ವಿಜಯಪುರ ಜಿಲ್ಲೆಯಲ್ಲಿ ಕಂಪಿಸಿದ ಭೂಮಿ; 2.9 ತೀವ್ರತೆ ದಾಖಲು

ಸಾಂದರ್ಭಿಕ ಚಿತ್ರ (PTI)
ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆ 7.43ಕ್ಕೆ 2.9 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದ ಘಟನೆ ನಡೆದಿದೆ.
ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಯರನಾಳ್ ಗ್ರಾಮ ಪಂಚಾಯಿತಿಯ ಹತ್ತರ್ಕಿಹಾಳ್ ಗ್ರಾಮದ ವಾಯುವ್ಯಕ್ಕೆ 2.5 ಕಿ.ಮೀ ದೂರದಲ್ಲಿ ಮತ್ತು 5 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು (ಕೆಎಸ್ಎನ್ಡಿಎಂಸಿ) ಮಾಹಿತಿ ತಿಳಿಸಿದೆ.
'ಭೂಕಂಪನದ ತೀವ್ರತೆ ಕಡಿಮೆಯಾಗಿದ್ದು, ಭೂಕಂಪನದ ಕೇಂದ್ರಬಿಂದುದಿಂದ 50-60 ಕಿ.ಮೀ. ದೂರದವರೆಗೆ ಕಂಪನದ ಅನುಭವ ಆಗಿರಬಹುದುʼ ಎಂದು ಅದು ಹೇಳಿದೆ.
ಈ ರೀತಿಯ ಭೂಕಂಪನವು ಸ್ಥಳೀಯ ಸಮುದಾಯಕ್ಕೆ ಯಾವುದೇ ಹಾನಿಯನ್ನುಂಟು ಮಾಡುವುದಿಲ್ಲ. ಏಕೆಂದರೆ, ತೀವ್ರತೆ ಕಡಿಮೆ ಇರುತ್ತದೆ. ಆದರೆ, ಭೂಮಿ ಕಂಪಿಸಿದ ಅನುಭವವಾಗಬಹುದು ಎಂದು ತಿಳಿಸಿದೆ.
Next Story





