Jamkhandi | ಈಜಲು ತೆರಳಿದ್ದ ಪಿಯು ವಿದ್ಯಾರ್ಥಿ ಬಾವಿಯಲ್ಲಿ ಮುಳುಗಿ ಮೃತ್ಯು

ಜಮಖಂಡಿ : ಈಜಲು ತೆರಳಿದ್ದ 17 ವರ್ಷದ ಪಿಯು ವಿದ್ಯಾರ್ಥಿಯೊಬ್ಬ ಬಾವಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಮುಧೋಳ ತಾಲೂಕಿನ ಮೆಳ್ಳಿಗೇರಿ ಗ್ರಾಮದ ಸುಹಾಸ ಲಕ್ಷ್ಮಣ ಕುಳಲಿ (17) ಎಂದು ಗುರುತಿಸಲಾಗಿದೆ. ಪ್ರಥಮ ವರ್ಷದ ಪಿಯುಸಿ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಹಾಸ, ಕಾಲೇಜಿನ ವಸತಿ ನಿಲಯದಲ್ಲಿ ವಾಸವಾಗಿದ್ದ ಎನ್ನಲಾಗಿದೆ.
ಘಟನೆ ತಿಳಿಯುತ್ತಿದ್ದಂತೆ ಜಮಖಂಡಿ ಗ್ರಾಮೀಣ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಬಾವಿಯಿಂದ ಹೊರತೆಗೆದರು.
ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಮಖಂಡಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಯಿತು.
ಈ ಕುರಿತು ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Next Story




