Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. ವಿಜಯಪುರದಲ್ಲಿ ಮೈಸೂರು ಸ್ಯಾಂಡಲ್ ಸೋಪ್...

ವಿಜಯಪುರದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಘಟಕ ಸ್ಥಾಪನೆ : ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ11 Jan 2025 8:47 PM IST
share
Photo of Program

ವಿಜಯಪುರ : ಇಲ್ಲಿನ ಹೊರವಲಯದ ಇಟ್ಟಂಗಿಹಾಳ ಬಳಿ 10 ಎಕರೆ ಜಾಗದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಆರಂಭಿಸಲಾಗುವುದು. ಇದರಿಂದ 400 ಮಂದಿಗೆ ಉದ್ಯೋಗ ಸಿಗಲಿದೆ. ಜತೆಗೆ ಬೆಂಗಳೂರಿನಲ್ಲೂ ಕೆಎಸ್‍ಡಿಎಲ್ ಕಾರ್ಖಾನೆ ವಿಸ್ತರಣೆ ಮತ್ತು ಆಧುನೀಕರಣ ನಡೆಯುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಶನಿವಾರ ಕೆಎಸ್‍ಡಿಎಲ್ ಏರ್ಪಡಿಸಿದ್ದ ಸಾಬೂನು ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇದಕ್ಕೂ ಮೊದಲು ನಾಗಠಾಣ ಶಾಸಕ ವಿಠಲ ಕಟಕದೊಂಡ ಮಾತನಾಡಿ, ವಿಜಯಪುರದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಆರಂಭಿಸಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಕೂಡಲೇ ಸ್ಪಂದಿಸಿದ ಅವರು, ತಮ್ಮ ಯೋಜನೆಯನ್ನು ಪ್ರಕಟಿಸಿದರು.

ವಿಜಯಪುರದ ಸಾಬೂನು ಘಟಕದಿಂದ ಉತ್ತರ ಕರ್ನಾಟಕಕ್ಕೆ ಮಾತ್ರವಲ್ಲದೆ, ಮಹಾರಾಷ್ಟ್ರಕ್ಕೂ ಇಲ್ಲಿಂದಲೇ ಸರಬರಾಜು ಮಾಡುವ ಕೆಲಸ ಮಾಡಲಾಗುವುದು. ಕೆಎಸ್‍ಡಿಎಲ್ ಮೊದಲು ನಷ್ಟದಲ್ಲಿತ್ತು. ಈಗ ಮೂರು ಪಾಳಿಯಲ್ಲಿ ಕೆಲಸ ನಡೆಯುತ್ತಿದ್ದು, ಸಂಸ್ಥೆಯು ಲಾಭದ ಹಳಿಗೆ ಬಂದಿದೆ. ಜತೆಗೆ ತಾವು ಸಚಿವರಾದ ಮೇಲೆ ಗುಣಮಟ್ಟದ 20 ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದೆ. ಬರುವ ದಿನಗಳಲ್ಲಿ ಸಂಸ್ಥೆಯ ಗತವೈಭವ ಮರುಕಳಿಸುವಂತೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಕಿರಾಣಿ ಅಂಗಡಿ, ವಿಮಾನ ನಿಲ್ದಾಣ, ವಿದೇಶಗಳ ಮಳಿಗೆ ಹೀಗೆ ಎಲ್ಲ ಕಡೆಯೂ ಮೈಸೂರು ಸ್ಯಾಂಡಲ್ ಸೋಪ್ ಮತ್ತು ಸಂಸ್ಥೆಯ ಇತರ ಉತ್ಪನ್ನಗಳು ದೊರೆಯುವಂತೆ ಮಾಡಲಾಗುತ್ತಿದೆ. ಬೆಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯದ ವಿಶಿಷ್ಟ ಉತ್ಪನ್ನಗಳ ಮಾರಾಟಕ್ಕೆಂದೇ ಕಲಾಲೋಕ ಮಳಿಗೆ ಸ್ಥಾಪಿಸಲಾಗಿದೆ. ಸಂಸ್ಥೆಯ ಅಧ್ಯಕ್ಷ ಸಿ.ಎಸ್.ನಾಡಗೌಡ ಕೂಡ ಸಂಸ್ಥೆಯ ಏಳ್ಗೆಗೆ ಶ್ರಮಿಸುತ್ತಿದ್ದಾರೆ ಎಂದು ಎಂ.ಬಿ.ಪಾಟೀಲ್ ನುಡಿದರು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಚಿವ ಎಂ.ಬಿ.ಪಾಟೀಲ್ ಇದುವರೆಗೆ ತೆಗೆದುಕೊಂಡಿರುವ ಉಪಕ್ರಮಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪಿ.ಕೆ.ಎಂ.ಪ್ರಶಾಂತ್, ಜಿಲ್ಲಾಧಿಕಾರಿ ಭೂಪಾಲನ್, ಎಸ್ಪಿ ಲಕ್ಷ್ಮಣ ನಿಂಬರಗಿ, ಜಿಪಂ ಸಿಇಒ ಋಷಿ ಆನಂದ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X