Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಸೋನಮ್ ವಾಂಗ್ಚುಕ್ ಬಂಧನ...

Vijayanagara | ಸೋನಮ್ ವಾಂಗ್ಚುಕ್ ಬಂಧನ ಖಂಡಿಸಿ ಹೊಸಪೇಟೆಯಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ20 July 2026 10:03 PM IST
share
Vijayanagara | ಸೋನಮ್ ವಾಂಗ್ಚುಕ್ ಬಂಧನ ಖಂಡಿಸಿ ಹೊಸಪೇಟೆಯಲ್ಲಿ ಪ್ರತಿಭಟನೆ
ಪ್ರತಿಭಟನೆಗೂ ಮುನ್ನವೇ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು; ಬಳಿಕ ಬಿಡುಗಡೆ

ಹೊಸಪೇಟೆ/ವಿಜಯನಗರ: ಲಡಾಖ್ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ದೆಹಲಿ ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ವಿವಿಧ ಸಂಘಟನೆಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಆರಂಭಕ್ಕೂ ಮುನ್ನವೇ ಹೋರಾಟದ ನೇತೃತ್ವ ವಹಿಸಿದ್ದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಆಕ್ರೋಶಕ್ಕೆ ಕಾರಣವಾಯಿತು.

ವಿಜಯನಗರ ಕಾಲೇಜು ಎದುರು ಸೇರಿದ್ದ ಪ್ರತಿಭಟನಾಕಾರರು ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಮುಂದಾಗುತ್ತಿದ್ದ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಪ್ರಮುಖ ಮುಖಂಡ ಸೋಮಶೇಖರ ಬಣ್ಣದ ಮನೆ ಸೇರಿದಂತೆ ಕೆಲವರನ್ನು ವಶಕ್ಕೆ ಪಡೆದರು. ಇದನ್ನು ಖಂಡಿಸಿ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು, “ನಮ್ಮನ್ನೂ ಬಂಧಿಸಿ, ಇಲ್ಲವೇ ಬಂಧಿತ ಮುಖಂಡರನ್ನು ಕೂಡಲೇ ಬಿಡುಗಡೆಗೊಳಿಸಿ” ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಹಕ್ಕನ್ನೇ ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. ದೆಹಲಿಯಲ್ಲಿ ನಡೆದ ರೀತಿಯನ್ನೇ ರಾಜ್ಯದಲ್ಲಿಯೂ ಅನುಸರಿಸಲಾಗುತ್ತಿದೆ ಎಂದು ಸರ್ಕಾರದ ಕ್ರಮವನ್ನು ಟೀಕಿಸಿದರು.

ಬಳಿಕ ಬಂಧಿತ ಮುಖಂಡ ಸೋಮಶೇಖರ ಬಣ್ಣದ ಮನೆ ಹಾಗೂ ಇತರರನ್ನು ಪೊಲೀಸರು ಬಿಡುಗಡೆಗೊಳಿಸಿದರು. ಬಿಡುಗಡೆಗೊಂಡ ನಂತರ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು.

ಅಂತಿಮವಾಗಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಶಾಂತಿಯುತವಾಗಿ ಪ್ರತಿಭಟನೆಯನ್ನು ಮುಕ್ತಾಯಗೊಳಿಸಿದರು. ಇದೇ ವೇಳೆ, ನೀಟ್ ಪರೀಕ್ಷೆಗೆ ಸಂಬಂಧಿಸಿದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನಾಚರಣೆ ಸಲ್ಲಿಸಲಾಯಿತು.

Tags

Sonam WangchukHosapeteprotestvijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X