Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಹಡಪದ ಅಪ್ಪಣ್ಣನವರ...

Vijayanagara | ಹಡಪದ ಅಪ್ಪಣ್ಣನವರ ಜಯಂತಿ ಅರ್ಥಪೂರ್ಣ ಆಚರಣೆಗೆ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ24 July 2026 11:10 PM IST
share
Vijayanagara | ಹಡಪದ ಅಪ್ಪಣ್ಣನವರ ಜಯಂತಿ ಅರ್ಥಪೂರ್ಣ ಆಚರಣೆಗೆ ಸಿದ್ಧತೆ

ಕೂಡ್ಲಿಗಿ (ವಿಜಯನಗರ): ಜುಲೈ 29ರಂದು ನಡೆಯಲಿರುವ ಶ್ರೀ ಹಡಪದ ಅಪ್ಪಣ್ಣನವರ ಜಯಂತಿಯನ್ನು ತಾಲೂಕು ಮಟ್ಟದಲ್ಲಿ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ತಾಲೂಕು ಆಡಳಿತ ಕಚೇರಿ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

ಗ್ರೇಡ್-2 ತಹಶೀಲ್ದಾರ್ ರಾಮಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲೂಕು ಆಡಳಿತ ಸೌಧ, ಶಾಲೆ-ಕಾಲೇಜುಗಳು, ಗ್ರಾಮ ಪಂಚಾಯಿತಿಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಜಯಂತಿ ಆಚರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೆ. ವೆಂಕಟೇಶ್ ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಶಿಸ್ತುಬದ್ಧವಾಗಿ ಜಯಂತಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸ, ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲು ತೀರ್ಮಾನಿಸಲಾಯಿತು. ಸಮಾಜದ ಮುಖಂಡರು ಹಡಪದ ಅಪ್ಪಣ್ಣನವರ ಸಮಾನತೆ, ಶ್ರಮ, ಕಾಯಕ ಮತ್ತು ಸಾಮಾಜಿಕ ನ್ಯಾಯದ ಸಂದೇಶವನ್ನು ಯುವಜನರಿಗೆ ತಲುಪಿಸುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಪಟ್ಟರು.

ಜಯಂತಿ ಅಂಗವಾಗಿ ಊಟೋಪಹಾರ ವ್ಯವಸ್ಥೆ, ವೇದಿಕೆ ಕಾರ್ಯಕ್ರಮ ಹಾಗೂ ಉಪನ್ಯಾಸಕರ ಆಯ್ಕೆ ಕುರಿತು ವಿವಿಧ ಮುಖಂಡರು ಸಲಹೆಗಳನ್ನು ನೀಡಿದರು.

ಸಭೆಯಲ್ಲಿ ಪಂಚಾಯತ್ ರಾಜ್ ಮುಖ್ಯಾಧಿಕಾರಿ ದಾದಪೀರ್, ಕೋಟೇಶ, ಬಿಇಒ ಕಚೇರಿಯ ಸಿಆರ್ಪಿ ಶಿವಕುಮಾರ, ಕರ್ನಾಟಕ ರಕ್ಷಣಾ ವೇದಿಕೆಯ ಕಾಟೇರ ಹಾಲೇಶ, ಸಮಾಜದ ಹಿರಿಯ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X