Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | 50 ವರ್ಷಗಳಿಂದ ಹದಗೆಟ್ಟ...

Vijayanagara | 50 ವರ್ಷಗಳಿಂದ ಹದಗೆಟ್ಟ ರಸ್ತೆ: ಹಗರಿ ಗಜಾಪುರ ಗ್ರಾಮಸ್ಥರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ11 Aug 2026 9:52 PM IST
share
Vijayanagara | 50 ವರ್ಷಗಳಿಂದ ಹದಗೆಟ್ಟ ರಸ್ತೆ: ಹಗರಿ ಗಜಾಪುರ ಗ್ರಾಮಸ್ಥರ ಆಕ್ರೋಶ

ಕೊಟ್ಟೂರು (ವಿಜಯನಗರ): ಹರಪನಹಳ್ಳಿ ಹಾಗೂ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಗಳ ಗಡಿ ಭಾಗದಲ್ಲಿರುವ ಹಗರಿ ಗಜಾಪುರ ಗ್ರಾಮದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಕಳೆದ 45–50 ವರ್ಷಗಳಿಂದ ಗ್ರಾಮಸ್ಥರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಸಾರ್ವಜನಿಕರ ಸಂಚಾರಕ್ಕೆ ಅಪಾಯಕಾರಿಯಾಗಿರುವ ರಸ್ತೆಯನ್ನು ಕೂಡಲೇ ಪುನರ್‌ನಿರ್ಮಾಣ ಮಾಡಬೇಕು ಎಂದು ಸ್ಥಳೀಯ ಮುಖಂಡರಾದ ಕೆ. ಸತೀಶ್, ಪ್ರದೀಪ್ ಸೇರಿದಂತೆ ಗ್ರಾಮಸ್ಥರು ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಹಾಗೂ ವಿಜಯನಗರ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು ಒತ್ತಾಯಿಸಿದ್ದಾರೆ.

ಹಗರಿ ಗಜಾಪುರ ಗ್ರಾಮಸ್ಥರ ವಹಿವಾಟು, ವ್ಯಾಪಾರ, ಶಿಕ್ಷಣ ಹಾಗೂ ಆರೋಗ್ಯ ಸೇವೆಗಳಿಗೆ ಕೊಟ್ಟೂರು ಪ್ರಮುಖ ಕೇಂದ್ರವಾಗಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸುಮಾರು 5 ಕಿ.ಮೀ. ರಸ್ತೆಯಲ್ಲಿ 3 ಕಿ.ಮೀ. ಕೊಟ್ಟೂರು ತಾಲೂಕು ವ್ಯಾಪ್ತಿಗೆ ಹಾಗೂ ಉಳಿದ 2 ಕಿ.ಮೀ. ಹರಪನಹಳ್ಳಿ ತಾಲೂಕು ವ್ಯಾಪ್ತಿಗೆ ಬರುತ್ತದೆ.

ಗಡಿ ಭಾಗದ ರಸ್ತೆ ಎಂಬ ಕಾರಣಕ್ಕೆ ಎರಡೂ ತಾಲೂಕುಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ರಸ್ತೆ ದುರಸ್ತಿಗೆ ಹಲವು ಬಾರಿ ಪ್ರತಿಭಟನೆ ನಡೆಸಿದ ಬಳಿಕ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕರು ಸುಮಾರು 500 ಮೀಟರ್‌ವರೆಗೆ ಮಾತ್ರ ಸಿಸಿ ರಸ್ತೆ ನಿರ್ಮಿಸಿ ಕಾಮಗಾರಿ ಕೈಬಿಟ್ಟಿದ್ದಾರೆ. ಉಳಿದ ರಸ್ತೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಳೆಗಾಲದಲ್ಲಿ ಜೀವಭಯ :

ರಸ್ತೆಯುದ್ದಕ್ಕೂ ದೊಡ್ಡ ಗಾತ್ರದ ಗುಂಡಿಗಳು ಬಿದ್ದಿದ್ದು, ಮಳೆಗಾಲದಲ್ಲಿ ಗುಂಡಿಗಳಲ್ಲಿ ನೀರು ನಿಲ್ಲುವುದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳು ಜೀವಭಯದಿಂದ ಸಂಚರಿಸುವಂತಾಗಿದೆ. ಆಗಾಗ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿದ್ದು, ತುರ್ತು ಸಂದರ್ಭದಲ್ಲಿ ಆಂಬ್ಯುಲೆನ್ಸ್ ಸೇರಿದಂತೆ ಇತರ ವಾಹನಗಳು ಗ್ರಾಮಕ್ಕೆ ತಲುಪಲು ಸಮಸ್ಯೆಯಾಗುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ರಸ್ತೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ರಸ್ತೆ ತಡೆದು ಉಗ್ರ ಹೋರಾಟ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.

ಹರಪನಹಳ್ಳಿ ಕ್ಷೇತ್ರದ ಶಾಸಕಿ ಲತಾ ಮಲ್ಲಿಕಾರ್ಜುನ್ ಅವರು ಹಗರಿ ಗಜಾಪುರ ಗ್ರಾಮದ ರಸ್ತೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಜಿಲ್ಲಾ ಪಂಚಾಯಿತಿ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿ, ಶೀಘ್ರವೇ ಪೂರ್ಣ ಪ್ರಮಾಣದ ರಸ್ತೆ ಪುನರ್‌ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಸ್ಥಳೀಯ ಮುಖಂಡ ಕೆ. ಸತೀಶ್ ಆಗ್ರಹಿಸಿದ್ದಾರೆ.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X