Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ದೇಶಕ್ಕಾಗಿ ತ್ಯಾಗ-...

Vijayanagara | ದೇಶಕ್ಕಾಗಿ ತ್ಯಾಗ- ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸಿದ ಶಾಸಕ ಕೆ.ನೇಮಿರಾಜ ನಾಯ್ಕ್

ವಾರ್ತಾಭಾರತಿವಾರ್ತಾಭಾರತಿ15 Aug 2026 7:11 PM IST
share
Vijayanagara | ದೇಶಕ್ಕಾಗಿ ತ್ಯಾಗ- ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸಿದ ಶಾಸಕ ಕೆ.ನೇಮಿರಾಜ ನಾಯ್ಕ್

ಕೊಟ್ಟೂರು (Vijayanagara): ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ಮಾಡಿದ ತ್ಯಾಗ, ಬಲಿದಾನದ ಫಲವಾಗಿ ಇಂದು ನಾವು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದೇವೆ ಎಂದು ಹಗರಿಬೊಮ್ಮನಹಳ್ಳಿ ಶಾಸಕ ಕೆ. ನೇಮಿರಾಜ ನಾಯ್ಕ್ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಬಳಿಕ ರಾಷ್ಟ್ರಗೀತೆ ಮೊಳಗಿಸಲಾಯಿತು. ಶಾಸಕರು ಹಾಗೂ ತಾಲೂಕು ದಂಡಾಧಿಕಾರಿಗಳು ಗಣ್ಯರೊಂದಿಗೆ ಪಥಸಂಚಲನದಲ್ಲಿ ಪಾಲ್ಗೊಂಡರು.

ದೇಶದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ರೈತರಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಜಗತ್ತಿನ ಇತಿಹಾಸದಲ್ಲಿ ಭಾರತೀಯ ಸ್ವಾತಂತ್ರ್ಯ ಹೋರಾಟಕ್ಕೆ ವಿಶಿಷ್ಟ ಸ್ಥಾನವಿದೆ. ನೂರು ವರ್ಷಗಳ ಕಾಲ ಲಕ್ಷಾಂತರ ಭಾರತೀಯರು ನಡೆಸಿದ ನಿರಂತರ ಹೋರಾಟ, ತ್ಯಾಗ ಮತ್ತು ಬಲಿದಾನದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ ಎಂದರು.

ಸ್ವಾತಂತ್ರ್ಯದ ಮೌಲ್ಯಗಳಾದ ರಾಷ್ಟ್ರಾಭಿಮಾನ, ದೇಶಕ್ಕಾಗಿ ಸಮರ್ಪಣಾ ಮನೋಭಾವ, ಕಾಯಕಶೀಲತೆ, ಪ್ರಾಮಾಣಿಕತೆ, ಸತ್ಯ, ಶಾಂತಿ ಹಾಗೂ ಅಹಿಂಸೆಯಂತಹ ಆದರ್ಶಗಳನ್ನು ಇಂದಿನ ಯುವಜನತೆಗೆ ತಿಳಿಸುವ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ. ಆನಂದ್ ಕುಮಾರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಸರುಲ್ಲಾ, ಪಿಐ ಡಿ. ದುರುಗಪ್ಪ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸೋಮಶೇಖರ್, ಸರ್ಕಾರಿ ಬಾಲಕರ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಕೊಟ್ರಮ್ಮ, ಇಸಿಒ ನಿಂಗಪ್ಪ, ಪ.ಪಂ. ಎಂಜಿನಿಯರ್ ಸಿದ್ದಯ್ಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಯೋಗೇಶ್ವರ್ ದಿನ್ನೆ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ದೇವರಮನೆ ಕೊಟ್ರೇಶ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಶಾಲಾ-ಕಾಲೇಜುಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

15 ಸಾಧಕರಿಗೆ ಸನ್ಮಾನ :

ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ತಾಲೂಕು ಉಪಾಧ್ಯಕ್ಷ ಎಚ್. ದಾದಾಪೀರ್, ಹೊಸಪೇಟೆ ಧ್ವನಿಯ ಎಂ.ಜಿ. ಪ್ರಸಾದ್, ಕಾನಿಪ ಸಂಘದ ವತಿಯಿಂದ ಉದಯವಾಣಿ ರವಿ ಹಾಗೂ ವಿಜಯನಗರ ವಾಣಿಯ ಎಚ್. ನಾಗರಾಜ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 15 ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಶಾಲಾ ವಿದ್ಯಾರ್ಥಿಗಳಿಂದ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದವರ ಗಮನ ಸೆಳೆದವು. ಕಾರ್ಯಕ್ರಮವನ್ನು ಜಗದೀಶ್ ಚಂದ್ರಬೋಸ್ ನಿರೂಪಿಸಿದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X