Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. ಪ್ರವಾಹ ಸಂತ್ರಸ್ತರಿಗೆ ಪ್ರಸ್ತುತ 5...

ಪ್ರವಾಹ ಸಂತ್ರಸ್ತರಿಗೆ ಪ್ರಸ್ತುತ 5 ಸಾವಿರ ರೂ. ತುರ್ತು ಪರಿಹಾರ : ಸಚಿವ ಎಂ.ಬಿ.ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ29 Sept 2025 6:51 PM IST
share
ಪ್ರವಾಹ ಸಂತ್ರಸ್ತರಿಗೆ ಪ್ರಸ್ತುತ 5 ಸಾವಿರ ರೂ. ತುರ್ತು ಪರಿಹಾರ : ಸಚಿವ ಎಂ.ಬಿ.ಪಾಟೀಲ್‌

ವಿಜಯಪುರ : ಭೀಮಾ ನದಿಯ ಪ್ರವಾಹದಿಂದ ಅತೀವೃಷ್ಟಿ ಹಾಗೂ ಪ್ರವಾಹ ಸಂತ್ರಸ್ತರಿಗೆ ಪ್ರಸ್ತುತ 5 ಸಾವಿರ ರೂ. ತುರ್ತು ಪರಿಹಾರದ ಜೊತೆಗೆ ಇನ್ನೂ ಹೆಚ್ಚುವರಿಯಾಗಿ ಪರಿಹಾರ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿ ಹಾಗೂ ಪರಿಹಾರ ಕ್ರಮಗಳ ಕುರಿತು ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿವರಣೆ ನೀಡಿದ ಅವರು, ಪ್ರವಾಹ ಪರಿಸ್ಥಿತಿ ವೇಳೆ ತುರ್ತು ಪರಿಹಾರ ರೂಪವಾಗಿ ಐದು ಸಾವಿರ ರೂ. ನೀಡಲಾಗುತ್ತಿದೆ, ಇದನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿ ಈ ಪ್ರಥಮ ಹಂತದ ತುರ್ತು ಪರಿಹಾರವನ್ನು ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈಗಾಗಲೇ ಪ್ರವಾಹ ಸಂತ್ರಸ್ತರನ್ನು ಖುದ್ದು ಭೇಟಿ ಮಾಡಿ ಅವರ ಅಹವಾಲು ಆಲಿಸುವ ಕೆಲಸ ಮಾಡಿರುವೆ, ಅವರ ಜೊತೆ ಸರಕಾರವಿದೆ, ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ ಎಂದು ಅಭಯ ನೀಡಲಾಗಿದೆ ಎಂದರು.

ಇಂಡಿ ತಾಲೂಕಿನ 8 ಗ್ರಾಮಗಳು ಮತ್ತು ಆಲಮೇಲ ತಾಲೂಕಿನ 6 ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ಒಟ್ಟು 17 ಕಾಳಜಿ ಕೇಂದ್ರಗಳನ್ನು ಪ್ರಾರಂಭಿಸಿ, 185 ಕುಟುಂಬಗಳನ್ನೊಳಗೊಂಡಂತೆ (ಇಂಡಿ ತಾಲೂಕಿನಲ್ಲಿ 541 ಜನ, ಆಲಮೇಲ ತಾಲೂಕಿನಲ್ಲಿ 319 ಜನರನ್ನು) ಒಟ್ಟು 860 ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳನ್ನು ನಿಯೋಜಿಸಿ, ವಸತಿ, ಉಪಹಾರ ಹಾಗೂ ಊಟದ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದರು.

ಗೃಹ ಉಪಯೋಗಿ ವಸ್ತುಗಳ ಹಾನಿಯಾದ ಮತ್ತು ಮಳೆ ನೀರು ನುಗ್ಗಿರುವ ಒಟ್ಟು 270 ಮನೆಗಗಳಿಗೆ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಮಾರ್ಗಸೂಚಿ ಹಾಗೂ ಸರಕಾರದ ಆದೇಶಗಳನ್ವಯ 13.50 ಲಕ್ಷ ರೂ. ಪರಿಹಾರ ವಿತರಿಸಲಾಗಿದ್ದು, ಕಳೆದ ಎಪ್ರಿಲ್‌ನಿಂದ ಇಲ್ಲಿಯವರೆಗೆ ಒಟ್ಟು 17 ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಗಳನ್ನು ನಡೆಸಲಾಗಿರುತ್ತದೆ ಎಂದು ವಿವರಿಸಿದರು.

ಭೀಮಾ ನದಿ ಪ್ರವಾಹ ಹಾಗೂ ಮಳೆಯಿಂದಾಗಿ ದೊಡ್ಡ ಪ್ರಮಾಣದಲ್ಲಿ ಬೆಳೆಗಳು ಹಾನಿಯಾಗಿವೆ, ಹೀಗಾಗಿ ಮುಖ್ಯಮಂತ್ರಿಗಳೇ ಖುದ್ದು ನಾಳೆ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ, ಈ ಪರಿಹಾರ ಸೇರಿದಂತೆ ವಿವಿಧ ವಿಷಯಗಳ ಕುರಿತು ಅವರ ಗಮನಕ್ಕೆ ತರಲಾಗುವುದು ಎಂದರು.

6815.15 ಹೆಕ್ಟರ್ ಕೃಷಿ ಬೆಳೆಹಾನಿ ಮತ್ತು 566.71 ಹೆಕ್ಟರ್ ತೋಟಗಾರಿಕೆ ಬೆಳೆಹಾನಿ ಸೇರಿ ಒಟ್ಟು- 7381.86 ಹೆಕ್ಟರ್ ಬೆಳೆ ಹಾನಿಯಾದ ಬಗ್ಗೆ ಸrkaರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸೆಪ್ಟೆಂಬರ್ ಮಾಹೆಯಲ್ಲಿ ಮಳೆಯಿಂದ ಅಂದಾಜು ಕೃಷಿ ಬೆಳೆ ಹಾನಿ 1,31,490.00 ಹೆಕ್ಟರ್ ಹಾಗೂ ತೋಟಗಾರಿಕೆ ಬೆಳೆ ಹಾನಿ 6,749.00 ಹೆಕ್ಟರ್ ಸೇರಿ ಒಟ್ಟು 1,38,239 ಹೇಕ್ಟರ್ ಬೆಳೆ ಹಾನಿಯ ಪ್ರಾಥಮಿಕ ವರದಿಯನ್ನು ಸಲ್ಲಿಸಿದ್ದು, ಜಂಟಿ ಸಮೀಕ್ಷೆ ಪ್ರಗತಿಯಲ್ಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X