Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | 30,623 ಮತದಾರರಿಗೆ...

Vijayanagara | 30,623 ಮತದಾರರಿಗೆ ನೋಟಿಸ್; ಸೆ.23ರವರೆಗೆ ಆಕ್ಷೇಪಣೆಗೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ24 Aug 2026 8:02 PM IST
share
Vijayanagara | 30,623 ಮತದಾರರಿಗೆ ನೋಟಿಸ್; ಸೆ.23ರವರೆಗೆ ಆಕ್ಷೇಪಣೆಗೆ ಅವಕಾಶ

ವಿಜಯನಗರ (ಹೊಸಪೇಟೆ), ಆ.24: ಜಿಲ್ಲೆಯ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ–2026ರ ಪ್ರಕ್ರಿಯೆ ಮುಂದುವರಿದಿದ್ದು, ಮತದಾರರ ಪಟ್ಟಿಯಲ್ಲಿನ ಅಸಂಗತತೆ ಹಾಗೂ ಮ್ಯಾಪಿಂಗ್ ಆಗದಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 30,623 ಮತದಾರರಿಗೆ ನೋಟಿಸ್ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.24ರಂದು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 9,94,157 ಮತದಾರರಿದ್ದು, ಈ ಪೈಕಿ 9,722 ಮತದಾರರನ್ನು ಅಸಂಗತತೆ ವಿಭಾಗದಲ್ಲಿ ಹಾಗೂ 10,901 ಮತದಾರರನ್ನು ಮ್ಯಾಪಿಂಗ್ ಆಗದ ವಿಭಾಗದಲ್ಲಿ ಗುರುತಿಸಲಾಗಿದೆ. ಒಟ್ಟಾರೆ 30,623 ಪ್ರಕರಣಗಳಿಗೆ ನೋಟಿಸ್ ಜಾರಿಗೊಳಿಸಲಾಗುತ್ತಿದೆ ಎಂದರು.

ಕ್ಷೇತ್ರವಾರು ಹಡಗಲಿ ಕ್ಷೇತ್ರದಲ್ಲಿ 8,474, ಹಗರಿಬೊಮ್ಮನಹಳ್ಳಿ 10,205, ವಿಜಯನಗರ 2,436, ಕೂಡ್ಲಿಗಿ 1,821 ಹಾಗೂ ಹರಪನಹಳ್ಳಿ ಕ್ಷೇತ್ರದಲ್ಲಿ 7,687 ಮತದಾರರಿಗೆ ನೋಟಿಸ್ ನೀಡಲಾಗುತ್ತಿದೆ. ಈ ಪ್ರಕರಣಗಳನ್ನು ನೇರವಾಗಿ ಮತದಾರರ ಹೆಸರು ಅಳಿಸಲಾಗಿದೆ ಎಂದು ಪರಿಗಣಿಸಬಾರದು. ನೋಟಿಸ್ ನೀಡಿ ಅಗತ್ಯ ದಾಖಲೆಗಳೊಂದಿಗೆ ಪರಿಶೀಲನೆ ನಡೆಸಬೇಕಾದ ಪ್ರಕರಣಗಳಾಗಿವೆ ಎಂದು ಸ್ಪಷ್ಟಪಡಿಸಿದರು.

ಕರಡು ಮತದಾರರ ಪಟ್ಟಿಯನ್ನು ಸೆ.23ರವರೆಗೆ ಸಾರ್ವಜನಿಕರು ಪರಿಶೀಲಿಸಬಹುದಾಗಿದೆ. ಈ ಅವಧಿಯಲ್ಲಿ ಮತದಾರರು ತಮ್ಮ ಹೆಸರು, ವಿಳಾಸ ಹಾಗೂ ಇತರ ವಿವರಗಳನ್ನು ಪರಿಶೀಲಿಸಿ, ತಿದ್ದುಪಡಿ ಅಥವಾ ಆಕ್ಷೇಪಣೆಗಳಿದ್ದರೆ ಸಂಬಂಧಪಟ್ಟ ಚುನಾವಣಾಧಿಕಾರಿಗಳಿಗೆ ಅರ್ಜಿ ಸಲ್ಲಿಸಬಹುದು. ನೋಟಿಸ್ ಪಡೆದವರು ಅಗತ್ಯ ದಾಖಲೆಗಳೊಂದಿಗೆ ಎಇಆರ್‌ಒ ಮುಂದೆ ಹಾಜರಾಗಬೇಕು. ಪರಿಶೀಲನೆ ಬಳಿಕ ಎಇಆರ್‌ಒ ಅವರು ಸ್ಪೀಕಿಂಗ್ ಆರ್ಡರ್ ಮೂಲಕ ಹೆಸರು ಪಟ್ಟಿಯಲ್ಲಿ ಉಳಿಸಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಲು ಬಯಸುವವರು ಫಾರಂ–6 ಸಲ್ಲಿಸಬಹುದು. ಆಧಾರ್ ಕಾರ್ಡ್ ಅನ್ನು ಕೇವಲ ಗುರುತಿನ ದಾಖಲೆಯಾಗಿ ಪರಿಗಣಿಸಲಾಗುತ್ತದೆ ಎಂದರು.

ಜಿಲ್ಲೆಯ ಒಟ್ಟು 9,94,157 ಮತದಾರರಲ್ಲಿ 4,99,999 ಪುರುಷರು, 4,94,952 ಮಹಿಳೆಯರು, 106 ತೃತೀಯ ಲಿಂಗಿಗಳು ಹಾಗೂ 353 ಸೇವಾ ಮತದಾರರು ಇದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಮತದಾರರು ಕರಡು ಪಟ್ಟಿಯನ್ನು ಪರಿಶೀಲಿಸಿ, ಯಾವುದೇ ಲೋಪ ಅಥವಾ ತಿದ್ದುಪಡಿ ಅಗತ್ಯವಿದ್ದಲ್ಲಿ ಸೆ.23ರೊಳಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು. ಮತದಾರರ ಪಟ್ಟಿಗೆ ಸಂಬಂಧಿಸಿದ ಮಾಹಿತಿಗಾಗಿ ವಿಜಯನಗರ ಜಿಲ್ಲಾಡಳಿತದ ಅಧಿಕೃತ ಜಾಲತಾಣವನ್ನು ಸಂಪರ್ಕಿಸಬಹುದು. ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಉಪಸ್ಥಿತರಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X