ವಿಜಯಪುರ | ಬೀದಿನಾಯಿ ದಾಳಿ; ಬಾಲಕನಿಗೆ ಗಂಭೀರ ಗಾಯ

ಸಾಂದರ್ಭಿಕ ಚಿತ್ರ
ವಿಜಯಪುರ : ಬೀದಿ ನಾಯಿಗಳ ಮಾರಣಾಂತಿಕ ಕಡಿತಕ್ಕೆ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಕೆಸ್ಆರ್ಟಿಸಿ ಕಾಲೋನಿಯಲ್ಲಿ ಸೋಮವಾರ ನಡೆದಿದೆ.
ಸಾಯಿ ಅನ್ವೇಷ ವನಹಳ್ಳಿ (5) ನಾಯಿಗಳ ಕಡಿತಕ್ಕೆ ಒಳಗಾದ ಬಾಲಕನಾಗಿದ್ದು, ಕಾಲು, ಕುತ್ತಿಗೆ ಬಾಗಕ್ಕೆ ಗಂಭೀರ ಗಾಯಗಳಾಗಿದೆ. ಬಾಲಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ನಗರದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಈ ಬಗ್ಗೆ ಪಾಲಿಕೆಯ ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ಗಮನಕ್ಕೂ ತಂದರೂ ಪ್ರಯೋಜನವಾಗಿಲ್ಲ, ಕೂಡಲೇ ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Next Story





