Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ತುಂಗಭದ್ರಾ ಕ್ರಸ್ಟ್...

Vijayanagara | ತುಂಗಭದ್ರಾ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆಗೆ ಭರದ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ24 Jun 2026 4:45 PM IST
share
Vijayanagara | ತುಂಗಭದ್ರಾ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆಗೆ ಭರದ ಸಿದ್ಧತೆ

ಹೊಸಪೇಟೆ/ವಿಜಯನಗರ : ತುಂಗಭದ್ರಾ ಜಲಾಶಯದ ನವೀಕರಣಗೊಂಡ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆಗೆ ಸಕಲ ಸಿದ್ಧತೆಗಳು ಭರದಿಂದ ಸಾಗಿದ್ದು, ಜೂ.25ರಂದು ನಡೆಯಲಿರುವ ಐತಿಹಾಸಿಕ ಕಾರ್ಯಕ್ರಮಕ್ಕಾಗಿ ಜಲಾಶಯ ಪ್ರದೇಶ ಸಂಪೂರ್ಣ ಸಿಂಗಾರಗೊಂಡಿದೆ. ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಆಡಳಿತ ಯಂತ್ರ ಅಂತಿಮ ಹಂತದ ಸಿದ್ಧತೆಗಳಲ್ಲಿ ತೊಡಗಿದೆ.

ಜಲಾಶಯದ ಮುಂಭಾಗವನ್ನು ಹೂವಿನ ಅಲಂಕಾರದಿಂದ ಸಜ್ಜುಗೊಳಿಸಲಾಗಿದ್ದು, ಮದುವಣಗಿತ್ತಿಯಂತೆ ಕಂಗೊಳಿಸುತ್ತಿದೆ. ಜಲಾಶಯದ ಪ್ರವೇಶ ದ್ವಾರ ಸೇರಿದಂತೆ ಸಂಪೂರ್ಣ ಪ್ರದೇಶದಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಗಣ್ಯರ ಆಗಮನದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಸಾರ್ವಜನಿಕರ ಜಲಾಶಯ ವೀಕ್ಷಣೆಗೆ ನಿರ್ಬಂಧ ಹೇರಲಾಗಿದ್ದು, ತುಂಗಭದ್ರಾ ಅಣೆಕಟ್ಟು ಸುತ್ತಮುತ್ತ ಪೊಲೀಸ್ ಕಣ್ಗಾವಲು ಹೆಚ್ಚಿಸಲಾಗಿದೆ.

ವಿಜಯನಗರ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಸ್ಥಳಕ್ಕೆ ಭೇಟಿ ನೀಡಿ ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದರು. ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದ ಮುಂಭಾಗ ಹಾಗೂ ಹೊಸಪೇಟೆ ನಗರ ಪ್ರವೇಶ ರಸ್ತೆಯಲ್ಲಿ ತುರ್ತು ಡಾಂಬರೀಕರಣ ಕಾಮಗಾರಿ ನಡೆಸಿರುವುದು ಸಾರ್ವಜನಿಕರ ಗಮನ ಸೆಳೆದಿದೆ. ಹಲವು ತಿಂಗಳುಗಳಿಂದ ತೆಗ್ಗು-ಗುಂಡಿಗಳಿಂದ ಹಾಳಾಗಿದ್ದ ರಸ್ತೆಗಳಿಗೆ ಇದೀಗ ಡಾಂಬರ್ ಹಾಸಿರುವುದಕ್ಕೆ ಕೆಲವರು ಸ್ವಾಗತ ವ್ಯಕ್ತಪಡಿಸಿದರೆ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳು ಗಣ್ಯರ ಭೇಟಿಯ ಸಂದರ್ಭದಲ್ಲಿ ಮಾತ್ರ ರಸ್ತೆ ಅಭಿವೃದ್ಧಿಗೆ ಮುಂದಾಗಿದ್ದಾರೆ ಎಂದು ಕೆಲ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ದಿನನಿತ್ಯ ಸಾರ್ವಜನಿಕರು ಸಂಚರಿಸುವ ರಸ್ತೆಗಳ ದುರಸ್ತಿಗೆ ಗಮನಹರಿಸದ ಅಧಿಕಾರಿಗಳು, ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಕಾಮಗಾರಿ ಕೈಗೊಂಡಿರುವುದು ವಿಷಾದನೀಯ” ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನಡೆಯಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮವು ಜಲ ಸಂಪನ್ಮೂಲ ಸಹಕಾರದ ಸಂಕೇತವಾಗಿ ರೂಪುಗೊಳ್ಳಲಿದ್ದು, ಈ ಐತಿಹಾಸಿಕ ಕ್ಷಣಕ್ಕೆ ವಿಜಯನಗರ ಜಿಲ್ಲೆ ಸಾಕ್ಷಿಯಾಗಲು ಸಜ್ಜಾಗಿದೆ.

Tags

Tungabhadra Crest Gatevijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X