Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. ಭೀಮಾ ನದಿ ನೀರು ಹಂಚಿಕೆಯಲ್ಲಿ ಅನ್ಯಾಯ;...

ಭೀಮಾ ನದಿ ನೀರು ಹಂಚಿಕೆಯಲ್ಲಿ ಅನ್ಯಾಯ; ಕೇಂದ್ರ ಮಧ್ಯಸ್ಥಿಕೆ ವಹಿಸಿ ವಿವಾದಕ್ಕೆ ಶಾಶ್ವತ ಪರಿಹಾರ ಕಲ್ಪಿಸಲಿ : ಶಾಸಕ ಯಶವಂತರಾಯಗೌಡ ಪಾಟೀಲ

ವಾರ್ತಾಭಾರತಿವಾರ್ತಾಭಾರತಿಖಾಜಾಮೈನುದ್ದೀನ್ ಪಟೇಲ್/ವಾರ್ತಾಭಾರತಿಖಾಜಾಮೈನುದ್ದೀನ್ ಪಟೇಲ್/ವಾರ್ತಾಭಾರತಿ24 Nov 2026 9:52 AM IST
share
ಭೀಮಾ ನದಿ ನೀರು ಹಂಚಿಕೆಯಲ್ಲಿ ಅನ್ಯಾಯ; ಕೇಂದ್ರ ಮಧ್ಯಸ್ಥಿಕೆ ವಹಿಸಿ ವಿವಾದಕ್ಕೆ ಶಾಶ್ವತ ಪರಿಹಾರ ಕಲ್ಪಿಸಲಿ : ಶಾಸಕ ಯಶವಂತರಾಯಗೌಡ ಪಾಟೀಲ

ವಿಜಯಪುರ : ಭೀಮಾ ನದಿ ನೀರು ಹಂಚಿಕೆ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಅನುಸರಿಸುತ್ತಿರುವ ಧೋರಣೆ ಗಡಿ ಭಾಗದ ರೈತರಲ್ಲಿ ತೀವ್ರ ನೋವು ಮೂಡಿಸಿದೆ. ಕರ್ನಾಟಕದ ಹಕ್ಕಿನ ನೀರು ಹರಿಸಲು ಹಿಂದೇಟು ಹಾಕುವುದಲ್ಲದೆ, ಗಡಿ ಭಾಗದ ತನ್ನ ರಾಜ್ಯದ ಪ್ರದೇಶಗಳಿಗೂ ನೀರು ತಲುಪದಂತೆ ತಡೆಯುತ್ತಿರುವುದು ಖಂಡನೀಯ ಎಂದು ಇಂಡಿ ಶಾಸಕ ಹಾಗೂ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಭಾಗದಲ್ಲಿ ಭೀಮಾ ನದಿ ಪಾತ್ರದಲ್ಲಿ 27 ಟಿಎಂಸಿ ನೀರಿದೆ. ಅದರಲ್ಲಿ ಕರ್ನಾಟಕದ ಪಾಲಿನ ಹಕ್ಕಿನ ನೀರು ಬಿಡಲು ಮೊಂಡುತನ ಪ್ರದರ್ಶಿಸುತ್ತಿದೆ. ಕರ್ನಾಟಕಕ್ಕೆ ಒಂದೇ ಒಂದು ಹನಿ ನೀರು ಹರಿಸಬಾರದು ಎಂಬ ಧೋರಣೆ ಮಹಾರಾಷ್ಟ್ರದಲ್ಲಿ ಮನೆ ಮಾಡಿರುವುದು ಸರಿಯಲ್ಲ. ನಮ್ಮ ಭಾಗಕ್ಕೆ ನೀರು ತಲುಪುತ್ತದೆ ಎಂಬ ಕಾರಣಕ್ಕೆ ಗಡಿ ಭಾಗದ ತಮ್ಮ ರಾಜ್ಯದ ಪ್ರದೇಶಗಳಿಗೂ ನೀರು ಹರಿಸಲು ಹಿಂದೇಟು ಹಾಕುತ್ತಿದೆ. ದಸೂರ, ಉಮರಜ ಭಾಗಗಳಿಗೂ ನೀರು ತಲುಪದಂತೆ ನೋಡಿಕೊಳ್ಳುತ್ತಿರುವುದು ನೋವಿನ ಸಂಗತಿ ಎಂದರು.

ಕರ್ನಾಟಕಕ್ಕೆ 15 ಟಿಎಂಸಿ ನೀರು ನೀಡಲೇಬೇಕು. ಈ ಕುರಿತು ಒಡಂಬಡಿಕೆಯೂ ಇದೆ. ಆದರೆ, ಒಡಂಬಡಿಕೆ ಆಗಿಲ್ಲ, ನೈಸರ್ಗಿಕ ಹರಿವಿಗೆ ಮಾತ್ರ ನೀರು ಸೀಮಿತ ಎಂಬ ಮಹಾರಾಷ್ಟ್ರದ ವಾದದಲ್ಲಿ ಯಾವುದೇ ಅರ್ಥವಿಲ್ಲ. ಈ ಸಮಸ್ಯೆಯಿಂದ ಕಲಬುರಗಿ, ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೂ ಮುತುವರ್ಜಿ ವಹಿಸಿದ್ದಾರೆ. ಈ ವಿವಾದಕ್ಕೆ ತಾರ್ಕಿಕ ಅಂತ್ಯ ಕಾಣಿಸಲು ನಾವು ಬದ್ಧರಾಗಿದ್ದೇವೆ ಎಂದರು.

ಕೇಂದ್ರ ಸರ್ಕಾರ ಕೂಡಲೇ ಸಂಬಂಧಿಸಿದ ಎಲ್ಲ ರಾಜ್ಯಗಳ ಸಭೆ ಕರೆದು ಜಲವಿವಾದ ಪರಿಹಾರಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
ಖಾಜಾಮೈನುದ್ದೀನ್ ಪಟೇಲ್/ವಾರ್ತಾಭಾರತಿ
ಖಾಜಾಮೈನುದ್ದೀನ್ ಪಟೇಲ್/ವಾರ್ತಾಭಾರತಿ

​ಕೆ.ಪಿ.ಪಟೇಲ್ ( ಖಾಜಾಮೈನುದ್ದೀನ್ ಪಟೇಲ್) ಅವರು ಕಳೆದ ಐದು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದಾರೆ. ವಿಜಯಪುರ ಜಿಲ್ಲೆಯಿಂದ ಮಾಧ್ಯಮ ವೃತ್ತಿಯನ್ನು ಆರಂಭಿಸಿರುವ ಇವರು, ಕಳೆದ ಒಂದು ವರ್ಷದಿಂದ 'ವಾರ್ತಾಭಾರತಿ' ಪತ್ರಿಕೆಯ ವಿಜಯಪುರ ಜಿಲ್ಲಾ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇವರ ಹವ್ಯಾಸ ಜನಪರ ಕಾಳಜಿಯ ಹಾಗೂ ಮಾನವೀಯ ಮೌಲ್ಯಗಳ ಸುದ್ದಿಗಳನ್ನು ವರದಿ ಮಾಡುವುದಾಗಿದೆ.

Next Story
X