Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಗ್ಯಾರಂಟಿ ಯೋಜನೆಗಳ...

Vijayanagara | ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಬೇಡ : ಪಿ.ಟಿ.ಪರಮೇಶ್ವರ ನಾಯ್ಕ್

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ12 Nov 2026 7:54 PM IST
share
Vijayanagara | ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಬೇಡ : ಪಿ.ಟಿ.ಪರಮೇಶ್ವರ ನಾಯ್ಕ್

ವಿಜಯನಗರ (ಹೊಸಪೇಟೆ) : ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸರ್ಕಾರದ ಗ್ಯಾರಂಟಿ ಭರವಸೆಯನ್ನು ಸಾಕಾರಗೊಳಿಸಲು ಎಲ್ಲ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ವಿಶೇಷವಾಗಿ ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುವ ಪಡಿತರ ಅಕ್ಕಿ ದುರುಪಯೋಗವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ ನಾಯ್ಕ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರ ಬಡವರ ಹಸಿವು ನೀಗಿಸುವ ಉದ್ದೇಶದಿಂದ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿದೆ. ಆದರೆ ಜಿಲ್ಲೆ ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ಪಡಿತರ ತಲುಪುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿವೆ. ನ್ಯಾಯಬೆಲೆ ಅಂಗಡಿಗಳ ಪಕ್ಕದಲ್ಲಿಯೇ ಆಟೋಗಳನ್ನು ನಿಲ್ಲಿಸಿ ಪಡಿತರವನ್ನು ತೂಕ ಹಾಕಿ ಸಾಗಿಸುತ್ತಿರುವುದು ಕಂಡುಬರುತ್ತಿದ್ದರೂ ಅಧಿಕಾರಿಗಳ ಗಮನಕ್ಕೆ ಬಾರದಿರುವುದು ದುರದೃಷ್ಟಕರ. ಇಂತಹ ಅಕ್ರಮಗಳನ್ನು ತಡೆಯಲು ಅಧಿಕಾರಿಗಳು ನಿರಂತರ ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

35 ಎಫ್‌ಐಆರ್ ದಾಖಲು, 25 ವಾಹನಗಳ ಜಪ್ತಿ :

ಆಹಾರ ಇಲಾಖೆಯ ಉಪ ನಿರ್ದೇಶಕ ರಯಾಜ್ ಮಾತನಾಡಿ, ಅನ್ನಭಾಗ್ಯ ಯೋಜನೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಯೋಜನೆಯ ದುರುಪಯೋಗ ತಡೆಯಲು ಸಾರ್ವಜನಿಕರಿಂದ ಲಭ್ಯವಾಗುವ ಮಾಹಿತಿಯ ಆಧಾರದಲ್ಲಿ ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಅಕ್ರಮವಾಗಿ ಪಡಿತರ ಸಾಗಾಟ ಮಾಡುತ್ತಿದ್ದ ವಾಹನಗಳನ್ನು ಗುರುತಿಸಿ 35 ಪ್ರಕರಣಗಳನ್ನು ದಾಖಲಿಸಲಾಗಿದೆ. 19 ಜನರನ್ನು ಬಂಧಿಸಲಾಗಿದ್ದು, 25 ವಾಹನಗಳು ಹಾಗೂ 13,078 ಕೆ.ಜಿ. ಪಡಿತರವನ್ನು ಜಪ್ತಿ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಗೃಹಲಕ್ಷ್ಮಿ ಯೋಜನೆಯ 14ನೇ ಕಂತಿನ ಹಣ ವಿವಿಧ ತಾಂತ್ರಿಕ ಕಾರಣಗಳಿಂದ ವಿಳಂಬವಾಗಿತ್ತು. ಆದರೆ ದಸರಾ ಹಬ್ಬದ ಹಿನ್ನೆಲೆಯಲ್ಲಿ ಮುಂಗಡವಾಗಿ ಒಂದು ಕಂತಿನ ಹಣ ಪಾವತಿಸಲಾಗಿದೆ. ದೀಪಾವಳಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳ ಮೂರು ಕಂತುಗಳ ಬಾಕಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಶೀಘ್ರದಲ್ಲೇ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಹಣ ಜಮೆಯಾಗಲಿದೆ ಎಂದು ತಿಳಿಸಿದರು.

ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರು, ಶೌಚಾಲಯ, ಮಹಿಳೆಯರ ವಿಶ್ರಾಂತಿ ಕೊಠಡಿ ಸೇರಿದಂತೆ ಮೂಲಸೌಕರ್ಯಗಳ ಕೊರತೆ ಹಾಗೂ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆಯಾಗದಿರುವ ಕುರಿತು ಸಾಕಷ್ಟು ದೂರುಗಳು ಬಂದಿವೆ. ಸಾರ್ವಜನಿಕರಿಗೆ, ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸುವುದು ಅತ್ಯಂತ ಅಗತ್ಯ. ಆದ್ದರಿಂದ ಬಸ್ ನಿಲ್ದಾಣದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸುವುದರ ಜತೆಗೆ ಕುಡಿಯುವ ನೀರು, ಸ್ವಚ್ಛ ಶೌಚಾಲಯ ಹಾಗೂ ಮಹಿಳೆಯರ ವಿಶ್ರಾಂತಿ ಕೊಠಡಿಯ ವ್ಯವಸ್ಥೆಯನ್ನು ಕೂಡಲೇ ಸರಿಪಡಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾರಿಗೆ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 500 ಹೊಸ ಬಸ್‌ಗಳನ್ನು ಒದಗಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರದಲ್ಲೇ ನೂತನ ಬಸ್‌ಗಳ ಪೂರೈಕೆಯಾಗಲಿದೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಪ್ರಗತಿ ವಿವರ :

ಅನ್ನಭಾಗ್ಯ : ಜಿಲ್ಲೆಯ 2,99,999 ಅರ್ಹ ಕುಟುಂಬಗಳ 11,59,797 ಫಲಾನುಭವಿಗಳಿಗೆ ಪಡಿತರ ವಿತರಿಸಲಾಗುತ್ತಿದೆ. 2023ರ ಜುಲೈನಿಂದ 2024ರ ಡಿಸೆಂಬರ್‌ವರೆಗೆ ಒಟ್ಟು 285.92 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ಅರ್ಹ ಫಲಾನುಭವಿಗಳಿಗೆ ಪಾವತಿಸಲಾಗಿದೆ. ತದನಂತರ ಹಣದ ಬದಲಾಗಿ ಪ್ರತಿ ಫಲಾನುಭವಿಗೆ ಐದು ಕೆ.ಜಿ. ಅಕ್ಕಿ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಗೃಹಜ್ಯೋತಿ : ಜಿಲ್ಲೆಯಾದ್ಯಂತ ಒಟ್ಟು 3,22,204 ವಿದ್ಯುತ್ ಸ್ಥಾವರಗಳ ಪೈಕಿ 3,01,244 ಸ್ಥಾವರಗಳು ಯೋಜನೆಯಡಿ ನೋಂದಣಿಯಾಗಿವೆ. ನೋಂದಾಯಿತ ಸ್ಥಾವರಗಳಿಗೆ ಸಂಬಂಧಿಸಿದಂತೆ 531.32 ಕೋಟಿ ರೂ. ಮೊತ್ತವನ್ನು ಇಲಾಖೆಯಿಂದ ಭರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಗೃಹಲಕ್ಷ್ಮಿ : ಜಿಲ್ಲೆಯಲ್ಲಿ 3,02,616 ಕುಟುಂಬದ ಯಜಮಾನಿಯರಿದ್ದು, ಈ ಪೈಕಿ 3,02,490 ಫಲಾನುಭವಿಗಳು ನೋಂದಣಿಯಾಗಿದ್ದಾರೆ. ನೋಂದಾಯಿತ ಅರ್ಹ ಫಲಾನುಭವಿಗಳಿಗೆ ಜುಲೈ ಅಂತ್ಯದವರೆಗೆ 1,893.82 ಕೋಟಿ ರೂ. ಅನುದಾನ ಭರಿಸಲಾಗಿದೆ. ಪ್ರಸ್ತುತ ಆಗಸ್ಟ್‌ನಿಂದ ಅಕ್ಟೋಬರ್‌ವರೆಗಿನ ಮೂರು ತಿಂಗಳ ಕಂತುಗಳಿಗೆ 170 ಕೋಟಿ ರೂ. ಅನುದಾನ ಲಭ್ಯವಿದ್ದು, ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ತಿಳಿಸಿದರು.

