Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. Vijayapura| ಮುಂದಿನ ದಿನಗಳಲ್ಲಿ ಸರಕಾರಿ...

Vijayapura| ಮುಂದಿನ ದಿನಗಳಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ; 160 ಕೋಟಿ ರೂ. ವೆಚ್ಚದ ಮೇಲ್ಸೇತುವೆ : ಸಿಎಂ ಸಿದ್ದರಾಮಯ್ಯ ಭರವಸೆ

ವಾರ್ತಾಭಾರತಿವಾರ್ತಾಭಾರತಿ9 Jan 2026 7:32 PM IST
share
Vijayapura| ಮುಂದಿನ ದಿನಗಳಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ; 160 ಕೋಟಿ ರೂ. ವೆಚ್ಚದ ಮೇಲ್ಸೇತುವೆ : ಸಿಎಂ ಸಿದ್ದರಾಮಯ್ಯ ಭರವಸೆ
► "ಕರ್ನಾಟಕದ ದೀರ್ಘಾವಧಿ ಸಿಎಂ ಎಂಬ ದಾಖಲೆ ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ" ► ವಿಜಯಪುರದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಸಮಾರಂಭ

ವಿಜಯಪುರ : ರಾಜ್ಯದ ಜನರು ಮತ್ತು ಹೈಕಮಾಂಡ್ ಆಶೀರ್ವಾದ, ಶಾಸಕರ ಬೆಂಬಲದಿಂದ ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಿಜಯಪುರದ ವಿ.ಬಿ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ವಿಜಯಪುರ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ನಂತರ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೇರೆವೇರಿಸಿ ಮಾತನಾಡಿದರು.

ದೇವರಾಜ ಅರಸು ಅವರ 7 ವರ್ಷ 239 ದಿನಗಳ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿದ್ದ ದಾಖಲೆಯನ್ನು ಮುರಿದು ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಮಾಡಲು ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ. ಅದಕ್ಕಾಗಿ ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೃತಜ್ಞತೆಗಳನ್ನು ಅರ್ಪಿಸಿದರು.

730 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ :

ವಿಜಯಪುರ ಜಿಲ್ಲೆಯಲ್ಲಿ 800 ಕೋಟಿ ರೂ. ಗೂ ಹೆಚ್ಚು ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. 82 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ 730 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ ಮಾಡಲಾಗಿದೆ. ರಾಣಿ ಚೆನ್ನಮ್ಮ ಪ್ರತಿಮೆ ಲೋಕಾರ್ಪಣೆ ಸೇರಿದಂತೆ ಕಿತ್ತೂರು ರಾಣಿ ಚೆನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ ಎಂದರು .

ದಕ್ಷಿಣ ಭಾರತದಲ್ಲಿಯೇ ಮೊದಲ ವೆಲೊಡ್ರೋಮ್:

ಈ ಭಾಗದಲ್ಲಿ ಸೈಕ್ಲಿಸ್ಟ್ ಗಳಿಗಾಗಿ , ದಕ್ಷಿಣ ಭಾರತದಲ್ಲಿಯೇ ಮೊದಲ ವೆಲೊಡ್ರೋಮ್ ನ್ನು ಸ್ಥಾಪಿಸಲಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ :

ವಿಜಯಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕೆಂದು ಹಿಂದಿನ ಸರಕಾರ ಪಿಪಿಪಿ ಮಾದರಿಯಲ್ಲಿ ಕೈಗೊಳ್ಳಬೇಕೆಂದು ಚಿಂತಿಸಿತ್ತು. ಮುಂದಿನ ದಿನಗಳಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ 71 ವೈದ್ಯಕೀಯ ಕಾಲೇಜುಗಳಿದ್ದು ಈ ಪೈಕಿ 22 ಸರಕಾರಿ ವೈದ್ಯಕೀಯ ಕಾಲೇಜುಗಳಿವೆ. ಉಳಿದ ಜಿಲ್ಲೆಗಳಲ್ಲಿಯೂ ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದರು.

160 ಕೋಟಿ ವೆಚ್ಚದ ಮೇಲ್ಸೇತುವೆ:

ಬಸನಗೌಡ ಯತ್ನಾಳ್ ಅವರು ಅನೇಕ ಬೇಡಿಕೆಗಳನ್ನು ಇಟ್ಟಿದ್ದು, ಕನಕದಾಸ ವೃತ್ತದಿಂದ ಅಂಬೇಡ್ಕರ್ ಹಾಗೂ ಶಿವಾಜಿ ವೃತ್ತದವರೆಗೆ 160 ಕೋಟಿ ವೆಚ್ಚದ ಮೂರು ಕಿಮೀ ಮೇಲ್ಸೇತುವೆ ಮಾಡಬೇಕೆಂದು ಮನವಿ ಮಾಡಿದ್ದು ಅದನ್ನು ನೆರವೇರಿಸಲಾಗುವುದು ಎಂದು ಆಶ್ವಾಸನೆ ನೀಡಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ.ಪಾಟೀಲ್, ಸಚಿವ ಶಿವಾನಂದ ಪಾಟೀಲ್, ಶಾಸಕ, ಬಸನಗೌಡ ಯತ್ನಾಳ್, ಮೊದಲಾದವರು ಉಪಸ್ಥಿತರಿದ್ದರು.

Tags

CM SiddaramaiahVijayapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X