Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ನೂತನ ಡಿಎಚ್‌ಒ...

Vijayanagara | ನೂತನ ಡಿಎಚ್‌ಒ ಡಾ.ಟಿ.ಲಿಂಗರಾಜುಗೆ ಸನ್ಮಾನ; ಆರೋಗ್ಯ ಸೇವೆ ಸುಧಾರಣೆಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ16 July 2026 10:46 PM IST
share
Vijayanagara | ನೂತನ ಡಿಎಚ್‌ಒ ಡಾ.ಟಿ.ಲಿಂಗರಾಜುಗೆ ಸನ್ಮಾನ; ಆರೋಗ್ಯ ಸೇವೆ ಸುಧಾರಣೆಗೆ ಮನವಿ

ಹೊಸಪೇಟೆ/ವಿಜಯನಗರ: ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ) ಆಗಿ ಅಧಿಕಾರ ಸ್ವೀಕರಿಸಿರುವ ಡಾ. ಟಿ. ಲಿಂಗರಾಜು ಅವರನ್ನು ಸ್ಲಂ ಜನರ ಸಂಘಟನೆ ಕರ್ನಾಟಕದ ಜಿಲ್ಲಾ ಸಮಿತಿ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳು ಆರೋಗ್ಯ ಇಲಾಖೆಯ ಅಭಿವೃದ್ಧಿ ಹಾಗೂ ಸಾರ್ವಜನಿಕ ಆರೋಗ್ಯ ಸೇವೆಗಳ ಕುರಿತು ಡಿಎಚ್‌ಒ ಅವರೊಂದಿಗೆ ಸಮಾಲೋಚನೆ ನಡೆಸಿದರು. ಹೊಸದಾಗಿ ನಿರ್ಮಾಣಗೊಂಡಿರುವ 250 ಹಾಸಿಗೆಗಳ ಜಿಲ್ಲಾಸ್ಪತ್ರೆಯನ್ನು ಯಾವುದೇ ವಿಳಂಬವಿಲ್ಲದೆ ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಸರ್ಕಾರಿ ಬ್ಲಡ್ ಬ್ಯಾಂಕ್ ಸ್ಥಾಪಿಸುವ ಅಗತ್ಯವಿದ್ದು, ತುರ್ತು ಚಿಕಿತ್ಸೆಗೆ ಇದು ಸಹಕಾರಿಯಾಗಲಿದೆ ಎಂದು ತಿಳಿಸಿದರು. ಅಲ್ಲದೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸೇವೆಗಳನ್ನು ಮತ್ತಷ್ಟು ಬಲಪಡಿಸಿ, ಹೆರಿಗೆ ಸೇರಿದಂತೆ ತುರ್ತು ಚಿಕಿತ್ಸೆಗಳಿಗಾಗಿ ಗರ್ಭಿಣಿಯರನ್ನು ಪಕ್ಕದ ಜಿಲ್ಲೆಗಳಿಗೆ ರೆಫರ್ ಮಾಡುವ ಪರಿಸ್ಥಿತಿ ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಆರೋಗ್ಯ ಇಲಾಖೆಯ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಲು ಸಾರ್ವಜನಿಕ ಸಂಘಟನೆಗಳೊಂದಿಗೆ ನಿಯಮಿತ ಸಭೆಗಳನ್ನು ನಡೆಸಿ, ಜನಪರ ಹಾಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಅಗತ್ಯ ಸುಧಾರಣೆಗಳನ್ನು ಜಾರಿಗೆ ತರಬೇಕೆಂದು ಸಂಘಟನೆ ಮನವಿ ಮಾಡಿತು.

ಮನವಿಗೆ ಪ್ರತಿಕ್ರಿಯಿಸಿದ ಡಾ. ಟಿ. ಲಿಂಗರಾಜು, ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವುದು ಇಲಾಖೆಯ ಆದ್ಯತೆಯಾಗಿದ್ದು, ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಎಚ್. ಶೇಷು, ಉಪಾಧ್ಯಕ್ಷ ತನ್ವೀರ್ ಅಹ್ಮದ್, ಪ್ರಧಾನ ಕಾರ್ಯದರ್ಶಿ ಎನ್. ವೆಂಕಟೇಶ್, ಸಂಘಟನಾ ಕಾರ್ಯದರ್ಶಿ ಗುತ್ತಿ ಕೈಲಾಸ್, ಖಜಾಂಚಿ ಕೃಷ್ಣ, ಮಹಿಳಾ ಘಟಕದ ಅಧ್ಯಕ್ಷೆ ಹುಲಿಗೆಮ್ಮ, ಉಪಾಧ್ಯಕ್ಷೆ ನೂರ್ ಜಹಾನ್ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X