Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಪೊಲೀಸ್‌ ಠಾಣೆಯಲ್ಲಿ...

Vijayanagara | ಪೊಲೀಸ್‌ ಠಾಣೆಯಲ್ಲಿ ಯುವಕನ ಅನುಮಾನಾಸ್ಪದ ಸಾವು; ಕುಟುಂಬದಿಂದ 'ಲಾಕಪ್ ಡೆತ್' ಆರೋಪ

ವಾರ್ತಾಭಾರತಿವಾರ್ತಾಭಾರತಿ2 Aug 2026 5:25 PM IST
share
Vijayanagara | ಪೊಲೀಸ್‌ ಠಾಣೆಯಲ್ಲಿ ಯುವಕನ ಅನುಮಾನಾಸ್ಪದ ಸಾವು; ಕುಟುಂಬದಿಂದ ಲಾಕಪ್ ಡೆತ್ ಆರೋಪ
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್ಪಿ ಭೇಟಿ

ಹಗರಿಬೊಮ್ಮನಹಳ್ಳಿ/ವಿಜಯನಗರ : ಕುಟುಂಬ ಕಲಹದ ಹಿನ್ನೆಲೆಯಲ್ಲಿ 112 ತುರ್ತು ಸಹಾಯವಾಣಿ ಸಿಬ್ಬಂದಿಯಿಂದ ಪೊಲೀಸ್ ಠಾಣೆಗೆ ಕರೆತರಲಾಗಿದ್ದ 36 ವರ್ಷದ ಯುವಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.

"ಮೃತನ ಕುಟುಂಬಸ್ಥರು ಇದು ಸಹಜ ಸಾವು ಅಲ್ಲ, ಪೊಲೀಸ್ ಕಿರುಕುಳದಿಂದ ಸಂಭವಿಸಿದ ‘ಲಾಕಪ್ ಡೆತ್’" ಎಂದು ಆರೋಪಿಸಿದ್ದು, ಈ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಮೃತರನ್ನು ಜಾಲಿನಗರ ನಿವಾಸಿ ಖಲೀಲ್ (36) ಎಂದು ಗುರುತಿಸಲಾಗಿದೆ. ಕುಟುಂಬ ಕಲಹದ ಹಿನ್ನೆಲೆಯಲ್ಲಿ ಅವರ ಪತ್ನಿ 112 ತುರ್ತು ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದು, ಬಳಿಕ ಸ್ಥಳಕ್ಕೆ ತೆರಳಿದ ಸಿಬ್ಬಂದಿ ಖಲೀಲ್ ಅವರನ್ನು ಠಾಣೆಗೆ ಕರೆತಂದಿದ್ದರು ಎಂದು ತಿಳಿದುಬಂದಿದೆ.

"ಠಾಣೆಗೆ ಕರೆತಂದ ಬಳಿಕ ಏನಾಯಿತು, ಖಲೀಲ್ ಅವರ ಆರೋಗ್ಯ ಯಾವ ಕಾರಣಕ್ಕೆ ಹದಗೆಟ್ಟಿತು ಹಾಗೂ ಅವರು ಯಾವ ಸಂದರ್ಭಗಳಲ್ಲಿ ಮೃತಪಟ್ಟರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಠಾಣೆಯಲ್ಲಿಯೇ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾಗಿದೆ" ಎಂದು ಕುಟುಂಬಸ್ಥರು ಆರೋಪಿಸಿದ್ದು, ಈ ಕುರಿತು ಪೊಲೀಸ್ ಇಲಾಖೆಯಿಂದ ಅಧಿಕೃತ ಸ್ಪಷ್ಟನೆ ಇನ್ನೂ ಲಭ್ಯವಾಗಿಲ್ಲ.

ಖಲೀಲ್ ಅಸ್ವಸ್ಥಗೊಂಡ ನಂತರ ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಆಟೋದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾನ್ಹವಿ, ಡಿವೈಎಸ್ಪಿ ಮಲ್ಲೇಶ ದೊಡ್ಡಮನಿ, ಸಿಪಿಐ ವಿಕಾಸ್ ಲಮಾಣಿ ಸೇರಿದಂತೆ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ವೇಳೆ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆಸ್ಪತ್ರೆ ಆವರಣದಲ್ಲಿ ಮೃತನ ಸಂಬಂಧಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ತಿಳಿದುಬಂದಿದೆ.

Tags

Lockup deathpolice stationvijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X