Vijayapura | ಪ್ರತಿಭಟನೆ ವೇಳೆ ಪೊಲೀಸ್ ಅಧಿಕಾರಿಗೆ ಸ್ವಾಮೀಜಿಯಿಂದ ಕಪಾಳಮೋಕ್ಷ; ವಿಡಿಯೋ ವೈರಲ್

ವಿಜಯಪುರ : ಕಳೆದ 106 ದಿನಗಳಿಂದ ಸರಕಾರಿ ವೈದ್ಯಕೀಯ ಕಾಲೇಜಿಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಮುಂಚೂಣಿ ಪಾತ್ರ ವಹಿಸಿದ ಹುಣಶ್ಯಾಳದ ಸಂಗನಬಸವೇಶ್ವರ ಸ್ವಾಮೀಜಿ, ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ವಿಡಿಯೋವೊಂದು ವೈರಲ್ ಆಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ್ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಅಣಿಯಾಗುತ್ತಿದ್ದಂತೆ ಮುಗಳಖೋಡ ಮಠದ ಸಮೀಪ ಪ್ರತಿಭಟನಾಕಾರರನ್ನು ಪೊಲೀಸರು ತಡೆಯಲು ಮುಂದಾದರು.
ಆಗ ವಾಗ್ವಾದ ನಡೆದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಸ್ವಾಮೀಜಿಯನ್ನು ಹಿಡಿಯಲು ಮುಂದಾದರು. ಇದರಿಂದಾಗಿ ಅಸಮಾಧಾನಗೊಂಡ ಸ್ವಾಮೀಜಿ ಅಧಿಕಾರಿಯ ಕಪಾಳಕ್ಕೆ ಬಾರಿಸಿದ ವಿಡಿಯೋ ಹರಿದಾಡುತ್ತಿದೆ.
ಶ್ರೀಗಳ ಜೊತೆ ಪೊಲೀಸರು ಅಗೌರವ ತೋರಿರುವುದು ಸರಿಯಲ್ಲ ಎಂದು ಅನೇಕ ಪ್ರತಿಭಟನಾಕಾರರು ಪೊಲೀಸರ ಜೊತೆ ವಾಗ್ವಾದ ಸಹ ನಡೆಸಿದರು. ಆಗ ತಕ್ಷಣವೇ ಪೊಲೀಸರು ಅಲ್ಲಿದ್ದ ಎಲ್ಲ ಪ್ರತಿಭಟನಾಕಾರರನ್ನು ಪೊಲೀಸ್ ವ್ಯಾನ್‌ನಲ್ಲಿ ಹೊರ್ತಿಗೆ ಕರೆದುಕೊಂಡು ಹೋಗಿದ್ದಾರೆ.
Next Story





