Vijayapura | ಬೈಕ್ಗೆ ಲಾರಿ ಢಿಕ್ಕಿ : ದಂಪತಿ ಮೃತ್ಯು

ಗುರಲಿಂಗ ಹುನಶ್ಯಾಳ, ಅಂಬಿಕಾ
ವಿಜಯಪುರ: ಬೈಕ್ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಶಿಕ್ಷಕ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರವಿವಾರ ಸಂಜೆ ವಿಜಯಪುರ ನಗರದ ತೊರವಿ ಸಮೀಪ ಸಂಭವಿಸಿದೆ.
ಮೃತರನ್ನು ವಿಜಯಪುರ ತಾಲೂಕಿನ ಖತಿಜಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಜಿಪಿಟಿ ಶಿಕ್ಷಕಿ ಅಂಬಿಕಾ ಪೂಜೇರಿ (34) ಹಾಗೂ ವಿಜಯಪುರದ ಚಾಣಕ್ಯ ಕರಿಯರ್ ಅಕಾಡೆಮಿಯ ಶಿಕ್ಷಕರಾದ ಗುರಲಿಂಗ ಹುನಶ್ಯಾಳ (37) ಎಂದು ಗುರುತಿಸಲಾಗಿದೆ. ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ.
ತಿಕೋಟಾದಲ್ಲಿ ಸಂಬಂಧಿಕರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜಯಪುರಕ್ಕೆ ಮರಳುತ್ತಿದ್ದ ವೇಳೆ, ಅತಿವೇಗವಾಗಿ ಬಂದ ಲಾರಿಯೊಂದು ಬೈಕ್ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story




