Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಕೂಡ್ಲಿಗಿ...

Vijayanagara | ಕೂಡ್ಲಿಗಿ ಕ್ಷೇತ್ರದಲ್ಲಿ 21,179 ಮತದಾರರ ಹೆಸರು ತೆರವು

ವಾರ್ತಾಭಾರತಿವಾರ್ತಾಭಾರತಿ25 Aug 2026 6:37 PM IST
share
Vijayanagara | ಕೂಡ್ಲಿಗಿ ಕ್ಷೇತ್ರದಲ್ಲಿ 21,179 ಮತದಾರರ ಹೆಸರು ತೆರವು

ವಿಜಯನಗರ/ಕೂಡ್ಲಿಗಿ: ವಿಧಾನಸಭಾ ಕ್ಷೇತ್ರದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SSR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಮರಣ ಹೊಂದಿದವರು, ಸ್ಥಳಾಂತರಗೊಂಡವರು, ದ್ವಿಪ್ರತಿ ನೋಂದಣಿ ಹಾಗೂ ಇತರೆ ಅನರ್ಹ ಮತದಾರರು ಸೇರಿದಂತೆ ಒಟ್ಟು 21,179 ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆರವುಗೊಳಿಸಲಾಗಿದೆ ಎಂದು ಮತದಾರ ನೋಂದಣಿ ಅಧಿಕಾರಿ ಕಾಳಿ ಉಲ್ಲೇಶ ಎ. ತಿಳಿಸಿದ್ದಾರೆ.

ಪರಿಷ್ಕರಣೆ ಬಳಿಕ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 2,16,002ರಿಂದ 1,94,823ಕ್ಕೆ ಇಳಿಕೆಯಾಗಿದೆ. ತೆರವುಗೊಳಿಸಿದವರಲ್ಲಿ 11,296 ಸ್ಥಳಾಂತರಗೊಂಡವರು, 6,245 ಮೃತರು, 2,941 ದ್ವಿಪ್ರತಿ ನೋಂದಣಿ ಹೊಂದಿದವರು, 643 ಗೈರು ಮತದಾರರು ಹಾಗೂ 54 ಇತರೆ ಅನರ್ಹ ಮತದಾರರು ಸೇರಿದ್ದಾರೆ.

ಜಿಲ್ಲೆಯಲ್ಲಿ SSR ಪೂರ್ಣಗೊಳಿಸುವಲ್ಲಿ ಕೂಡ್ಲಿಗಿಗೆ ಪ್ರಥಮ ಸ್ಥಾನ :

SSR ಪ್ರಕ್ರಿಯೆಯನ್ನು ಕ್ಷಿಪ್ರವಾಗಿ ಹಾಗೂ ನಿಖರವಾಗಿ ಪೂರ್ಣಗೊಳಿಸುವ ಮೂಲಕ ಕೂಡ್ಲಿಗಿ ತಾಲೂಕು ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ. ಸಹಾಯಕ ಮತದಾರ ನೋಂದಣಿ ಅಧಿಕಾರಿ ಹಾಗೂ ತಹಸೀಲ್ದಾರ್ ಎ.ಕೆ. ನೇತ್ರಾವತಿ ಸೇರಿದಂತೆ ಚುನಾವಣಾ ಸಿಬ್ಬಂದಿಯ ಕಾರ್ಯವನ್ನು ಹಿರಿಯ ಅಧಿಕಾರಿಗಳು ಶ್ಲಾಘಿಸಿದ್ದಾರೆ.

ಆಗಸ್ಟ್ 25ರಿಂದ ಗ್ರಾಮ ಪಂಚಾಯಿತಿ ಕೇಂದ್ರಗಳು ಹಾಗೂ ಬಿಎಲ್‌ಒಗಳ ವ್ಯಾಪ್ತಿಯಲ್ಲಿ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕ ಸಭೆಗಳನ್ನು ನಡೆಸಲಾಗುತ್ತಿದ್ದು, ಮತದಾರರು ತಮ್ಮ ಹೆಸರು ಹಾಗೂ ವಿವರಗಳನ್ನು ಪರಿಶೀಲಿಸಿಕೊಳ್ಳಬಹುದು.

1,821 ಪ್ರಕರಣಗಳ ವಿಚಾರಣೆ :

2002ರ ಮತದಾರರ ಪಟ್ಟಿ ಮತ್ತು ಹಾಲಿ ಪಟ್ಟಿಯಲ್ಲಿನ ಹೆಸರುಗಳಲ್ಲಿ ವ್ಯತ್ಯಾಸವಿರುವ 1,516 ಪ್ರಕರಣಗಳು ಹಾಗೂ 2002ರ ಯಾವುದೇ ಮಾಹಿತಿ ಲಭ್ಯವಿಲ್ಲದ 305 ಪ್ರಕರಣಗಳು ಸೇರಿದಂತೆ ಒಟ್ಟು 1,821 ಪ್ರಕರಣಗಳನ್ನು ಗುರುತಿಸಲಾಗಿದೆ.

ವಿಚಾರಣೆಗಾಗಿ ನರಸಪ್ಪ, ಮಲ್ಲಿಕಾರ್ಜುನ ಹಾಗೂ ದಾದಾಪೀರ್ ಅವರನ್ನು ಹೆಚ್ಚುವರಿ ಮತದಾರ ನೋಂದಣಿ ಅಧಿಕಾರಿಗಳಾಗಿ ನೇಮಿಸಲಾಗಿದೆ. ಸಂಬಂಧಪಟ್ಟ ಮತದಾರರಿಗೆ ನೋಟಿಸ್ ನೀಡಿ, ಅಗತ್ಯ ದಾಖಲೆಗಳ ಆಧಾರದ ಮೇಲೆ ವಿಚಾರಣೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.

ಸೆ.23ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ :

ಹೊಸ ಮತದಾರರಾಗಿ ಹೆಸರು ಸೇರ್ಪಡೆಗೆ ಫಾರಂ-6, ಹೆಸರು ತೆಗೆದುಹಾಕಲು ಅಥವಾ ಆಕ್ಷೇಪಣೆ ಸಲ್ಲಿಸಲು ಫಾರಂ-7, ವಿಳಾಸ ಬದಲಾವಣೆ ಹಾಗೂ ವಿವರಗಳ ತಿದ್ದುಪಡಿಗೆ ಫಾರಂ-8 ಸಲ್ಲಿಸಬಹುದು. 2026ರ ಅಕ್ಟೋಬರ್ 1ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವ ಮತದಾರರೂ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಬಿಎಲ್‌ಒಗಳಿಗೆ ಸೆಪ್ಟೆಂಬರ್ 23ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

14 ನೂತನ ಮತಗಟ್ಟೆ ಸ್ಥಾಪನೆ :

ಎರಡು ಕಿ.ಮೀ.ಗಿಂತ ಹೆಚ್ಚು ದೂರವಿರುವ ಗ್ರಾಮಗಳು ಹಾಗೂ 1,200ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ ಕ್ಷೇತ್ರದಲ್ಲಿ 14 ನೂತನ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಿಂದ ಮತಗಟ್ಟೆಗಳ ಸಂಖ್ಯೆ 250ರಿಂದ 264ಕ್ಕೆ ಏರಿಕೆಯಾಗಿದೆ.

Tags

Kudligivijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X