ʼನಾಯಕತ್ವ ಬದಲಾವಣೆʼ ವಿಚಾರ | ಹೈಕಮಾಂಡ್ ತೀರ್ಮಾನವೇ ಅಂತಿಮ : ಎಂ.ಬಿ.ಪಾಟೀಲ್

ವಿಜಯಪುರ : ʼನಾಯಕತ್ವ ಬದಲಾವಣೆʼ ವಿಚಾರ ಸಂಬಂಧ ನಾನೇನು ಮಾತನಾಡಲು ಹೋಗುವುದಿಲ್ಲ.ನಮ್ಮಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ʼಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ʼಇಬ್ಬರೂ ತಮ್ಮ ತಮ್ಮ ಅಭಿಪ್ರಾಯ ಹೇಳಿದ್ದಾರೆ. ಯಾರೇ ಏನೇ ಹೇಳಿದರೂ ಹೈಕಮಾಂಡ್ ಅಂತಿಮ. ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಅದು ಸಿಎಂ, ಡಿಸಿಎಂ, ಎಂ.ಬಿ.ಪಾಟೀಲ್ ಸೇರಿದಂತೆ ಎಲ್ಲರಿಗೂ ಅನ್ವಯವಾಗುತ್ತದೆ ಎಂದರು.
ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ ಎಂಬ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ಕ್ಷಣದಲ್ಲಿ ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಹೋಗುತ್ತದೆ. ವಿಜಯೇಂದ್ರ ತಮ್ಮ ಸ್ಥಾನ ಗಟ್ಟಿ ಮಾಡಿಕೊಳ್ಳಲು ಹೇಳಿ. ತಮ್ಮ ಕುರ್ಚಿ ಅಲ್ಲಾಡುತ್ತಿದೆ, ಅವರಿಗೆ ನಮ್ಮ ಕುರ್ಚಿ ಬಗ್ಗೆ ಚಿಂತೆ ಯಾಕೆ? ನಿಮ್ಮ ಕುರ್ಚಿ ಉಳಿಸಿಕೊಳ್ಳಿ ಎಂದು ವ್ಯಂಗ್ಯವಾಡಿದರು.
Next Story





