Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಪ್ರತ್ಯೇಕ ಕಳವು ಪ್ರಕರಣ...

Vijayanagara | ಪ್ರತ್ಯೇಕ ಕಳವು ಪ್ರಕರಣ : 6 ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ9 July 2026 8:45 PM IST
share
Vijayanagara | ಪ್ರತ್ಯೇಕ ಕಳವು ಪ್ರಕರಣ : 6 ಆರೋಪಿಗಳ ಬಂಧನ
27 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 15 ಬೈಕ್‌ಗಳ ವಶ

ಹೊಸಪೇಟೆ/ವಿಜಯನಗರ : ವಿಜಯನಗರ ಜಿಲ್ಲಾ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಕಳವು ಪ್ರಕರಣಗಳನ್ನು ಭೇದಿಸಿ, 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ಒಟ್ಟು ಸುಮಾರು 27 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 15 ಕಳುವಾದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಜಾಹ್ನವಿ ಅವರು ಗುರುವಾರ ಹೊಸಪೇಟೆಯ ಎಸ್‌ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿ ನೀಡಿದರು.

ಹೊಸಪೇಟೆ ಹಾಗೂ ಹರಪನಹಳ್ಳಿ ಉಪವಿಭಾಗಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಚಿನ್ನಾಭರಣ ಮತ್ತು ಬೈಕ್ ಕಳವು ಪ್ರಕರಣಗಳ ತನಿಖೆಯನ್ನು ವಿಶೇಷ ತಂಡಗಳು ನಡೆಸಿ ಯಶಸ್ವಿಯಾಗಿ ಭೇದಿಸಿವೆ ಎಂದು ಅವರು ತಿಳಿಸಿದರು.

ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಕರಣದಲ್ಲಿ ಸುಮಾರು 11 ಲಕ್ಷ ರೂ. ಮೌಲ್ಯದ 6 ಬೈಕ್‌ಗಳು ಹಾಗೂ 33 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.

ಹರಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕಳವು ಪ್ರಕರಣದಲ್ಲಿ 2.80 ಲಕ್ಷ ರೂ. ಮೌಲ್ಯದ 28 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

ಚಿತ್ತವಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು ಪ್ರಕರಣದಲ್ಲಿ 4.75 ಲಕ್ಷ ರೂ. ಮೌಲ್ಯದ 9 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹೂವಿನಹಡಗಲಿ ಪೊಲೀಸ್ ಠಾಣೆ ವ್ಯಾಪ್ತಿಯ ಮತ್ತೊಂದು ಪ್ರಕರಣದಲ್ಲಿ 3 ಲಕ್ಷ ರೂ. ಮೌಲ್ಯದ 52 ಗ್ರಾಂ ಚಿನ್ನಾಭರಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಜಿಲ್ಲೆಯ ವಿವಿಧ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ 6 ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣಗಳ ಭೇದನೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ತನಿಖಾ ತಂಡದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಎಸ್‌ಪಿ ಜಾಹ್ನವಿ ಅಭಿನಂದಿಸಿದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X