Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. Vijayapura | ಕೆಪಿಎಸ್‌ಸಿ ಪರೀಕ್ಷೆಗೆ...

Vijayapura | ಕೆಪಿಎಸ್‌ಸಿ ಪರೀಕ್ಷೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ : 20 ಪರೀಕ್ಷಾ ಕೇಂದ್ರ, 8,117 ಅಭ್ಯರ್ಥಿಗಳು

ವಾರ್ತಾಭಾರತಿವಾರ್ತಾಭಾರತಿ13 Nov 2026 10:49 PM IST
share
Vijayapura | ಕೆಪಿಎಸ್‌ಸಿ ಪರೀಕ್ಷೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ : 20 ಪರೀಕ್ಷಾ ಕೇಂದ್ರ, 8,117 ಅಭ್ಯರ್ಥಿಗಳು

ವಿಜಯಪುರ : ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ನ.15ರಂದು ನಡೆಯಲಿರುವ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಪೂರ್ವಭಾವಿ ಪರೀಕ್ಷೆಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಯಾವುದೇ ಲೋಪದೋಷಗಳಿಲ್ಲದೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ್. ಕೆ. ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ 8,117 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕೆಪಿಎಸ್‌ಸಿ ನಿಗದಿಪಡಿಸಿರುವ ಪರೀಕ್ಷಾ ಮಾರ್ಗಸೂಚಿಯಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರಶ್ನೆಪತ್ರಿಕೆಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಖಜಾನೆಯಲ್ಲಿ ಭದ್ರವಾಗಿ ಇರಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಸಾಗಿಸಲು ಎಂಟು ಮಾರ್ಗಗಳನ್ನು ಗುರುತಿಸಲಾಗಿದೆ ಎಂದರು.

ಪ್ರತಿ ಮಾರ್ಗಕ್ಕೂ ಮಾರ್ಗಾಧಿಕಾರಿಗಳನ್ನು ನೇಮಿಸಿ ಪೊಲೀಸ್ ಭದ್ರತೆಯೊಂದಿಗೆ ಪ್ರಶ್ನೆಪತ್ರಿಕೆಗಳನ್ನು ಸಾಗಿಸಲಾಗುವುದು. ಪರೀಕ್ಷೆ ಆರಂಭವಾಗುವ ಕನಿಷ್ಠ ಒಂದು ಗಂಟೆ ಮುಂಚಿತವಾಗಿ ಎಲ್ಲ ಕೇಂದ್ರಗಳಿಗೂ ಪ್ರಶ್ನೆಪತ್ರಿಕೆ ತಲುಪುವಂತೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಮುಖ್ಯ ಅಧೀಕ್ಷಕರು, ವೀಕ್ಷಕರು ಹಾಗೂ ಪ್ರಶ್ನೆಪತ್ರಿಕೆಗಳ ಉಸ್ತುವಾರಿಗಾಗಿ ಸಿಬ್ಬಂದಿ ನಿಯೋಜಿಸಲಾಗಿದೆ. ಇವರ ಸಮ್ಮುಖದಲ್ಲಿಯೇ ಪ್ರಶ್ನೆಪತ್ರಿಕೆಗಳನ್ನು ತೆರೆಯಲಾಗುವುದು. ಪ್ರತಿ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದ್ದು, ಪ್ರಶ್ನೆಪತ್ರಿಕೆ ತೆರೆಯುವ ಭದ್ರತಾ ಕೊಠಡಿಯಲ್ಲಿಯೂ ಸಿಸಿಟಿವಿ ವ್ಯವಸ್ಥೆ ಮಾಡಲಾಗಿದೆ. ಎಲ್ಲ ಕೇಂದ್ರಗಳ ದೃಶ್ಯಾವಳಿಗಳನ್ನು ನೇರ ವೆಬ್‌ಕಾಸ್ಟಿಂಗ್ ಮೂಲಕ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸ್ಥಾಪಿಸಿರುವ ಕೇಂದ್ರದಿಂದ ಮೇಲ್ವಿಚಾರಣೆ ಮಾಡಲಾಗುವುದು. ಪ್ರತಿ ನಾಲ್ಕು ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಣೆಗೆ ಓರ್ವ ವೀಕ್ಷಕರನ್ನು ನಿಯೋಜಿಸಲಾಗಿದೆ. ಗುರುವಾರ ಸಂಜೆ ನಡೆಸಿದ ಪ್ರಾಯೋಗಿಕ ಪರಿಶೀಲನೆಯಲ್ಲಿ ಎಲ್ಲ ಕೇಂದ್ರಗಳ ನೇರ ದೃಶ್ಯಾವಳಿಗಳು ಲಭ್ಯವಾಗಿರುವುದು ಖಚಿತವಾಗಿದೆ ಎಂದು ತಿಳಿಸಿದರು.

