಯನ್ನು ಖಂಡಿಸಿದರು.

ಹುಬ್ಬಳ್ಳಿ ವಲಯದ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಶಾಸಕ ಗವಿಯಪ್ಪ ಪಟ್ಟು ಹಿಡಿದಿದ್ದರಿಂದ, ತಹಶೀಲ್ದಾರರು, ನಗರಸಭೆ ಪೌರಾಯುಕ್ತರು ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮನವೊಲಿಸಲು ಯತ್ನಿಸಿದರು.

ನಂತರ ಸ್ಥಳಕ್ಕಾಗಮಿಸಿದ ರೈಲ್ವೆ ಅಧಿಕಾರಿಗಳು “ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು” ಎಂದು ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಶಾಸಕ ಗವಿಯಪ್ಪ ಪ್ರತಿಭಟನೆ ಹಿಂಪಡೆದರು. ಆದರೆ, “ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸದಿದ್ದರೆ ನಿರಂತರ ಹೋರಾಟ ಮುಂದುವರಿಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಗವಿಯಪ್ಪ, “ಸಿಎಂ ಬದಲಾವಣೆ ಕುರಿತು ಮಾಧ್ಯಮಗಳಲ್ಲಿ ಮಾತ್ರ ಚರ್ಚೆ ನಡೆಯುತ್ತಿದೆ. ನಮಗೆ ಅಧಿಕೃತವಾಗಿ ಯಾವುದೇ ಮಾಹಿತಿ ಬಂದಿಲ್ಲ. ಸಿಎಲ್ಪಿ ಸಭೆ ಕುರಿತು ಕೂಡ ಇದುವರೆಗೂ ಯಾವುದೇ ಕರೆ ಬಂದಿಲ್ಲ. ಕರೆ ಬಂದರೆ ಖಂಡಿತವಾಗಿ ಹೋಗುತ್ತೇನೆ” ಎಂದು ಹೇಳಿದರು.

ವಿಜಯನಗರ ಜಿಲ್ಲೆಗೆ ಸಚಿವ ಸ್ಥಾನ ನೀಡಲಿ :

ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಶಾಸಕ ಗವಿಯಪ್ಪ, “ವಿಜಯನಗರ ಹೊಸ ಜಿಲ್ಲೆಯಾಗಿದ್ದರೂ ಇಲ್ಲಿಯವರೆಗೆ ಈ ಜಿಲ್ಲೆಗೆ ಸಚಿವ ಸ್ಥಾನ ಸಿಕ್ಕಿಲ್ಲ. ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡಿದರೆ ಒಳಿತು” ಎಂದು ಅಭಿಪ್ರಾಯಪಟ್ಟರು.

“ನಿಮಗೆ ಸಚಿವ ಸ್ಥಾನ ನೀಡಿದರೆ ನಿಭಾಯಿಸುವಿರಾ?” ಎಂಬ ಪ್ರಶ್ನೆಗೆ ನಗುಮುಖದಿಂದ ಪ್ರತಿಕ್ರಿಯಿಸಿದ ಅವರು, “ಕೊಟ್ಟರೆ ಖಂಡಿತ ನಿಭಾಯಿಸುವೆ” ಎಂದು ಉತ್ತರಿಸಿದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X