Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಮಾನಸಿಕ ಆರೋಗ್ಯಕ್ಕೆ...

Vijayanagara | ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಿದರೆ ಆತ್ಮಹತ್ಯೆ ತಡೆಯಬಹುದು: ಡಾ.ಲಿಂಗರಾಜು

ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ17 Sept 2026 8:45 PM IST
share
Vijayanagara | ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಿದರೆ ಆತ್ಮಹತ್ಯೆ ತಡೆಯಬಹುದು: ಡಾ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಆತ್ಮಹತ್ಯೆ ಪ್ರಕರಣಗಳಿಗೆ ಖಿನ್ನತೆ, ಆರ್ಥಿಕ ಹಾಗೂ ಸಾಮಾಜಿಕ ಸಮಸ್ಯೆಗಳು ಪ್ರಮುಖ ಕಾರಣಗಳಾಗಿದ್ದು, ಸಹನೆ, ತಾಳ್ಮೆ ಮತ್ತು ಸಕಾಲಿಕ ಸಮಾಲೋಚನೆಯ ಮೂಲಕ ಆತ್ಮಹತ್ಯೆಗಳನ್ನು ತಡೆಯಲು ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ. ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ನಗರಸಭೆಯ ಸಂಯುಕ್ತಾಶ್ರಯದಲ್ಲಿ ಹೊಸಪೇಟೆ ನಗರಸಭೆ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾನಸಿಕ ಖಿನ್ನತೆ, ಮಾನಸಿಕ ಅಸ್ವಸ್ಥತೆ, ನಿರುದ್ಯೋಗ ಸೇರಿದಂತೆ ಹಲವು ಕಾರಣಗಳು ಆತ್ಮಹತ್ಯೆಗೆ ಪ್ರೇರೇಪಿಸುತ್ತವೆ. ಇಂತಹ ಸಂದರ್ಭಗಳಲ್ಲಿ ಸೂಕ್ತ ಸಲಹೆ, ಮಾರ್ಗದರ್ಶನ ಮತ್ತು ಆಪ್ತ ಸಮಾಲೋಚನೆ ಅತ್ಯಂತ ಮುಖ್ಯವಾಗಿದೆ. ಆರೋಗ್ಯ ಇಲಾಖೆಯ ಮೂಲಕ ಮಾನಸಿಕ ಆರೋಗ್ಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಏಪ್ರಿಲ್ 2025ರಿಂದ ಆಗಸ್ಟ್ 2026ರವರೆಗೆ 15ರಿಂದ 60 ವರ್ಷದೊಳಗಿನ 438 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಲ್ಲಿ 189 ಪುರುಷರು ಮತ್ತು 249 ಮಹಿಳೆಯರು ಸೇರಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ತಜ್ಞ ವೈದ್ಯರು, ಸಾಮಾಜಿಕ ಕಾರ್ಯಕರ್ತರಿಂದ ಸಮಾಲೋಚನೆ ಮತ್ತು ಅಗತ್ಯ ಔಷಧೋಪಚಾರ ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರಸಭೆ ಪೌರಾಯುಕ್ತ ಎರಗುಡಿ ಶಿವಕುಮಾರ್ ಮಾತನಾಡಿ, ಆತ್ಮಹತ್ಯೆ ತಡೆಗಟ್ಟಲು ಮಾನಸಿಕ ಆರೋಗ್ಯದ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದರು. ಕುಟುಂಬದ ಸದಸ್ಯರು, ವಿಶೇಷವಾಗಿ ಪೋಷಕರು ಮಕ್ಕಳೊಂದಿಗೆ ಮುಕ್ತವಾಗಿ ಬೆರೆತು ಅವರ ಸಮಸ್ಯೆಗಳನ್ನು ಆಲಿಸುವ ವಾತಾವರಣ ನಿರ್ಮಿಸಬೇಕು ಎಂದು ಸಲಹೆ ನೀಡಿದರು.

ಮದ್ಯಪಾನ, ಜೂಜಾಟ, ಆನ್‌ಲೈನ್ ಬೆಟ್ಟಿಂಗ್ ಹಾಗೂ ಮಟ್ಕಾದಂತಹ ದುಶ್ಚಟಗಳು ವ್ಯಕ್ತಿಯನ್ನು ಆರ್ಥಿಕ ಮತ್ತು ಮಾನಸಿಕ ಸಂಕಷ್ಟಕ್ಕೆ ತಳ್ಳುತ್ತವೆ. ಯಾವುದೇ ವೃತ್ತಿಯೂ ಕೀಳಲ್ಲ, ಪ್ರತಿಯೊಂದು ವೃತ್ತಿಗೂ ತನ್ನದೇ ಆದ ಗೌರವವಿದೆ ಎಂದು ಅವರು ಹೇಳಿದರು.

ಹಿರಿಯ ನ್ಯಾಯವಾದಿ ಕೆ. ಜಂಬಣ್ಣ ಮಾತನಾಡಿ, ವಿಶ್ವದಲ್ಲಿ ಪ್ರತಿ ವರ್ಷ ಸುಮಾರು 7.2 ಲಕ್ಷ ಮಂದಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಭಾರತದಲ್ಲಿ ಪ್ರತಿ 40 ಸೆಕೆಂಡಿಗೆ ಒಬ್ಬರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಹೇಳಿದರು. ಜಿಲ್ಲೆಯ ಅಂಕಿಅಂಶಗಳ ಪ್ರಕಾರ 35 ವರ್ಷದೊಳಗಿನ ಯುವಕರು ಹಾಗೂ ಪುರುಷರಲ್ಲಿ ಆತ್ಮಹತ್ಯೆ ಪ್ರಮಾಣ ಹೆಚ್ಚಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ತಿಳಿಸಿದರು.

ತಾಲೂಕು ಸಾರ್ವಜನಿಕ ಆಸ್ಪತ್ರೆಯ ವೈದ್ಯ ಡಾ. ಶರಣಬಸವ ಮಾತನಾಡಿ, ಮಾನಸಿಕ ಖಿನ್ನತೆ ಅಥವಾ ಒತ್ತಡದಿಂದ ಬಳಲುತ್ತಿರುವವರು ಮನೋವೈದ್ಯರು ಅಥವಾ ಆಪ್ತ ಸಮಾಲೋಚಕರ ನೆರವು ಪಡೆಯಲು ಹಿಂಜರಿಯಬಾರದು ಎಂದರು. ಆತ್ಮಹತ್ಯೆ ತಡೆಗಟ್ಟುವಲ್ಲಿ ವೈದ್ಯರ ಜೊತೆಗೆ ಶಿಕ್ಷಕರು, ಪೋಷಕರು, ಪೊಲೀಸ್ ಸಿಬ್ಬಂದಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಪಾತ್ರವೂ ಮಹತ್ವದ್ದಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಜಂಬಯ್ಯ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಭಾಸ್ಕರ್ ಡಿ., ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ಅಧಿಕಾರಿ ಡಾ. ಎಸ್.ಎಂ. ಹಿರೇಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಪೌರಕಾರ್ಮಿಕರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X