ಕೆಲವು ಫಲಾನುಭವಿಗಳು ಮೃತಪಟ್ಟ ನಂತರವೂ ಅವರ ಖಾತೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗಿರುವ ಪ್ರಕರಣಗಳಿವೆ. ಸ್ಥಳೀಯ ಆಡಳಿತ ಸಂಸ್ಥೆಗಳ ಸಮನ್ವಯದೊಂದಿಗೆ ಇಂತಹ ಪ್ರಕರಣಗಳನ್ನು ಪರಿಶೀಲಿಸಿ, ಮೃತಪಟ್ಟವರ ಖಾತೆಗಳಿಗೆ ಜಮೆಯಾದ ಹಣವನ್ನು ಸರ್ಕಾರಕ್ಕೆ ಮರುಪಾವತಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಗಂಗಪ್ಪ, ಜಿಲ್ಲೆಯಲ್ಲಿ 3,046 ಫಲಾನುಭವಿಗಳು ಮೃತಪಟ್ಟಿದ್ದು, ಅವರ ಖಾತೆಗಳಿಗೆ ಜಮೆಯಾಗಿದ್ದ 79,490 ರೂ. ಹಣವನ್ನು ಸರ್ಕಾರಕ್ಕೆ ಮರುಪಾವತಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಶಕ್ತಿ ಯೋಜನೆ : ಶಕ್ತಿ ಯೋಜನೆಯಡಿ 2026ರ ಅಕ್ಟೋಬರ್‌ವರೆಗೆ ಜಿಲ್ಲೆಯಲ್ಲಿ 11.83 ಕೋಟಿ ವಯಸ್ಕ ಪ್ರಯಾಣಿಕರು ಹಾಗೂ 53.98 ಲಕ್ಷ ಮಕ್ಕಳು ಸೇರಿದಂತೆ ಒಟ್ಟು 12.36 ಕೋಟಿ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಇವರ ಪ್ರಯಾಣಕ್ಕಾಗಿ ಸರ್ಕಾರದಿಂದ 497.68 ಕೋಟಿ ರೂ. ಮೊತ್ತವನ್ನು ಭರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಯುವನಿಧಿ : ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 13,754 ಪದವೀಧರರು ಹಾಗೂ 342 ಡಿಪ್ಲೊಮಾ ಪದವೀಧರರು ಸೇರಿದಂತೆ ಒಟ್ಟು 14,096 ಯುವಕರು ನೋಂದಣಿಯಾಗಿದ್ದಾರೆ. 2024ರ ಜನವರಿಯಿಂದ 2026ರ ಆಗಸ್ಟ್‌ವರೆಗೆ ಫಲಾನುಭವಿಗಳಿಗೆ 32.93 ಕೋಟಿ ರೂ. ಅನುದಾನ ಪಾವತಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ. ಶಿವಮೂರ್ತಿ, ಮುಖ್ಯ ಯೋಜನಾಧಿಕಾರಿ ಜೆ.ಎಂ. ಅನ್ನದಾನಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X