Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ | ‘ಸಿಯೆಂಟ್ ವಿಜಯಪಥ’...

ವಿಜಯನಗರ | ‘ಸಿಯೆಂಟ್ ವಿಜಯಪಥ’ ಪ್ರಾಜೆಕ್ಟ್‌ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಚಾಲನೆ

ವಾರ್ತಾಭಾರತಿವಾರ್ತಾಭಾರತಿ20 Dec 2025 7:27 PM IST
share
ವಿಜಯನಗರ | ‘ಸಿಯೆಂಟ್ ವಿಜಯಪಥ’ ಪ್ರಾಜೆಕ್ಟ್‌ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಚಾಲನೆ

ವಿಜಯನಗರ (ಹೊಸಪೇಟೆ), ಡಿ.20 : ಕೃತಕ ಬುದ್ಧಿಮತ್ತೆ (ಎಐ), ಸ್ಟೆಮ್, ರೊಬೊಟಿಕ್ಸ್, ಕೋಡಿಂಗ್ ಹಾಗೂ ಡಿಜಿಟಲ್ ನಾವೀನ್ಯತೆಯಂತಹ ಭವಿಷ್ಯೋನ್ಮುಖ ಕೌಶಲ್ಯಗಳೊಂದಿಗೆ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ‘ಸಿಯೆಂಟ್ ವಿಜಯಪಥ’ ಉಪಕ್ರಮ ಸಹಕಾರಿಯಾಗಲಿದೆ ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ನಗರದ ಅಮರಾವತಿಯಲ್ಲಿರುವ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಸಿಯೆಂಟ್ ಫೌಂಡೇಶನ್ ಹಾಗೂ ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ‘ಸಿಯೆಂಟ್ ವಿಜಯಪಥ’ ಕೃತಕ ಬುದ್ಧಿಮತ್ತೆ ಉಪಕ್ರಮಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಐದು ಸರ್ಕಾರಿ ಶಾಲೆಗಳಲ್ಲಿ ಈ ಪ್ರಾಯೋಗಿಕ ಯೋಜನೆ ಜಾರಿಗೊಳಿಸಲಾಗಿದ್ದು, 6ರಿಂದ 10ನೇ ತರಗತಿಯ 2,000ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸುವ ಗುರಿ ಹೊಂದಿದೆ. ಜೊತೆಗೆ ಸಮಗ್ರ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮಗಳ ಮೂಲಕ 100ಕ್ಕೂ ಹೆಚ್ಚು ಶಿಕ್ಷಕರಿಗೆ ತರಬೇತಿ ನೀಡಲಾಗುತ್ತದೆ ಎಂದು ಹೇಳಿದರು.

ಈ ಯೋಜನೆಯಡಿ ಐದು ಸಂಪೂರ್ಣ ಸುಸಜ್ಜಿತ ಎಐ–ಸ್ಟೆಮ್ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುತ್ತಿದ್ದು, ಇದರಿಂದ ಸುಮಾರು 6,000 ಮನೆಗಳಿಗೆ ಸಕಾರಾತ್ಮಕ ಪರಿಣಾಮ ಬೀರುವ ನಿರೀಕ್ಷೆಯಿದೆ. ಪ್ರತಿ ಶಾಲೆಯಲ್ಲೂ ಕಂಪ್ಯೂಟರ್‌ಗಳು, ಐಒಟಿ ಸಕ್ರಿಯಗೊಳಿಸಿದ ಸಾಧನಗಳು, ಸ್ಟೆಮ್ ಹಾಗೂ ರೊಬೊಟಿಕ್ಸ್ ಕಿಟ್‌ಗಳು ಮತ್ತು ಬ್ರಾಡ್‌ಬ್ಯಾಂಡ್ ಸಂಪರ್ಕ ಹೊಂದಿದ ಸಂಪೂರ್ಣ ಕ್ರಿಯಾತ್ಮಕ ಎಐ ಲ್ಯಾಬ್ ಸ್ಥಾಪಿಸಲಾಗುತ್ತದೆ. ದೀರ್ಘಕಾಲೀನ ಪರಿಣಾಮ ಹಾಗೂ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು 200ಕ್ಕೂ ಹೆಚ್ಚು ಶಿಕ್ಷಕರಿಗೆ ರಚನಾತ್ಮಕ ತರಬೇತಿ ನೀಡಲಾಗುತ್ತದೆ ಎಂದರು.

ಎನ್‌ಇಪಿ–2020, ಡಿಜಿಟಲ್ ಇಂಡಿಯಾ ಹಾಗೂ ವಿಕಸಿತ ಭಾರತ್–2047 ಗುರಿಗಳೊಂದಿಗೆ ಹೊಂದಾಣಿಕೆಯಾಗಿರುವ ಸಿಯೆಂಟ್ ಎಐ ಲ್ಯಾಬ್ಸ್ ಯೋಜನೆ, ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಸನ್ನದ್ಧತೆಯನ್ನು ಬಲಪಡಿಸುವುದು ಹಾಗೂ ಹಿಂದುಳಿದ ಸಮುದಾಯಗಳಲ್ಲಿ ತಂತ್ರಜ್ಞಾನದ ಲಭ್ಯತೆಯ ಅಂತರವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.

ಸಿಯೆಂಟ್ ಲಿಮಿಟೆಡ್ ಸಂಸ್ಥಾಪಕ ಅಧ್ಯಕ್ಷ ಡಾ. ಬಿ.ವಿ.ಆರ್. ಮೋಹನ್ ರೆಡ್ಡಿ ಮಾತನಾಡಿ, ತಂತ್ರಜ್ಞಾನ ಚಾಲಿತ ಶಿಕ್ಷಣವೇ ಸಮಾನ ಮತ್ತು ಭವಿಷ್ಯಕ್ಕೆ ಸಿದ್ಧವಾದ ಭಾರತದ ಅಡಿಪಾಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ನಂತರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಶಾಸಕ ಎಚ್.ಆರ್.ಗವಿಯಪ್ಪ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮುಹಮ್ಮದ್ ಅಕ್ರಮ್ ಅಲಿ ಷಾ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಸಹಾಯಕ ಆಯುಕ್ತ ಪಿ.ವಿವೇಕಾನಂದ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ವೆಂಕಟೇಶ್ ರಾಮಚಂದ್ರಪ್ಪ, ಪಿಯು ಶಿಕ್ಷಣ ಇಲಾಖೆ ಉಪನಿರ್ದೇಶಕ ನಾಗರಾಜ ಹವಾಲ್ದಾರ್, ಬಿಇಒ ಶೇಖರಪ್ಪ ಹೊರಪೇಟೆ ಸೇರಿದಂತೆ ಇತರರು ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X