ವಿಜಯನಗರ | ಚಲಿಸುತ್ತಿದ್ದ ಟಾಟಾ ಏಸ್ ವಾಹನ ಬೆಂಕಿಗಾಹುತಿ: ಚಾಲಕ ಅಪಾಯದಿಂದ ಪಾರು

ವಿಜಯನಗರ / ಮರಿಯಮ್ಮನಹಳ್ಳಿ: ಆಕಸ್ಮಿಕ ಬೆಂಕಿ ತಗುಲಿ ಚಲಿಸುತ್ತಿದ್ದ ಟಾಟಾ ಏಸ್ ವಾಹನವೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ನಡೆದಿದೆ.
ವರದಾಪುರ ಗ್ರಾಮದ ಫಕೃಸಾಬ್ ಎಂಬವರಿಗೆ ಸೇರಿದ ವಾಹನ ಸುಟ್ಟು ಕರಕಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಮರಿಯಮ್ಮನಹಳ್ಳಿ ಪಟ್ಟಣದಿಂದ ವರದಾಪುರ ಗ್ರಾಮಕ್ಕೆ ಹೊರಟಿದ್ದ ಟಾಟಾ ಏಸ್ ವಾಹನದಲ್ಲಿ ದಿಢೀರನೆ ಬೆಂಕಿ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ವಾಹನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.
ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದ್ದಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story





