ವಿಜಯಪುರ | ಟೋಲ್ ಹಣ ಪಾವತಿಸಲು ಕೇಳಿದ್ದಕ್ಕೆ ಸಿಬ್ಬಂದಿ ಮೇಲೆ ಬಿಜೆಪಿ ಮುಖಂಡನ ಪುತ್ರನಿಂದ ಹಲ್ಲೆ

ವಿಜಯಪುರ : ಟೋಲ್‌ನಲ್ಲಿ ಹಣ ಕೇಳಿದ್ದಕ್ಕೆ ಟೋಲ್ ಸಿಬ್ಬಂದಿ ಮೇಲೆ ಬಿಜೆಪಿ ಮುಖಂಡನ ಪುತ್ರ ಹಲ್ಲೆಗೈದಿರುವ ಘಟನೆ ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಗ್ರಾಮದ ಬಳಿ ಇರುವ ಟೋಲ್ ನಲ್ಲಿ ನಡೆದಿರುವುದು ವರದಿಯಾಗಿದೆ.
ವಾಹನದಲ್ಲಿ ವಿಜಯಪುರದಿಂದ ಸಿಂದಗಿ ಕಡೆ ಹೊರಟಿದ್ದ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಪುತ್ರ ಸಮರ್ಥಗೌಡ ಪಾಟೀಲ್ ಹಾಗೂ ಸಹಚರಿಂದ ಟೋಲ್ ಸಿಬ್ಬಂದಿಯಾದ ಸಂಗಪ್ಪನ ಮೇಲೆ ಹಲ್ಲೆಗೈದಿದ್ದಾರೆ. ಇನ್ನು ಟೋಲ್ ನಲ್ಲಿ ಹಣ ಕೇಳಿದ್ದಕ್ಕೆ ನಾನು ವಿಜುಗೌಡ ಮಗ ಎಂದು ಟೋಲ್ ಸಿಬ್ಬಂದಿಗೆ ಧಮ್ಕಿ ಹಾಕಿದ್ದಾನೆ ಎನ್ನಲಾಗಿದೆ.
ಸದ್ಯ ಗಾಯಾಳು ಸಂಗಪ್ಪ ಸಿಂದಗಿ ತಾಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Next Story





