Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಎಚ್‌ಐವಿ, ಏಡ್ಸ್...

Vijayanagara | ಎಚ್‌ಐವಿ, ಏಡ್ಸ್ ಜಾಗೃತಿಗಾಗಿ ʼರೆಡ್ ರಿಬ್ಬನ್ ಮ್ಯಾರಥಾನ್ʼ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ15 Oct 2026 7:26 PM IST
share
Vijayanagara | ಎಚ್‌ಐವಿ, ಏಡ್ಸ್ ಜಾಗೃತಿಗಾಗಿ ʼರೆಡ್ ರಿಬ್ಬನ್ ಮ್ಯಾರಥಾನ್ʼ ಕಾರ್ಯಕ್ರಮ

ವಿಜಯನಗರ (ಹೊಸಪೇಟೆ) : ಮ್ಯಾರಥಾನ್ ಕೇವಲ ಓಟದ ಸ್ಪರ್ಧೆಯಲ್ಲ. ಇದು ಸಮಾಜದಲ್ಲಿ ಎಚ್‌ಐವಿ ಹಾಗೂ ಏಡ್ಸ್ ಕುರಿತು ಜಾಗೃತಿ ಮೂಡಿಸುವ ಮಹತ್ವದ ಜನಜಾಗೃತಿ ಕಾರ್ಯಕ್ರಮವಾಗಿದೆ ಎಂದು ಜಿಲ್ಲಾ ಎಚ್‌ಐವಿ ನಿಯಂತ್ರಣಾಧಿಕಾರಿ ಡಾ.ಭಾಸ್ಕರ್ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಎಚ್‌ಐವಿ ನಿಯಂತ್ರಣ ಘಟಕದ ವತಿಯಿಂದ ವಿವಿಧ ಸಂಘ-ಸಂಸ್ಥೆಗಳು ಮತ್ತು ಕಾಲೇಜುಗಳ ಸಹಯೋಗದಲ್ಲಿ ಆಯೋಜಿಸಿದ್ದ ರೆಡ್ ರಿಬ್ಬನ್ ಮ್ಯಾರಥಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಎಚ್‌ಐವಿ ಸೋಂಕಿನ ಬಗ್ಗೆ ಪ್ರತಿಯೊಬ್ಬರೂ ಸರಿಯಾದ ಅರಿವು ಬೆಳೆಸಿಕೊಳ್ಳುವ ಅಗತ್ಯವಿದೆ. ಎಚ್‌ಐವಿ ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕರು, ಯುವಜನರು ಹಾಗೂ ಎಲ್ಲ ಇಲಾಖೆಗಳು ಒಟ್ಟಾಗಿ ಕೈಜೋಡಿಸಬೇಕು ಎಂದು ಕರೆ ನೀಡಿದರು. ಎಚ್‌ಐವಿ ಸೋಂಕಿತರ ಬಗ್ಗೆ ಸಮಾಜದಲ್ಲಿ ಯಾವುದೇ ರೀತಿಯ ತಾರತಮ್ಯ ಮಾಡದೆ, ಅವರನ್ನು ಮಾನವೀಯತೆ ಮತ್ತು ಗೌರವದಿಂದ ಕಾಣಬೇಕು ಎಂದು ಹೇಳಿದರು.

ರೆಡ್ ರಿಬ್ಬನ್ ಮ್ಯಾರಥಾನ್ ಬೆಳಿಗ್ಗೆ 6.30ಕ್ಕೆ ವಿಜಯನಗರ ಮಹಾವಿದ್ಯಾಲಯದಿಂದ ಆರಂಭವಾಯಿತು. ಐದು ಕಿ.ಮೀ. ದೂರದ ಮ್ಯಾರಥಾನ್ ವಾಲ್ಮೀಕಿ ವೃತ್ತ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಕನಕದಾಸ ವೃತ್ತ ಹಾಗೂ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಸಾಗಿ ಪುನೀತ್ ರಾಜ್‌ಕುಮಾರ್ ವೃತ್ತದಲ್ಲಿ ಮುಕ್ತಾಯಗೊಂಡಿತು.

ನಗರದ ಪುನೀತ್ ರಾಜ್‌ಕುಮಾರ್ ವೃತ್ತದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಮ್ಯಾರಥಾನ್‌ನಲ್ಲಿ ವಿಜೇತರಾದ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರಿಗೆ ಪ್ರಮಾಣಪತ್ರ ಮತ್ತು ಬಹುಮಾನಗಳನ್ನು ವಿತರಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಜಂಬಯ್ಯ, ವಿಜಯನಗರ ಕಾಲೇಜಿನ ಪ್ರಾಂಶುಪಾಲ ಮಹಾಂತೇಶ್ ಎನ್. ಆರಾಧ್ಯಮಠ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಪ್ರತಿನಿಧಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X