ಅಭ್ಯರ್ಥಿಗಳ ತಪಾಸಣೆಗಾಗಿ ಪ್ರತಿ ಕೇಂದ್ರದಲ್ಲಿ ಪ್ರತ್ಯೇಕ ತಂಡ ಹಾಗೂ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ. ತಪಾಸಣೆ ಬಳಿಕ ಮುಖ ಗುರುತಿಸುವ ವ್ಯವಸ್ಥೆಯ ಮೂಲಕ ಅಭ್ಯರ್ಥಿಗಳ ಹಾಜರಾತಿ ದೃಢಪಡಿಸಲಾಗುತ್ತದೆ. ಪರೀಕ್ಷಾ ಪ್ರವೇಶ ಪತ್ರ, ಗುರುತಿನ ಚೀಟಿ ಮತ್ತು ಪೆನ್ ಹೊರತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು ಪರೀಕ್ಷಾ ಕೊಠಡಿಗೆ ಕೊಂಡೊಯ್ಯಲು ಅವಕಾಶವಿರುವುದಿಲ್ಲ. ಬ್ಯಾಗ್, ಮೊಬೈಲ್, ಪುಸ್ತಕ ಸೇರಿದಂತೆ ಇತರೆ ವಸ್ತುಗಳನ್ನು ಪ್ರಿಸ್ಕಿಂಗ್ ತಪಾಸಣಾ ಸ್ಥಳದ ಹೊರಗಡೆಯೇ ಇರಿಸಬೇಕು. ಪ್ರಿಸ್ಕಿಂಗ್ ನಂತರ ಯಾವುದೇ ವಸ್ತುಗಳನ್ನು ಒಳಗೆ ತೆಗೆದುಕೊಂಡು ಹೋಗಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಇಬ್ಬರು ಪರೀಕ್ಷಾ ಮೇಲ್ವಿಚಾರಕರನ್ನು ನಿಯೋಜಿಸಲಾಗಿದ್ದು, ಒಬ್ಬರು ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ವಿತರಣೆ ಹಾಗೂ ಸಂಗ್ರಹಣೆ ಕಾರ್ಯ ನಿರ್ವಹಿಸಲಿದ್ದಾರೆ ಎಂದರು.

ಜಾಮರ್ ಅಳವಡಿಕೆ:

ಪ್ರತಿ ಕೊಠಡಿಯಲ್ಲಿ ಜಾಮರ್ ಅಳವಡಿಸಲಾಗಿದ್ದು,ಅವುಗಳ ಕಾರ್ಯನಿರ್ವಹಣೆ ಪರಿಶೀಲಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಡಿಸಿ ಆನಂದ ಹೇಳಿದರು.

