Vijayapura | ಕ್ರೇನ್‌ಗೆ ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

ವಿಜಯಪುರ : ವಿಜಯಪುರ ನಗರದ ದರ್ಗಾ ರಿಂಗ್‌ರೋಡ್ ಬಳಿ ಆಕಾಶ್ ಪಾಟೀಲ್ ಎಂಬ ಯುವಕನ ಮೃತದೇಹವು ಕ್ರೇನ್‌ಗೆ ನೇಣುಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಆಕಾಶ್ ಪಾಟೀಲ್ ಅವರ ಮೃತದೇಹವು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ. ʼಇದು ಪೂರ್ವನಿಯೋಜಿತ ಕೊಲೆಯೋ ಅಥವಾ ಆತ್ಮಹತ್ಯೆಯೋʼ ಎಂಬ ಗೊಂದಲ ಹಾಗೂ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಆದರ್ಶನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Next Story




