Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ವಾರ್ತಾಭಾರತಿ ವರದಿ...

Vijayanagara | ವಾರ್ತಾಭಾರತಿ ವರದಿ ಫಲಶ್ರುತಿ : ತುಂಗಭದ್ರಾ ಜಲಾಶಯದ ಗೇಟ್‌ಗಳಿಗೆ ಹೊಸ ಚೈನ್ ಲಿಂಕ್ ಅಳವಡಿಕೆ ಆರಂಭ

ವಾರ್ತಾಭಾರತಿವಾರ್ತಾಭಾರತಿ14 May 2026 7:19 PM IST
share
Vijayanagara | ವಾರ್ತಾಭಾರತಿ ವರದಿ ಫಲಶ್ರುತಿ : ತುಂಗಭದ್ರಾ ಜಲಾಶಯದ ಗೇಟ್‌ಗಳಿಗೆ ಹೊಸ ಚೈನ್ ಲಿಂಕ್ ಅಳವಡಿಕೆ ಆರಂಭ

ಹೊಸಪೇಟೆ/ವಿಜಯನಗರ: ನಗರದ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕಾಮಗಾರಿಗೆ ಸಂಬಂಧಿಸಿದಂತೆ ವಾರ್ತಾಭಾರತಿ ಪತ್ರಿಕೆಯಲ್ಲಿ ಪ್ರಕಟವಾದ ವಿಶೇಷ ವರದಿಯ ಪರಿಣಾಮವಾಗಿ ಅಧಿಕಾರಿಗಳು ಹಾಗೂ ಸರ್ಕಾರ ಎಚ್ಚೆತ್ತುಕೊಂಡಿದ್ದು, ಇದೀಗ ನೂತನ ಗೇಟ್‌ಗಳಿಗೆ ಹೊಸ ಚೈನ್ ಲಿಂಕ್ ಅಳವಡಿಕೆ ಕಾರ್ಯ ಆರಂಭಿಸಲಾಗಿದೆ. ಈ ಬೆಳವಣಿಗೆಯಿಂದ ರೈತರಲ್ಲಿ ಸಂತಸ ವ್ಯಕ್ತವಾಗಿದೆ.

ತುಂಗಭದ್ರಾ ಜಲಾಶಯದಲ್ಲಿ ಈಗಾಗಲೇ 33 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿತ್ತು. ಆದರೆ ಕೆಲವು ಗೇಟ್‌ಗಳಿಗೆ ಸುಮಾರು 80 ವರ್ಷ ಹಳೆಯದಾದ ಚೈನ್ ಲಿಂಕ್‌ಗಳನ್ನು ಮರುಬಳಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಬಹಿರಂಗವಾಗುತ್ತಿದ್ದಂತೆ ರೈತರು ಹಾಗೂ ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತವಾಗಿತ್ತು.

ಹಳೆಯ ಚೈನ್‌ಗಳನ್ನು ಬಳಸುವುದರಿಂದ ಭವಿಷ್ಯದಲ್ಲಿ ಜಲಾಶಯದ ಸುರಕ್ಷತೆಗೆ ಅಪಾಯ ಉಂಟಾಗಬಹುದು ಎಂಬ ಆತಂಕದ ಹಿನ್ನೆಲೆ, ನೂತನ ಗೇಟ್‌ಗಳಿಗೆ ಸಂಪೂರ್ಣ ಹೊಸ ಚೈನ್ ಲಿಂಕ್ ಅಳವಡಿಕೆ ಮಾಡಬೇಕೆಂದು ವಾರ್ತಾಭಾರತಿ ವಿಶೇಷ ವರದಿ ಪ್ರಕಟಿಸಿತ್ತು. ಈ ವರದಿ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು.

ರೈತ ಸಂಘಟನೆಗಳು ಹಾಗೂ ವಿವಿಧ ಮುಖಂಡರು ಕೂಡ ಗುಣಮಟ್ಟದ ಕಾಮಗಾರಿ ನಡೆಸುವಂತೆ ಸರ್ಕಾರ ಮತ್ತು ತುಂಗಭದ್ರಾ ಬೋರ್ಡ್ ಅಧಿಕಾರಿಗಳಿಗೆ ಒತ್ತಾಯಿಸಿದ್ದರು.

ಈ ನಡುವೆ ಕಾಮಗಾರಿಯನ್ನು ಪರಿಶೀಲಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಹಾಗೂ ಗುಣಮಟ್ಟ ಪರಿಶೀಲಿಸಿದ್ದರು. ಬಳಿಕ ಸರ್ಕಾರ ಮತ್ತು ಅಧಿಕಾರಿಗಳ ಮಟ್ಟದಲ್ಲಿ ಚರ್ಚೆಗಳು ನಡೆದಿದ್ದು, ಇದೀಗ ಹಳೆಯ ಚೈನ್‌ಗಳನ್ನು ತೆರವುಗೊಳಿಸಿ ಹೊಸ ಚೈನ್ ಲಿಂಕ್ ಅಳವಡಿಸುವ ಕಾರ್ಯ ಆರಂಭಿಸಲಾಗಿದೆ.

ಟಿ.ಬಿ. ಬೋರ್ಡ್ ಅಧಿಕಾರಿಗಳ ಪ್ರಕಾರ, ಅಗತ್ಯ ಹೊಸ ಚೈನ್ ಲಿಂಕ್‌ಗಳು ಈಗಾಗಲೇ ತಲುಪಿದ್ದು, ಹಂತ ಹಂತವಾಗಿ ಎಲ್ಲಾ ಗೇಟ್‌ಗಳಿಗೆ ಅಳವಡಿಕೆ ಮಾಡಲಾಗುತ್ತಿದೆ. ಇದರಿಂದ ಜಲಾಶಯದ ಸುರಕ್ಷತೆ ಮತ್ತಷ್ಟು ಬಲಪಡಲಿದ್ದು, ಭವಿಷ್ಯದಲ್ಲಿ ತಾಂತ್ರಿಕ ಸಮಸ್ಯೆಗಳು ಎದುರಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ತುಂಗಭದ್ರಾ ಜಲಾಶಯವು ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಎಂಟು ಜಿಲ್ಲೆಗಳ ಸುಮಾರು 14 ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿ ಒದಗಿಸುವ ಜೀವನಾಡಿಯಾಗಿದೆ. ಲಕ್ಷಾಂತರ ರೈತರ ಕೃಷಿ ಈ ಜಲಾಶಯದ ನೀರಿನ ಮೇಲೆ ಅವಲಂಬಿತವಾಗಿರುವುದರಿಂದ, ಕ್ರಸ್ಟ್ ಗೇಟ್ ಕಾಮಗಾರಿಯ ಗುಣಮಟ್ಟ ಅತ್ಯಂತ ಮಹತ್ವ ಪಡೆದುಕೊಂಡಿದೆ.

ಮಾಧ್ಯಮ ವರದಿಗೆ ಸ್ಪಂದಿಸಿ ಸರ್ಕಾರ ಹಾಗೂ ಅಧಿಕಾರಿಗಳು ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ರೈತರು ಅಭಿಪ್ರಾಯಪಟ್ಟಿದ್ದು, ಉಳಿದ ಕಾಮಗಾರಿಯನ್ನೂ ಪಾರದರ್ಶಕತೆ ಹಾಗೂ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X