ಒಎಂಆರ್ ಉತ್ತರ ಪತ್ರಿಕೆಯಲ್ಲಿ ಐದನೇ ಆಯ್ಕೆಯಾಗಿ ಉತ್ತರ ಗೊತ್ತಿಲ್ಲ ಎಂಬ ಶೇಡ್ ಪರಿಚಯಿಸಲಾಗಿದೆ. ಅಭ್ಯರ್ಥಿಗಳು ಉತ್ತರ ತಿಳಿದಿಲ್ಲದ ಪ್ರಶ್ನೆಗಳಿಗೆ ಈ ಆಯ್ಕೆಯನ್ನು ಗುರುತಿಸಬಹುದು. ಪರೀಕ್ಷೆ ಮುಗಿದ ಬಳಿಕ ಇದಕ್ಕಾಗಿ ಐದು ನಿಮಿಷ ಹೆಚ್ಚುವರಿ ಸಮಯ ನೀಡಲಾಗುತ್ತದೆ. ಒಎಂಆರ್ ಹಾಳೆಯ ಮೂರು ಪ್ರತಿಗಳ ವ್ಯವಸ್ಥೆ ಮಾಡಲಾಗಿದ್ದು, ಮೂಲ ಪ್ರತಿಯನ್ನು ತಕ್ಷಣವೇ ಸ್ಕ್ಯಾನ್ ಮಾಡಲು ವ್ಯವಸ್ಥೆ ಮಾಡಲಾಗಿದೆ.

ಬೆಳಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಹಾಗೂ ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ಎರಡು ಅಧಿವೇಶನಗಳಲ್ಲಿ ಪರೀಕ್ಷೆ ನಡೆಯಲಿದೆ. ಪ್ರತಿ ಅಧಿವೇಶನದ ಒಎಂಆರ್ ಹಾಳೆಗಳನ್ನು ಜಿಪಂ ಕಚೇರಿಯ ಸ್ಕ್ಯಾನಿಂಗ್ ಕೇಂದ್ರದಲ್ಲಿ ಸ್ಕ್ಯಾನ್ ಮಾಡಿ, ವೆಬ್ ಸೈಟ್ ಕೆಪಿಎಸ್ಸಿ ಮೂಲಕ ಪ್ರಕಟಿಸಲಾಗುವುದು ಎಂದರು.

ಧಾರ್ಮಿಕ ಉಡುಪು ಧರಿಸುವವರು ಎರಡೂವರೆ ಗಂಟೆ ಮುಂಚಿತವಾಗಿ ಹಾಜರಾಗಿ :

ಧಾರ್ಮಿಕ ಉಡುಪು ಧರಿಸಿ ಬರುವ ಅಭ್ಯರ್ಥಿಗಳು ಪರೀಕ್ಷೆ ಆರಂಭವಾಗುವ ಎರಡೂವರೆ ಗಂಟೆ ಮುಂಚಿತವಾಗಿ ಕೇಂದ್ರಕ್ಕೆ ಹಾಜರಾಗಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅವರ ತಪಾಸಣೆಗಾಗಿ ಪ್ರತ್ಯೇಕ ಉಡುಪು ಪರಿಶೀಲನಾ ಅಧಿಕಾರಿಗಳನ್ನು ನೇಮಿಸಲಾಗಿದೆ. ಆರೋಗ್ಯ ಇಲಾಖೆಯ ವತಿಯಿಂದ ಇಎನ್‌ಟಿ ತಜ್ಞರನ್ನು ಪ್ರತಿ ಕೇಂದ್ರದಲ್ಲಿಯೂ ನಿಯೋಜಿಸಲಾಗಿದೆ ಎಂದರು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಕಲಂ 163ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ವ್ಯಾಪ್ತಿಯಲ್ಲಿರುವ ಸೈಬರ್ ಕೆಫೆ ಹಾಗೂ ಜೆರಾಕ್ಸ್ ಅಂಗಡಿ, ಕೋಚಿಂಗ್ ಸೆಂಟರ್ ತೆರೆಯದಂತೆ ಸೂಚಿಸಲಾಗಿದೆ. ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿಗೆ ಈಗಾಗಲೇ ಎರಡು ಹಂತಗಳಲ್ಲಿ ತರಬೇತಿ ನೀಡಲಾಗಿದ್ದು, ಬೆಂಗಳೂರಿನಲ್ಲಿ ತರಬೇತಿ ಪಡೆದ ಇಬ್ಬರು ಮಾಸ್ಟರ್ ತರಬೇತುದಾರರು ಜಿಲ್ಲಾಮಟ್ಟದ ಸಿಬ್ಬಂದಿಗೆ ತರಬೇತಿ ನೀಡಿದ್ದಾರೆ. ಈಗಾಗಲೇ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದು ಅವರು ಹೇಳಿದರು.

Tags

Vijayapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X