Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. ಪ್ರವಾಹ ತಗ್ಗಿದ ಮೇಲೆ ಬಿಜೆಪಿಯವರು ಏನು...

ಪ್ರವಾಹ ತಗ್ಗಿದ ಮೇಲೆ ಬಿಜೆಪಿಯವರು ಏನು ವೀಕ್ಷಣೆ ಮಾಡುತ್ತಾರೆ?: ಸಚಿವ ಎಂ.ಬಿ.ಪಾಟೀಲ್ ಟೀಕೆ

ವಾರ್ತಾಭಾರತಿವಾರ್ತಾಭಾರತಿ3 Oct 2025 11:51 PM IST
share
ಪ್ರವಾಹ ತಗ್ಗಿದ ಮೇಲೆ ಬಿಜೆಪಿಯವರು ಏನು ವೀಕ್ಷಣೆ ಮಾಡುತ್ತಾರೆ?: ಸಚಿವ ಎಂ.ಬಿ.ಪಾಟೀಲ್ ಟೀಕೆ

ವಿಜಯಪುರ: ಈಗ ಪ್ರವಾಹ ತಗ್ಗಿದ್ದು, ಬಿಜೆಪಿಯವರು ಏನು ವೀಕ್ಷಣೆ ಮಾಡುತ್ತಾರೆ? ಇದು ಟ್ರೈನ್ ಹೋದ ನಂತರ ಟಿಕೆಟ್ ತೆಗೆಯಲು ಬರುವಂತಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ವ್ಯಂಗ್ಯವಾಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ತಗ್ಗಿದ್ದು, ಬಿಜೆಪಿಯವರು ಈಗ ಪ್ರವಾಸ ಕೈಗೊಂಡು ಏನು ವೀಕ್ಷಣೆ ಮಾಡುತ್ತಾರೆ ಎಂದು ಪ್ರಶ್ನಿಸಿದ ಅವರು, ಬಿಜೆಪಿಯಲ್ಲಿ ಆರ್.ಅಶೋಕ, ಬಿ.ವೈ.ವಿಜಯೇಂದ್ರ, ಪ್ರಹ್ಲಾದ ಜೋಶಿ, ವಿ.ಸೋಮಣ್ಣ ಸೇರಿದಂತೆ 20 ಬಣಗಳು ಇದೆ. ಬಿಜೆಪಿಗೆ ಒಂದಲ್ಲ, ಮೂರು ಬಾಗಿಲುಗಳು ಇವೆ. ನೆರೆ ಪ್ರದೇಶಗಳಿಗೆ ಯಾವ ಬಾಗಿಲಿನ ಬಿಜೆಪಿಯವರು ಬರುತ್ತಿದ್ದಾರೆ ಗೊತ್ತಿಲ್ಲ ಎಂದರು.

ಭೀಮಾ ನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿಗಳು ವೈಮಾನಿಕ ಸಮೀಕ್ಷೆ ನಡೆಸಿದ ದಿನವೇ ಪರಿಹಾರವನ್ನೂ ಘೋಷಿಸಲಾಗಿದೆ. ಎನ್ದಿಆರ್ಎಫ್ ಮಾರ್ಗಸೂಚಿಗಿಂತ 8,500 ರೂಪಾಯಿ ಹೆಚ್ಚುವರಿ ಪರಿಹಾರ ಸೇರಿ ಒಂದು ಹೆಕ್ಟೇರ್ ಕೃಷಿ ಭೂಮಿಗೆ ಸುಮಾರು 17,000 ರೂ. ಪರಿಹಾರವನ್ನು ಘೋಷಿಸಲಾಗಿದೆ ಎಂದರು.

ಎಲ್ಲಾ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಸಹ ಪರಿಸ್ಥಿತಿ ಅವಲೋಕಿಸಿದ್ದಾರೆ. ಈಗ ಬಿಜೆಪಿಯವರು ಏನು ವೀಕ್ಷಣೆ ಮಾಡುತ್ತಾರೆ ಎಂದು ಟೀಕಿಸಿದರು.

ಕೇಂದ್ರ ಸರ್ಕಾರದಿಂದ 14, 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಸುಮಾರು 60-70 ಸಾವಿರ ಕೋಟಿ ರೂಪಾಯಿ ಅನ್ಯಾಯವಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5,800 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದರೂ ಇನ್ನೂ ಒಂದು ರೂಪಾಯಿ ಸಹ ಬಿಡುಗಡೆ ಮಾಡಿಲ್ಲ. ಹೀಗಾಗಿ ಬಿಜೆಪಿಯವರು ಮೊದಲು ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡಿಸುವ ಕಾರ್ಯ ಮಾಡಲಿ ಎಂದು ಸವಾಲು ಹಾಕಿದರು.

ಎನ್ ಡಿಆರ್ ಎಫ್ ಮಾರ್ಗಸೂಚಿ ಪ್ರಕಾರ, ಬೆಳೆ ಹಾನಿ ಪರಿಹಾರ ಬಹಳ ಕಡಿಮೆ ಇದೆ. ಒಣಬೇಸಾಯಕ್ಕೆ ಕೇವಲ 8,500 ರೂ. ನಿಗದಿಯಾಗಿದ್ದು, ಇದನ್ನು 20,000 ರೂ.ಗೆ ಪರಿಷ್ಕರಣೆ ಮಾಡಿಸಲಿ. ಈ ನಿಟ್ಟಿನಲ್ಲಿ ಬಿಜೆಪಿಯವರು ದಿಲ್ಲಿಗೆ ಹೋಗಲಿ. ಆದರೆ, ಅವರಿಗೆ ದಿಲ್ಲಿಗೆ ಹೋಗುವ ತಾಕತ್ತು, ಧೈರ್ಯ ಇಲ್ಲ ಎಂದು ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X